ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಟಾಲಿವುಡ್ ನಲ್ಲಿ ಸಾಲುಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಸ್ಟಾರ್ ನಟರ ಸಿನಿಮಾ ಲೀಸ್ಟ್ ನಲ್ಲಿ ರಶ್ಮಿಕಾ ಹೆಸರು ಕೇಳಿ ಬರುತ್ತದೆ. ಈಗ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಜೊತೆ ರಶ್ಮಿಕಾ ಹೆಸರು ಕೇಳಿ ಬಂದಿದೆ. 

ಮಹೇಶ್ ಬಾಬು ಜೊತೆ ನಟಿಸುತ್ತಾರೆ ಎನ್ನುವ ಸುದ್ದಿ ಆಗಾಗ ಕೇಳಿ ಬರುತ್ತಿತ್ತು. ಈ ಮಾತು ನಿಜ ಎನ್ನುತ್ತಿದೆ ಟಾಲಿವುಡ್ ಮೂಲಗಳು. ಮಹೇಶ್ ಬಾಬು ಮಹರ್ಷಿ ಸಿನಿಮಾದ ಸಕ್ಸಸ್ ನಲ್ಲಿದ್ದಾರೆ. ಇವರ 26 ನೇ ಸಿನಿಮಾ ಬಗ್ಗೆ ಚರ್ಚೆ ಶುರುವಾಗಿದೆ. 

ಮಹೇಶ್ ಬಾಬು 26 ನೇ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಾರೆ ಎಂಬ ಮಾತು ದಟ್ಟವಾಗಿ ಕೇಳಿ ಬರುತ್ತಿದೆ. ಈಗಾಗಲೇ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಇರುವುದರಿಂದ ಯಾವಾಗ ಸಿನಿಮಾ ಮಾಡುತ್ತಾರೆ ಎಂದು ಕಾದು ನೋಡಬೇಕಾಗಿದೆ.