ಸ್ಯಾಂಡಲ್‌ವುಡ್‌ ರಿಯಲ್​ ಸ್ಟಾರ್ ನಟ​ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡುವ ಮೂಲಕ ನಟ ಉಪೇಂದ್ರನಿಗೆ ಬಿಗ್‌ ರಿಲೀಫ್‌ ಕೊಟ್ಟಿದೆ.

ಬೆಂಗಳೂರು (ಆ.14): ಸ್ಯಾಂಡಲ್‌ವುಡ್‌ ರಿಯಲ್​ ಸ್ಟಾರ್ ನಟ​ ಉಪೇಂದ್ರ ವಿರುದ್ಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಾತಿ ನಿಂದನೆ ಆರೋಪದಡಿ ಪೊಲೀಸರು ದಾಖಲಿಸಿಕೊಂಡಿದ್ದ ಎಫ್ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯನ್ನು ನೀಡಿದೆ. ಈ ಮೂಲಕ ನಟ ಉಪೇಂದ್ರನಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚಕಟ್ಟು ಪೊಲೀಸ್‌ ಠಾಣೆಯ ಪ್ರಕರಣದ ತನಿಖೆಗೆ ಮಾತ್ರ ಮಧ್ಯಂತರ ತಡೆಯಾಜ್ಞೆಯನ್ನು ಕೊಡಲಾಗಿದೆ. ಆದರೆಮ ಹಲಸೂರು ಗೇಟ್‌ ಹಾಗೂ ಹನುಮಂತನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ದೂರಿಗೆ ತಡೆಯಾಜ್ಞೆಯನ್ನು ಕೊಟ್ಟಿಲ್ಲ. ಈ ಎರಡು ಎಫ್‌ಐಆರ್‌ಗೆ ಸಂಬಂಧಿಸಿದಂತೆಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಎಫ್‌ಐಆರ್‌ ಅಡಿಯಲ್ಲಿ ತನಿಖೆ ಮಾಡದಂತೆ ಮನವಿ ಸಲ್ಲಿಸಬೇಕಿದೆ. ಇನ್ನು ಒಂದು ಎಫ್‌ಐಆರ್‌ಗೆ ಮಾತ್ರ ರಿಲೀಫ್‌ ಸಿಕ್ಕಿದ್ದು, ನಟ ಉಪೇಂದ್ರ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಬಗ್ಗೆ ಕುತೂಹಲ ಮೂಡಿದೆ.

ಪೊಲೀಸರ ಕೈಗೂ ಸಿಗದೇ ಹೈಕೋರ್ಟ್‌ ಮೊರೆ ಹೋದ 'ಬುದ್ಧಿವಂತ': FIR ರದ್ದತಿಗೆ ಅರ್ಜಿ ಸಲ್ಲಿಸಿದ ಉಪೇಂದ್ರ

ಪೊಲೀಸರ ಕೈಗೆ ಸಿಗದೇ ಕೋರ್ಟ್‌ ಮೊರೆ ಹೋಗಿದ್ದ ಉಪೇಂದ್ರ: ಸಾಮಾಜಿಕ ಜಾಲತಾಣದ ಲೈವ್‌ ಕಾರ್ಯಕ್ರಮದಲ್ಲಿ ಗಾದೆ ಮಾತನ್ನು ಉಲ್ಲೇಖ ಮಾಡಿದ್ದಕ್ಕೆ ಜಾತಿನಿಂದನೆ ಆಗಿದೆಯೆಂದು ಎಫ್ಐಆರ್ ರದ್ದು ಕೋರಿ ನಟ ಉಪೇಂದ್ರ ಹೈಕೋರ್ಟ್‌ಗೆ ಮನವಿ ಸಲ್ಲಿಕೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಉದಯ್‌ ಹೊಳ್ಳ ಅವರು ಈ ಪ್ರಕರಣವನ್ನು ಇಂದೇ ವಿಚಾರಣೆ ನಡೆಸುವಂತೆ ಮೆಮೋ ಮೂಲಕ ಮನವಿ ಮಾಡಿದ್ದರು. ಮನವಿ ಮೇರೆಗೆ ಹೈಕೋರ್ಟ್‌ನ ನ್ಯಾ.ಹೇಮಂತ್ ಚಂದನ್‌ಗೌಡರ್ ಅವರು ಕೆಲವೇ ಕ್ಷಣಗಳಲ್ಲಿ ವಿಚಾರಣೆ ಕೈಗೆತ್ತಿಕೊಂಡಿದ್ದರು. ಇದಾದ ನಂತರ, ವಕೀಲರ ವಾದವನ್ನು ಆಲಿಸಿದ ನ್ಯಾಯಾಲಯವು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಅಡಿ ತನಿಖೆ ಮಾಡದಂತೆ ಮಧ್ಯಂತರ ತಡೆಯಾಜ್ಞೆಯನ್ನು ಹೊರಡಿಸಿದೆ.

