ರೊರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಭರಾಟೆ’ ಸ್ಯಾಂಡಲ್ ವುಡ್ ಮಂದಿಗೆ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿದೆ. ಇನ್ನು ಶ್ರೀ ಮುರಳಿಗೆ ನಾಯಕಿಯಾಗಿ ಕ್ಯೂಟ್ ಬಾರ್ಬಿ ಡಾಲ್ ಶ್ರೀಲೀಲಾ ಅಭಿನಯಿಸುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಭರಾಟೆ ಚಿತ್ರದ ಟೈಟಲ್ ಹಾಡೊಂದರ ಶೂಟಿಂಗ್ ನಡೆದಿದ್ದು ಅದರಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಹೆಜ್ಜೆ ಹಾಕಿದ್ದರು. ಈಗ ಬಿಗ್ ಬಾಸ್ ಸ್ಪರ್ಧಿ ಸ್ಮೈಲಿಂಗ್ ಗರ್ಲ್ ಕೃಷಿ ತಾಪಂಡ ಹೆಜ್ಜೆ ಹಾಕುವುದರ ಜೊತೆಗೆ ಕೆಲವೊಂದು ಚಿತ್ರದ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಇದರ ಬಗ್ಗೆ ಸ್ವತಃ ಕೃಷಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಚಿತ್ರದ ಮತ್ತೊಂದು ವಿಶೇಷ ಅಂದರೆ ಇದರಲ್ಲಿ 10 ಖ್ಯಾತ ಖಳನಟರು ಕಾಣಿಸಿಕೊಂಡಿದ್ದಾರೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದು ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.