ವಾರೆಂಟ್  ಹಿನ್ನೆಲೆಯಲ್ಲಿ ತಡರಾತ್ರಿ ಆರೋಪಿಯನ್ನು ಬಂಧಿಸಲು ಹೋದಾಗ ನಟ ದುನಿಯಾ ವಿಜಯ್ ಆರೋಪಿ ಮನೆಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದರು. ಅಲ್ಲದೆ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪ ಕೂಡ ದಾಖಲಾಗಿತ್ತು. 

ಬೆಂಗಳೂರು[ಮೇ.31]: ನಟ ದುನಿಯಾ ವಿಜಯ್'ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಆರೋಪಿಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಕಾರಣಕ್ಕಾಗಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒಂದೂವರೆ ವರ್ಷದ ಹಿಂದೆ ಮಾಸ್ತಿಗುಡಿ ಚಿತ್ರದ ಚಿತ್ರೀಕರಣ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಮುಳುಗಿ ಅನಿಲ್ ಹಾಗೂ ಉದಯ್ ಎಂಬ ಇಬ್ಬರು ನಟರು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಪ್ರಕರಣದ ಆರೋಪಿ ಸುಂದರ್ ಪಿ ಗೌಡ ವಿರುದ್ಧ ರಾಮನಗರ ಜೆಎಂಎಫ್ ಸಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿತ್ತು.

ವಾರೆಂಟ್ ಹಿನ್ನೆಲೆಯಲ್ಲಿ ತಡರಾತ್ರಿ ಆರೋಪಿಯನ್ನು ಬಂಧಿಸಲು ಹೋದಾಗ ನಟ ದುನಿಯಾ ವಿಜಯ್ ಆರೋಪಿ ಮನೆಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದರು. ಅಲ್ಲದೆ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪ ಕೂಡ ದಾಖಲಾಗಿತ್ತು. ಈ ಹಿನ್ನಲೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353 ಅಡಿ ಎಫ್ಐಆರ್ ದಾಖಲಾಗಿದೆ.