ಪಾಕ್ ನಲ್ಲಿ ಬಾಲಿವುಡ್ ಚಿತ್ರಗಳಿಗೆ ತಾತ್ಕಾಲಿಕ ನಿಷೇಧ

Pakistan imposes temporary ban on screening of Indian films
Highlights

ರಂಜಾನ್ ಹಬ್ಬದ ಪ್ರಯುಕ್ತ ಬಾಲಿವುಡ್ ಚಿತ್ರಗಳಿಗೆ ಪಾಕಿಸ್ತಾನ ತಾತ್ಕಾಲಿಕ ನಿಷೇಧ ಹೇರಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಪಾಕಿಸ್ತಾನ ಮಾಹಿತಿ ಮತ್ತು ಪ್ರಸಾರ ಇಲಾಖೆ, ರಂಜಾನ್ ಹಬ್ಬ ಮುಗಿಯುವವರೆಗೂ ಬಾಲಿವುಡ್ ಚಿತ್ರಗಳ ಪ್ರದರ್ಶನಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇಸ್ಲಾಮಾಬಾದ್ (ಮೇ. 25): ರಂಜಾನ್ ಹಬ್ಬದ ಪ್ರಯುಕ್ತ ಬಾಲಿವುಡ್ ಚಿತ್ರಗಳಿಗೆ ಪಾಕಿಸ್ತಾನ ತಾತ್ಕಾಲಿಕ ನಿಷೇಧ ಹೇರಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಪಾಕಿಸ್ತಾನ ಮಾಹಿತಿ ಮತ್ತು ಪ್ರಸಾರ ಇಲಾಖೆ, ರಂಜಾನ್ ಹಬ್ಬ ಮುಗಿಯುವವರೆಗೂ ಬಾಲಿವುಡ್ ಚಿತ್ರಗಳ ಪ್ರದರ್ಶನಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಪಾಕಿಸ್ತಾನ ಚಿತ್ರ ವಿತರಕ ಸಂಘದ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಕೇವಲ ಬಾಲಿವುಡ್ ಮಾತ್ರವಲ್ಲದೇ ಹಾಲಿವುಡ್ ಸಿನಿಮಾ ಪ್ರದರ್ಶನಕ್ಕೂ ಅನುಮತಿ ನಿರಾಕರಿಸಲಾಗಿದೆ. ಹಬ್ಬದ ಪ್ರಯುಕ್ತ ರಜೆ ಇರುವುದರಿಂದ ಈ ಸಂದರ್ಭ ಬಳಸಿಕೊಂಡು ಪಾಕಿಸ್ತಾನದ ಚಿತ್ರಗಳಿಗೆ ಮಾರುಕಟ್ಟೆ ಒದಗಿಸುವ ಮೂಲಕ ಚಿತ್ರರಂಗದ ಬೆಳವಣಿಗೆಗೆ ಸರ್ಕಾರ ಮುಂದಾಗಿದೆ.

ಪಾಕಿಸ್ತಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಬಾಲಿವುಡ್ ಮತ್ತು ಹಾಲಿವುಡ್ ಚಿತ್ರಗಳ ಹಾವಳಿ ಹೆಚ್ಚಾಗಿದ್ದು, ದೇಶೀಯ ಸಿನಿಮಾ ಮಾರುಕಟ್ಟೆಗೆ ಭಾರೀ ಹೊಡೆತ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಜಾ ದಿನ ಗಮನದಲ್ಲಿರಿಸಿ ಬಾಲಿವುಡ್ ಮತ್ತು ಹಾಲಿವುಡ್ ಸಿನಿಮಾ ಪ್ರದರ್ಶನಕ್ಕೆ ನಿಷೇಧ ಹೇರಲಾಗಿದೆ.

loader