ಸಂಕ್ರಾಂತಿ ಹಬ್ಬಕ್ಕೆ ಒಂದು ಕಡೆ ರಾಜಕಾರಣದಲ್ಲಿ ತೀವ್ರ ಬೆಳವಣಿಗೆಗಳು ನಡೆಯುತ್ತಿದ್ದರೆ ಇತ್ತ ಸ್ಯಾಂಡಲ್‌ವುಡ್‌ನಿಂದ ಒಂದು ಸಿಹಿ ಸುದ್ದಿ ಸಿಕ್ಕಿದೆ. ಅದರಲ್ಲೂ ವಿಶೇಷವಾಗಿ ಕಿಚ್ಚ ಸುದೀಪ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಬೆಂಗಳೂರು[ಜ. 15] ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಪೈಲ್ವಾನ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆಯಾಗುತ್ತಿದ್ದಂತೆ ಅಭಿಮಾನಿಗಳು ಮೆಚ್ಚಿಕೊಂಡಿದ್ದು ಯು ಟ್ಯೂಬ್‌ನಲ್ಲಿ ಹವಾ ಎಬ್ಬಿಸಿದೆ.

ಬಾಲಿವುಡ್‌ ಸ್ಟಾರ್‌ಗಳು ಕಿಚ್ಚ ಸುದೀಪ್‌ಗೆ ತಮ್ಮ ಸಂದೇಶ ಕಳಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಅವರ ಇವತ್ತಿನ ಆಟವನ್ನು ಹೋಲಿಕೆ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 80 ಲಕ್ಷಕ್ಕೂ ಅಧಿಕ ವೀವ್ಸ್ ಪಡೆದುಕೊಂಡಿದೆ.

ದರ್ಶನ್‌ಗಾಗಿ ಸಿನಿಮಾವನ್ನೇ ಕೈ ಬಿಟ್ರು ಕಿಚ್ಚ ಸುದೀಪ್

ಸಂಪೂರ್ಣವಾಗಿ ಡಿಫರೆಂಟ್‌ ಲುಕ್‌ನಲ್ಲಿ ಕಿಚ್ಚ ಕಾಣಿಸಿಕೊಂಡಿದ್ದಾರೆ. ಕಿಚ್ಚ ಅವರ ಎಂಟ್ರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಸುದೀಪ್ ಸಹ ತಮ್ಮ ಸಂಭ್ರಮವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.