ಸ್ಯಾಂಡಲ್‌ವುಡ್‌ನ ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಡಾನ್ ಎಂ.ಪಿ.ಜಯರಾಜ್ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಸಿನಿಮಾದ ದೃಶ್ಯವೊಂದರಲ್ಲಿ ವೀರಗಾಸೆಯನ್ನು ತೋರಿಸಲಾಗಿದೆ. ಈಗ ವೀರಗಾಸೆಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಡಾಲಿ ಧನಂಜಯ್ ಬೆಂಬಲಕ್ಕೆ ಚಿತ್ರ ಸಾಹಿತಿ ಕವಿರಾಜ್ ನಿಂತಿದ್ದಾರೆ.
ಸ್ಯಾಂಡಲ್‌ವುಡ್‌ನ ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಡಾನ್ ಎಂ.ಪಿ.ಜಯರಾಜ್ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಸಿನಿಮಾದ ದೃಶ್ಯವೊಂದರಲ್ಲಿ ವೀರಗಾಸೆಯನ್ನು ತೋರಿಸಲಾಗಿದೆ. ಈಗ ವೀರಗಾಸೆಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಡಾಲಿ ಧನಂಜಯ್ ಬೆಂಬಲಕ್ಕೆ ಚಿತ್ರ ಸಾಹಿತಿ ಕವಿರಾಜ್ ನಿಂತಿದ್ದಾರೆ. ಈ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಚಿತ್ರ ಸಾಹಿತಿ ಕವಿರಾಜ್, ಯಶ್, ರಿಷಭ್ ಶೆಟ್ಟಿ ಅವರಂತೆ ಡಾಲಿ ಧನಂಜಯ್ ಕೂಡಾ ಇಡೀ ಸಿನಿಮಾ ಉದ್ಯಮಕ್ಕೆ ತಿರುವು ಕೊಡಬಲ್ಲ ತುಡಿತ ಮತ್ತು ಸಾಮರ್ಥ್ಯವಿರುವ ಕ್ರಿಯಾಶೀಲ, ಸೃಜನಶೀಲ ಯುವ ನಟ. ಈಗಾಗಲೇ ಉದ್ಯಮಕ್ಕೆ ಕಾಲಿಡುವ ಹೊಸ ಪ್ರತಿಭೆಗಳಿಗೆ ತಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಕ್ಕೆ ಅವಕಾಶ ನೀಡುವ ಹೆಜ್ಜೆಯಿಟ್ಟಿದ್ದಾರೆ.
ಇದೀಗ ಪ್ರದರ್ಶನಗೊಳ್ಳುತ್ತಿರುವ ಅವರ ಹೆಡ್ ಬುಷ್ ಚಿತ್ರವು ಉತ್ತಮವಾಗಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಒಂದು ಕಲೆ. ನಿರ್ದೇಶಕನ ಸೃಜನಶೀಲ ಅಭಿವ್ಯಕ್ತಿಯ ಮಾಧ್ಯಮ. ಬಣ , ಪಂಥಗಳ ಆಧಾರದ ದ್ವೇಷದಲ್ಲಿ ಭಾವನೆಗೆ ಧಕ್ಕೆ ಎಂಬ ಹುಸಿ ಆರೋಪದಡಿ ಸಿನಿಮಾವನ್ನು ವಿರೋಧಿಸುವುದು ತಪ್ಪು. ಜನರಲ್ ಆಗಿ, ಗೈಡ್ ಲೈನ್ಸ್ ಅನುಸಾರ ಅಸಮ್ಮತ ವಿಚಾರಗಳನ್ನು ಸಿನಿಮಾದಲ್ಲಿ ಸೇರಿಸದಂತೆ ತಡೆಯಲು ಸರ್ಕಾರವೇ ನೇಮಿಸಿರುವ ಸೆನ್ಸಾರ್ ಮಂಡಳಿ ಇದೆ. ವೀರಗಾಸೆ ಕುಣಿತದವರ ಮಾರುವೇಷದಲ್ಲಿ ಬಂದವರನ್ನು ಥಳಿಸುವ ದೃಶ್ಯಗಳ ಕುರಿತು ಧನಂಜಯ್ ಅವರ ವಿವರಣೆಯು ಸಮಂಜಸವಾಗಿದೆ.
ಹೆಡ್‌ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ, 'ಮರು ಚಿಂತನೆ ನಡೆಸಿ' ಎಂದ ಸಂಸ್ಕೃತಿ ಸಚಿವ!