ಕೇವಲ ಗಾದೆ ಮಾತಿನ ಉಲ್ಲೇಖ, ಕೆಟ್ಟ ಉದ್ದೇಶ ಇಲ್ಲ: ಇನ್ನು ಹೈಕೋರ್ಟ್‌ನಲ್ಲಿ ಹಿರಿಯ ವಕೀಲ ಉದಯ್ ಹೊಳ್ಳ ಅವರು ವಾದ ಮಂಡಿಸುವಾಗ ನಟ ಉಪೇಂದ್ರ ಮಾತನಾಡಿದ್ದ ಉದ್ದೇಶದ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಉಪೇಂದ್ರ ಅವರು ಕೇವಲ ಗಾದೆ ಮಾತನ್ನ ಉಲ್ಲೇಖ ಮಾಡಿದ್ದಾರೆ. ಅದರಲ್ಲಿ ಯಾವುದೇ ಕೆಟ್ಟ ಉದ್ದೇಶ ಇರಲಿಲ್ಲ. ಈ ಬಗ್ಗೆ ಕ್ಷಮೆ ಯಾಚನೆ ಕೂಡ ಮಾಡಿದ್ದಾರೆ. ಇದೀಗ ಎಫ್ಐಆರ್ ದಾಖಲಿಸಿ ತನಿಖೆ ಮಾಡುತ್ತಿರುವುದು ಸರಿಯಲ್ಲ.. ಹೀಗಾಗಿ ಪ್ರಕರಣದ ತನಿಖೆಗೆ ತಡೆ ನೀಡುವಂತೆ ಮನವಿ ಮಾಡಿದ್ದರು. ವಕೀಲರು ಹಾಗೂ ಕಕ್ಷಿದಾರ ಉಪೇಂದ್ರ ಮನವಿಯನ್ನು ಪುರಸ್ಕರಿಸಿದ ನ್ಯಾ.ಹೇಮಂತ್ ಚಂದನ್‌ ಗೌಡರ್ ಅವರ‌ ಪೀಠವು ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ. ಈ ಮೂಲಕ ಉಪೇಂದ್ರನಿಗೆ ಬಿಗ್ ರಿಲೀಫ್‌ ಸಿಕ್ಕಂತಾಗಿದೆ. 

'ಊರು ಎಂದ್ಮೇಲೆ ಹೊಲೆಗೇರಿ ಇರುತ್ತೆ' ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿದ ಬುದ್ಧಿವಂತ ಉಪೇಂದ್ರ

ಉಪೇಂದ್ರ ಮಾತನಾಡಿದ ವೀಡಿಯೋದಲ್ಲೇನಿದೆ? 
"ಇನ್ನೋಸೆಂಟ್‌ ಹೃದಯಗಳಿಂದಲೇ ನಿಜವಾದ ಬದಲಾವಣೆ ಸಾಧ್ಯ. ಇನ್ನೋಸೆಂಟ್‌ ಅಂದರೆ ಮುಗ್ಧತೆ ಇದೆಯಲ್ಲಾ ಅದೇ ಸತ್ಯದ ಮನಸ್ಸು. ಇನ್ನೋಸೆಂಟ್‌ ಮನಸ್ಸುಗಳು ಇಲ್ಲಿ ಜಾಯಿನ್‌ ಆಗಲಿ ಮಾತನಾಡಲಿ, ಹೇಳುವುದಕ್ಕೆ ಇಷ್ಟಪಡ್ತೀನಿ. ಅವರಿಂದ ನಮಗೆ ತುಂಬಾ ಬೆನಿಫಿಟ್‌ ಇದೆ, ಸಜೆಷನ್‌ ಕೂಡ ಉತ್ತಮವಾಗಿರುತ್ತದೆ. ಏನೋ ಒಂದು ಕೇರ್‌ಲೆಸ್‌ ಆಗಿ ಏನೋ ಒಂದು ಸಜೆಸ್ಟ್‌ ಮಾಡೋಣ, ಕೇರ್‌ಲೆಸ್‌ ಆಗಿ ಅವಹೇಳನ ಮಾಡುವುದಾಗಲಿ, ಏನೋ ನಾವು ಮಾತನಾಡಬೇಕು ಟೈಮ್‌ ಇದೆ ಎಂದು ಬಾಯಿಗೆ ಬಂದಂತೆ ಕಮೆಂಟ್‌ ಮಾಡೋಣ ಎನ್ನುವವರೂ ಇದ್ದಾರೆ. ಅಂತಹವರನ್ನ ಬಿಡಿ, ಅವರನ್ನು ಏನೂ ಮಾಡೋಕೆ ಆಗಲ್ಲ. 'ಊರು ಎಂದಮೇಲೆ ಹೊಲೆಗೇರಿ ಇರುತ್ತೆ', ಆ ತರಹ ಇಂಥವರೂ ಇರುತ್ತಾರೆ ಜಗತ್ತಲ್ಲಿ ಏನೂ ಮಾಡೋಕಾಗಲ್ಲ. ಅವರನ್ನೆಲ್ಲಾ ಬಿಟ್ಟಾಕೋಣ ಅದನ್ನು ಓದೋದು ಬೇಡ ನಾವು. ಸ್ವಲ್ಪ ನಾವು ಹೇಳ್ತಿರೋದು ಇಂಥ ಒಂದು ಪ್ಯೂರ್‌ ಜನರನ್ನ ಪ್ರೀತಿಸೋವಂಥದ್ದು, ಜನರನ್ನು ಪ್ರೀತಿಸುವುದೇ ಜನಾರ್ಧನನ ಪೂಜೆ ಎನ್ನುತ್ತಾರೆ. ಜನರನ್ನು ಪ್ರೀತಿಸುವುದೇ ದೇಶಪ್ರೇಮ ಎನ್ನುತ್ತಾರೆ" ಎಂದು ಮಾತನಾಡಿದ್ದರು.