ದ್ವಿಭಾಷಾ ತಾರೆ ರಶ್ಮಿಕಾ ಮಂದಣ್ಣ ಇದೀಗ ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಬಿಡುಗಡೆಗೆ ಕಾತುರಳಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾಳೆ. ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ನಿರ್ದೇಶಕ ಸಚಿನ್ ಹುಟ್ಟುಹಬ್ಬ ಪ್ರಯುಕ್ತ ಅವರಿಗೆ ಶುಭ ಹಾರೈಸಿದ ಸಂದರ್ಭದಲ್ಲಿ ಈ ಸಂಗತಿ ಹೇಳಿಕೊಂಡಿದ್ದಾರೆ.

‘ಅವನೇ ಶ್ರೀಮನ್ನಾರಾಯಣ’ ಬಹುಭಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರ ಪುಷ್ಕರ್ ಮಲ್ಲಿಕಾರ್ಜುನಯ್ಯ, ರಕ್ಷಿತ್ ಶೆಟ್ಟಿ ನಿರ್ಮಾಣದ ಚಿತ್ರ ಭಾರಿ ನಿರೀಕ್ಷೆ ಹುಟ್ಟು ಹಾಕಿದೆ. ಐದು ಭಾಷೆಗಳಲ್ಲಿ ಬೇರೆ ಬೇರೆ
ಹೆಸರಿನಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಚಿತ್ರೀಕರಣ ಆರಂಭವಾದಾಗಿನಿಂದಲೂ ರಕ್ಷಿತ್ ಶೆಟ್ಟಿ ಶ್ರೀಮನ್ನಾರಾಯಣನ ಗುಂಗಿನಲ್ಲೇ ಇದ್ದಾರೆ. ಇದೀಗ ರಶ್ಮಿಕಾ ಮಂದಣ್ಣ ಬಹುಳ ಅಪರೂಪಕ್ಕೆ ರಕ್ಷಿತ್ ಶೆಟ್ಟಿ ಟೀಮ್ನ ಸದಸ್ಯರೊಬ್ಬರಿಗೆ ಶುಭ ಹಾರೈಸಿದ್ದೂ ಅಲ್ಲದೇ ಚಿತ್ರಕಾಗಿ ಕಾಯುತ್ತೇನೆ ಎಂದು ಟ್ವೀಟ್ ಮಾಡಿರುವುದು ಚಿತ್ರ ಪ್ರೇಮಿಗಳ ಗಮನ ಸೆಳೆದಿದೆ.