ಯಾವುದೋ ಪರಭಾಷಾ ಹಾಡಿನ ಟ್ಯೂನಿಗೆ ಹೋಲಿಕೆ ಇರುವ ಕಾರಣಕ್ಕೆ ಕಾಂತಾರ ಚಿತ್ರದ ಹಾಡಿಗೆ ಅಪಪ್ರಚಾರ ಮಾಡುತ್ತಿರುವವರಿಗೂ ಇದೇ ಮಾತು ಅನ್ವಯಿಸುತ್ತೆ. ಆ ಹಾಡುಗಳಲ್ಲಿ ಕೆಲವು ಸಾಮ್ಯತೆ ಇರಬಹುದೇ ಹೊರತು, ಇದು ಅದರ ನಕಲು ಖಂಡಿತಾ ಅಲ್ಲ ಎಂಬುದು ಎರಡು ದಶಕಕ್ಕೂ ಹೆಚ್ಚು ಕಾಲ ಗೀತರಚನೆಯ ಅನುಭವವಿರುವ ನನ್ನ ಖಚಿತ ನಿಲುವು. ಧನಂಜಯ್ ಕನ್ನಡ ಚಿತ್ರರಂಗದ ಆಸ್ತಿ. ಧನಂಜಯ್ ಸೂಕ್ಷ್ಮ ಸಂವೇದನೆಯುಳ್ಳ ವಿಚಾರಶೀಲ ,ಕಲಾ ಪ್ರೇಮಿ. ಅವರಿಂದ ಯಾವ ಕಲೆಗೂ ಅಪಚಾರ ಆಗಿಲ್ಲ ,ಆಗುವುದಿಲ್ಲ ಎಂಬ ನಂಬಿಕೆ ನಮಗಿದೆ. ಅವರ ಮತ್ತು ಹೆಡ್ ಬುಷ್ ನಿರ್ದೇಶಕರ ಸೃಜನಶೀಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಸದಾ ಬೆಂಬಲಿಸುತ್ತೇನೆ. ಎಂದು ಡಾಲಿ ಧನಂಯ್ ಪರ ಬ್ಯಾಟ್ ಬೀಸಿದ್ದಾರೆ.
ಹೆಡ್ ಬುಷ್ 1970 ಮತ್ತು 80 ರ ದಶಕದಲ್ಲಿ ಬೆಂಗಳೂರು ಭೂಗತ ಜಗತ್ತಿನ ಕುರಿತು ಅಗ್ನಿ ಶ್ರೀಧರ್ ಬರೆದ ದಾದಾಗಿರಿಯ ದಿನಗಳು (ಮೈ ಡೇಸ್ ಇನ್ ದಿ ಅಂಡರ್‌ವರ್ಲ್ಡ್) ಪುಸ್ತಕವನ್ನು ಆಧರಿಸಿದ ಚಿತ್ರವಾಗಿದೆ. ಚಿತ್ರದ ಕೆಲವು ದೃಶ್ಯಗಳು ಮತ್ತು ಕೆಲವು ಜಾನಪದ ಕಲಾ ಪ್ರಕಾರಗಳ ಪ್ರಾತಿನಿಧ್ಯದ ಬಗ್ಗೆ ಪ್ರೇಕ್ಷಕರ ಒಂದು ವರ್ಗ ಆಕ್ಷೇಪಣೆಯನ್ನು ಎತ್ತಿದರೆ, ಮತ್ತೊಬ್ಬರು ನಾಯಕ ನಟ ಧನಂಜಯ ಅವರ ರಾಜಕೀಯ ದೃಷ್ಟಿಕೋನಗಳಿಗೆ ಚಲನಚಿತ್ರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ವಾದ ಮಾಡಿದ್ದಾರೆ. ಧನಂಜಯ ಅವರು ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳದಿದ್ದರೂ ಪ್ರಗತಿಪರ ನಿಲುವುಗಳಿಗೆ ಹೆಸರುವಾಸಿಯಾಗಿದ್ದಾರೆ.
Heabush ನನಗೆ ಈ ರೀತಿ ಯಾಕಾಗುತ್ತಿದೆ? ಚಿತ್ರರಂಗದಲ್ಲಿ ನಾನಿರುವುದೇ ಇಷ್ಟ ಇಲ್ವಾ: ಧನಂಜಯ್
ಇನ್ನು ಕೆಲವು ಬಲಪಂಥೀಯ ಗುಂಪುಗಳು ಜಾನಪದ ಕಲಾ ಪ್ರಕಾರ 'ವೀರಗಾಸೆ' ಯನ್ನು ಚಿತ್ರಿಸಿರುವ ರೀತಿ ಸರಿಯಲ್ಲ. ಚಲನಚಿತ್ರವನ್ನು ಬಹಿಷ್ಕರಿಸಬೇಕು ಎಂದು ಸಾಮಾಜಿಕ ಮಾಧ್ಯಮ ಅಭಿಯಾನವನ್ನು ಪ್ರಾರಂಭಿಸಿದವು. ಬೆಂಗಳೂರಿನಲ್ಲಿ ಆಚರಿಸಲಾಗುವ ಪ್ರಸಿದ್ಧ ವಾರ್ಷಿಕ ಉತ್ಸವವಾದ ಕರಗ ಉತ್ಸವದ ಚಿತ್ರಣದ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಸಲ್ಲಿಸುವುದಾಗಿ ಕರಗ ಉತ್ಸವ ಸಮಿತಿಯ ಪ್ರತಿನಿಧಿಗಳು ತಿಳಿಸಿದ್ದಾರೆ. ಕೆಲವು ದೃಶ್ಯಗಳನ್ನು ಕಟ್ ಮಾಡಿ ಸಿನಿಮಾವನ್ನು ಮರು ಬಿಡುಗಡೆ ಮಾಡಬೇಕೆಂಬ ಬೇಡಿಕೆಯೂ ಬಂದಿದೆ.
