Mandodari Kajal Aggarwal: ‘ರಾಮಾಯಣ’ ಚಿತ್ರದಲ್ಲಿ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡರೆ, ಪ್ಯಾನ್ ಇಂಡಿಯಾ ನಟಿ ಕಾಜಲ್ ಅಗರ್ವಾಲ್ ರಾವಣನ ಪತ್ನಿ ಮಂಡೋದರಿಯ ಪಾತ್ರವನ್ನು ನಿರ್ವಹಿಸಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಹಾಗೂ ‘ರಾಮಾಯಣ’ ಸಿನಿಮಾಗಳು ಈ ವರ್ಷ ಕೆಲವೇ ತಿಂಗಳ ಅಂತರದಲ್ಲಿ ಬಿಡುಗಡೆಯಾಗಲಿವೆ. ಈ ಎರಡೂ ಚಿತ್ರಗಳಲ್ಲಿ ಹಲವು ಖ್ಯಾತ ನಟ-ನಟಿಯರು ಅಭಿನಯಿಸಿದ್ದು, ಅವರಲ್ಲಿ ಅನೇಕರು ಯಶ್ ಅವರ ವೃತ್ತಿಪರತೆ ಹಾಗೂ ವ್ಯಕ್ತಿತ್ವವನ್ನು ಬಹಿರಂಗವಾಗಿ ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗೆ ಹುಮಾ ಖುರೇಷಿ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ ಸೇರಿದಂತೆ ಹಲವು ಕಲಾವಿದರು ಯಶ್ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದರೆ, ಇದೀಗ ಆ ಸಾಲಿಗೆ ನಟಿ ಕಾಜಲ್ ಅಗರ್ವಾಲ್ ಕೂಡ ಸೇರ್ಪಡೆಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ಯಾನ್ ಇಂಡಿಯಾ ನಟಿ ಕಾಜಲ್ ಅಗರ್ವಾಲ್ ಅವರು ‘ರಾಮಾಯಣ’ ಚಿತ್ರದಲ್ಲಿ ಯಶ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡರೆ, ಕಾಜಲ್ ಅಗರ್ವಾಲ್ ರಾವಣನ ಪತ್ನಿ ಮಂಡೋದರಿಯ ಪಾತ್ರವನ್ನು ನಿರ್ವಹಿಸಿದ್ದಾರೆ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಯಶ್ ಜೊತೆ ಕೆಲಸ ಮಾಡಿದ ಅನುಭವ ಹಾಗೂ ಚಿತ್ರದ ಬಗ್ಗೆ ಅವರು ಮನಮುಕ್ತವಾಗಿ ಮಾತನಾಡಿದ್ದಾರೆ.

‘ಯಶ್ ಅದ್ಭುತ ನಟ. ಅವರ ಕೆಲಸವನ್ನು ನಾನು ಯಾವಾಗಲೂ ಮೆಚ್ಚಿಕೊಂಡಿದ್ದೇನೆ. ‘ರಾಮಾಯಣ’ ಚಿತ್ರದ ಮೂಲಕ ಅವರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ಸಂತೋಷ ತಂದಿದೆ. ಈ ಸಿನಿಮಾಕ್ಕಾಗಿ ಅವರು ಸಂಪೂರ್ಣ ಸಮರ್ಪಣೆಯೊಂದಿಗೆ ಕೆಲಸ ಮಾಡಿದ್ದಾರೆ. ಅವರ ವೃತ್ತಿಪರತೆ, ಶಿಸ್ತು ಮತ್ತು ಸಹಜ ಪ್ರತಿಭೆ ನಿಜಕ್ಕೂ ಮೆಚ್ಚುವಂತದ್ದು. ಈ ಚಿತ್ರದಲ್ಲಿ ಕೆಲಸ ಮಾಡಿದ ಅನುಭವ ನಮ್ಮೆಲ್ಲರಿಗೂ ವಿಶೇಷವಾಗಿದೆ’ ಎಂದು ಕಾಜಲ್ ಅಗರ್ವಾಲ್ ಹೇಳಿದ್ದಾರೆ.

ನನ್ನ ಪಾತ್ರ ಸೀಮಿತ

ಇನ್ನು ಚಿತ್ರದ ಕುರಿತು ಮಾತನಾಡಿದ ಅವರು, ‘ನಾವು ಮೊದಲ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದೇವೆ. ಮೊದಲ ಭಾಗದಲ್ಲಿ ಲಂಕೆಯ ಕಥೆಗೆ ಹೆಚ್ಚು ಅವಕಾಶ ಇಲ್ಲದ ಕಾರಣ, ಮಂಡೋದರಿಯಾಗಿ ನನ್ನ ಪಾತ್ರ ಸೀಮಿತವಾಗಿದೆ. ಆದರೂ ಸಿನಿಮಾ ಅತ್ಯಂತ ಅದ್ಭುತವಾಗಿ ಮೂಡಿಬಂದಿದೆ. ಜಾಗತಿಕ ಮಟ್ಟದಲ್ಲಿ ಬಿಡುಗಡೆಯಾಗಲಿರುವ ಇಂತಹ ಮಹತ್ವಾಕಾಂಕ್ಷೆಯ ಚಿತ್ರದಲ್ಲಿ ಭಾಗವಾಗಿರುವುದು ನನ್ನ ಪಾಲಿಗೆ ಹೆಮ್ಮೆಯ ವಿಷಯ. ಈ ಅವಕಾಶಕ್ಕಾಗಿ ನಾನು ತುಂಬಾ ಕೃತಜ್ಞಳಾಗಿದ್ದೇನೆ’ ಎಂದು ಹೇಳಿದ್ದಾರೆ.