ದೇಶಾದ್ಯಂತ  ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಂಜಯ್ ಲೀಲಾ ಬನ್ಸಾಲಿ ಚಿತ್ರ ‘ಪದ್ಮಾವತಿ’ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅಭಿನಯದ  ಚಿತ್ರ

ಮುಂಬೈ: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಂಜಯ್ ಲೀಲಾ ಬನ್ಸಾಲಿ ಚಿತ್ರ ‘ಪದ್ಮಾವತಿ’ಯು ಜ.25ಕ್ಕೆ ಬಿಡುಗಡೆಯಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ವಾರ ಚಿತ್ರದ ಹೆಸರನ್ನು ಬದಲಾಯಿಸಬೇಕೆಂದು ಸೆನ್ಸಾರ್ ಮಂಡಳಿಯು ಸೂಚಿಸಿತ್ತು, ಇದೀಗ ಚಿತ್ರ ಬಿಡುಗಡೆಗೆ ಹಸಿರು ನಿಶಾನೆ ತೋರಿದೆ.

16ನೇ ಶತಮಾನದ ಮಲಿಕ್ ಮುಹ್ಮದ್ ಜಯಸಿ ಅವರ 'ಪದ್ಮಾವತ್' ಎಂಬ ಮಹಾ ಕಾವ್ಯವನ್ನು ಆಧಾರವನ್ನಾಗಿಟ್ಟುಕೊಂಡು, 150 ಕೋಟಿ ರೂ. ವೆಚ್ಚದಲ್ಲಿ ಚಿತ್ರವನ್ನು ಮಾಡಲಾಗಿದೆ, ಎಂದು ಸಂಸದೀಯ ಸಮಿತಿ ಮುಂದೆ ಹಾಜರಾಗಿದ್ದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಹೇಳಿದ್ದರು.

'ಸತಿ' ಪದ್ಧತಿಯನ್ನು ವೈಭವೀಕರಣಗೊಳಿಸದಂತೆ ಹಾಗೂ 'ಘೂಮರ್' ಗೀತೆಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಲು ಮಂಡಳಿ ಸಲಹೆ ನೀಡಿತ್ತು. 

ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅಭಿನಯದ ಈ ಚಿತ್ರದಲ್ಲಿ ರಾಣಿ ಪದ್ಮಾವತಿಯನ್ನು ಅವಮಾನಿಸಲಾಗಿದೆ, ಎಂದು ಆರೋಪಿಸಿ ದೇಶದ ಎಲ್ಲೆಡೆ ಪ್ರತಿಭಟನೆಗಳು ನಡೆದಿದ್ದು, ಚಿತ್ರ ಬಿಡುಗಡೆಗೆ ತಡೆಯಾಜ್ಞೆ ಕೂಡಾ ತರಲಾಗಿತ್ತು.