Yash WhatsApp DP: ಪ್ಯಾನ್ ಇಂಡಿಯಾ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಇದೇ ಆಗಸ್ಟ್ 26, 2026ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.

ಪ್ಯಾನ್ ಇಂಡಿಯಾ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಇದೇ ಆಗಸ್ಟ್ 26, 2026ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ 'ಲೇಡೀಸ್ & ಲೇಡೀಸ್' ಟೀಸರ್ ಹಾಗೂ 'ತಬಾಹಿ' ಹಾಡು ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿವೆ. ಹಾಡಿಗೆ ಸಿಕ್ಕಿರುವ ಮೆಚ್ಚುಗೆ ಮತ್ತು ಚರ್ಚೆಯ ನಡುವೆಯೇ ಈಗ ಮತ್ತೊಂದು ಸಣ್ಣ ವಿಚಾರ ಅಭಿಮಾನಿಗಳ ಗಮನ ಸೆಳೆದಿದೆ. ಅದೇ ಯಶ್ ಅವರ ವಾಟ್ಸ್‌ಆ್ಯಪ್ ಪ್ರೊಫೈಲ್ ಫೋಟೋ (DP).

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ತಬಾಹಿ' ಹಾಡಿನ ಮೀಟಿಂಗ್ ಫೋಟೋ ವೈರಲ್

'ತಬಾಹಿ' ಹಾಡಿಗೆ ಧ್ವನಿ ನೀಡಿರುವ ಮತ್ತು ಸಂಗೀತ ಸಂಯೋಜಿಸಿರುವ ಬಾಲಿವುಡ್ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ, ಹಾಡಿನ ಬಿಡುಗಡೆಯ ಬಳಿಕ ಚಿತ್ರತಂಡದೊಂದಿಗೆ ನಡೆದ ವಾಟ್ಸ್‌ಆ್ಯಪ್ ವಿಡಿಯೊ ಕಾಲ್‌ನ ಸ್ಕ್ರೀನ್‌ಶಾಟ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ನಿರ್ದೇಶಕಿ ಗೀತು ಮೋಹನ್ ದಾಸ್, ಸಾಹಿತಿ ಯೋಗರಾಜ್ ಭಟ್, ರಾಜ್ ಶೇಖರ್, ವಿಘ್ನೇಶ್ ಶಿವನ್, ರಾಮಜೋಗಯ್ಯ ಶಾಸ್ತ್ರಿ, ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಹಾಗೂ ನಟ ಯಶ್ ಕಾಣಿಸಿಕೊಂಡಿದ್ದಾರೆ.

ಯಶ್‌ DP ನೋಡಿ ಫ್ಯಾನ್ಸ್ ಫುಲ್ ಖುಷ್

ಈ ಸ್ಕ್ರೀನ್‌ಶಾಟ್‌ನಲ್ಲಿ ಅಭಿಮಾನಿಗಳ ಕಣ್ಣಿಗೆ ಬಿದ್ದಿದ್ದು ಯಶ್ ಅವರ ವಾಟ್ಸ್‌ಆ್ಯಪ್ ಡಿಪಿ. ಜೂಮ್ ಮಾಡಿ ನೋಡಿದ ಅಭಿಮಾನಿಗಳು, ಅದರಲ್ಲಿ ಬಂಡೆಯ ಮೇಲೆ ಗಂಭೀರವಾಗಿ ಕಣ್ಣು ಮುಚ್ಚಿಕೊಂಡು ಕುಳಿತಿರುವ ಸಿಂಹದ ಚಿತ್ರ ಇರುವುದನ್ನು ಗಮನಿಸಿದ್ದಾರೆ. ಸದ್ಯ ಇದೇ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, "ಸಿಂಹದಂತೆ ಶಾಂತ... ಆದರೆ ಸಮಯ ಬಂದಾಗ ಗರ್ಜನೆ ಖಚಿತ" ಎಂಬ ರೀತಿಯ ಕಾಮೆಂಟ್‌ಗಳೊಂದಿಗೆ ಯಶ್ ಅಭಿಮಾನಿಗಳು ಟ್ರೆಂಡ್ ಮಾಡುತ್ತಿದ್ದಾರೆ. ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ಇಲ್ಲದಿದ್ದರೂ, ಈ ಡಿಪಿಯೇ ಈಗ ಫ್ಯಾನ್ಸ್ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

'ತಬಾಹಿ' ಹಾಡು ಎಲ್ಲ ಭಾಷೆಗಳಲ್ಲೂ ಸದ್ದು

'ತಬಾಹಿ' ಹಾಡನ್ನು ವಿಶಾಲ್ ಮಿಶ್ರಾ ಹಾಡಿದ್ದು, ಸಂಗೀತ ಸಂಯೋಜನೆಯನ್ನೂ ಅವರೇ ಮಾಡಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿರುವ ಈ ಹಾಡು ಯೂಟ್ಯೂಬ್‌ನಲ್ಲಿ ಲಕ್ಷಾಂತರ ವೀಕ್ಷಣೆ ಪಡೆದು ಟ್ರೆಂಡಿಂಗ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಹಾಡಿಗೆ ಮೆಚ್ಚುಗೆಯ ಜೊತೆಗೆ ವಿಭಿನ್ನ ಅಭಿಪ್ರಾಯಗಳೂ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಚರ್ಚೆಯಾಗುತ್ತಿದೆ.

'ಟಾಕ್ಸಿಕ್' ಮೇಲೆ ಭಾರೀ ನಿರೀಕ್ಷೆ

ರಾಷ್ಟ್ರ ಪ್ರಶಸ್ತಿ ವಿಜೇತೆ ