ರಜಪೂತ ರಾಣಿ ಪದ್ಮಾವತಿ ಪಾತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದು, ನಾಯಕನ ಪಾತ್ರದಲ್ಲಿ ಶಾಹೀದ್ ಕಪೂರ್ ಹಾಗೂ ಖಳನಾಯಕನ ಗೆಟಪ್'ನಲ್ಲಿ ರಣವೀರ್ ಸಿಂಗ್ ಮಿಂಚಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 'ಪದ್ಮಾವತಿ' ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಐತಿಹಾಸಿಕ ಕತೆಯನ್ನಾಧರಿಸಿದ ಸಿನೆಮಾ ಇದಾಗಿದ್ದು, ರಣವೀರ್ ಸಿಂಗ್, ಶಾಹೀದ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ರಜಪೂತ ರಾಣಿ ಪದ್ಮಾವತಿ ಪಾತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದು, ನಾಯಕನ ಪಾತ್ರದಲ್ಲಿ ಶಾಹೀದ್ ಕಪೂರ್ ಹಾಗೂ ಖಳನಾಯಕನ ಗೆಟಪ್'ನಲ್ಲಿ ರಣವೀರ್ ಸಿಂಗ್ ಮಿಂಚಿದ್ದಾರೆ.

ಟ್ರೈಲರ್ ಬಿಡುಗಡೆಯಾಗಿ ಒಂದು ಗಂಟೆ ಕಳೆಯುವಷ್ಟರಲ್ಲೇ ಲಕ್ಷಾಂತರ ಮಂದಿ ಟ್ರೈಲರ್ ವೀಕ್ಷಿಸಿದ್ದಾರೆ. ಡಿಸೆಂಬರ್ 1ರಂದು ಪದ್ಮಾವತಿ ತೆರೆಗೆ ಅಪ್ಪಳಿಸಲಿದ್ದು, ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದೆ..