ಹೊಸ ವರ್ಷ ಬಂದಾಗಿದೆ. ಗೋಡೆ ಮೇಲಿನ ಕ್ಯಾಲೆಂಡರ್ ಬದಲಾಗಿದೆ. ಸಡಗರ, ಸಂಭ್ರಮ ಮನೆ ಮಾಡಿದೆ. ಒಬ್ಬೊಬ್ಬರು ಒಂದೊಂದು ರೀತಿ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಕಿಚ್ಚ ಸುದೀಪ್ ದೇವಸ್ಥಾನಕ್ಕೆ ಹೋಗುವ ಮೂಲಕ ಹೊಸ ವರ್ಷವನ್ನು ಬರ ಮಾಡಿಕೊಂಡಿದ್ದಾರೆ.
ಬೆಂಗಳೂರು (j. 01): ಎಲ್ಲರ ಮನೆ ಕ್ಯಾಲೆಂಡರ್ ಬದಲಾಗಿದೆ. 2018 ನ್ನು ಭಾವಪೂರ್ಣವಾಗಿ ಕಳುಹಿಸಿ ಕೊಟ್ಟಾಗಿದೆ. ಹೊಸ ವರ್ಷವನ್ನು ಪ್ರೀತಿಯಿಂದ ಬರಮಾಡಿಕೊಂಡಿದ್ದೇವೆ. ಎಲ್ಲರೂ ಒಳ್ಳೊಳ್ಳೆ ಕೆಲಸಗಳನ್ನು ಮಾಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.
ಕಿಚ್ಚ ಸುದೀಪ್ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿ ಆಶೀರ್ವಾದ ಪಡೆದು ಹೊಸ ವರ್ಷವನ್ನು ಶುರು ಮಾಡಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಹೊಸ ವರ್ಷದ ಶುಭಾಶಯ ತಿಳಿಸಿರುವ ಕಿಚ್ಚ ಸುದೀಪ್, ಕುಟುಂಬದವರಿಗೆ, ಸ್ನೇಹಿತರಿಗೆ, ಮಾಧ್ಯಮದವರಿಗೆ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.
ಹೊಸ ವರ್ಷ ಸೆಲಬ್ರೇಶನ್ ಮೂಡ್ ನಲ್ಲಿ ಅಕ್ಕ-ಪಕ್ಕದವರಿಗೆ, ಪ್ರಕೃತಿಗೆ ಹಾನಿಯಾಗದಂತೆ ಕಾಳಜಿ ವಹಿಸಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಶುಭ ಕೋರಿದ್ದಾರೆ.
