ಆ.23 ಕ್ಕೆ ರಿಷಬ್ ಶೆಟ್ಟಿ ಸರ್ಕಾರಿ ಶಾಲೆ ಪ್ರಾರಂಭ ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಸಹಿಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಸಿನಿಮಾ ಆ. 23 ಕ್ಕೆ ತೆರೆ ಮೇಲೆ ಬರುತ್ತಿದೆ.

ಬೆಂಗಳೂರು (ಆ. 13): ರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಸಹಿಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಸಿನಿಮಾ ಆ.23 ಕ್ಕೆ ತೆರೆ ಮೇಲೆ ಬರುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಸರಗೋಡಿನ ಸರ್ಕಾರಿ ಶಾಲೆಯ ಸುತ್ತ ಸಾಗುವ ಈ ಚಿತ್ರದ ಹಾಡುಗಳು ಈಗಾಗಲೇ ಸಿಕ್ಕಾಪಟ್ಟೆ ಸೌಂಡು ಮಾಡುತ್ತಿದೆ. ಅನಂತ್‌ನಾಗ್ ಚಿತ್ರದ ಮುಖ್ಯ ಭೂಮಿಕೆಯಲ್ಲಿರುವುದು ಇಲ್ಲಿನ ಹೈಲೈಟ್. ‘ಕಿರಿಕ್ ಪಾರ್ಟಿ’ ನಂತರ
ಮತ್ತೊಂದು ಭರವಸೆಯ ಚಿತ್ರದ ಮೂಲಕ ರಿಷಬ್ ಶೆಟ್ಟಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ರಿಷಬ್ ಶೆಟ್ಟಿ ಫಿಲಮ್ಸ್ ಮೂಲಕ ನಿರ್ಮಾಪಕ ಜಯಣ್ಣ ವಿತರಣೆ ಮಾಡುತ್ತಿದ್ದಾರೆ. ಮೊದಲ ವಾರದಲ್ಲೇ 75 ರಿಂದ 100 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬರಲಿದೆ.