ಪವರ್ ಸ್ಟಾರ್ ಹೇರ್ ಸ್ಟೈಲ್’ಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷರ ಆಕ್ಷೇಪ

First Published 11, Mar 2018, 3:13 PM IST
Oppose To Power Star Hair Style
Highlights

ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿರುದ್ಧ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು : ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿರುದ್ಧ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಕಾರಣವಾಗಿದ್ದು, ನಟ ಪುನೀತ್ ರಾಜಕುಮಾರ್ ಅವರು ತಮ್ಮ ಹೊಸಚಿತ್ರಕ್ಕಾಗಿ ಹೇರ್ ಸ್ಟೈಲ್​ನಲ್ಲಿ ಬದಲಾವಣೆ ಮಾಡಿರುವುದೇ ಆಗಿದೆ.

ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ಹೊಸ ಚಿತ್ರಕ್ಕಾಗಿ ಪುನೀತ್ ಈ ರೀತಿಯ ಹೊಸ ಕೇಶ ವಿನ್ಯಾಸ ಮಾಡಿಸಿದ್ದಾರೆ. ಆದರೆ ಪುನೀತ್ ರಾಜಕುಮಾರ್ ಅವರಿಗೆ ಇದು ಬೇಕಿರಲಿಲ್ಲ ಎಂದು ರಮೇಶ್ ಗೌಡ ಬಹಿರಂಗವಾಗಿಯೇ ಹೇಳಿದ್ದಾರೆ.

ಏಕೆಂದರೆ ನಾವು ಪುನೀತ್​ರಲ್ಲಿ ಡಾ. ರಾಜಕುಮಾರ್ ಅವರನ್ನ ಕಾಣುತ್ತಿದ್ದೇವೆ. ಅವರು ಸರಳವಾಗಿಯೇ ತಮ್ಮ ಚಿತ್ರಗಳಲ್ಲಿ ಕಾಣಿಸಿಕೊಂಡು ಜನಸಾಮಾನ್ಯರಿಗೆ, ಸಮಾಜಕ್ಕೆ ಒಳ್ಳೆಯ ಸಂದೇಶ ಕೊಟ್ಟಿದ್ದಾರೆ. ಆದರೆ ಚಿತ್ರ ಗೆಲ್ಲುವುದಕ್ಕೆ ಇಂತಹ ಗಿಮಿಕ್ ಬೇಕಿಲ್ಲ ಎಂದು ತಮ್ಮ ಕಾಮೆಂಟ್​ನಲ್ಲಿ ತಿಳಿಸಿದ್ದಾರೆ.

 

loader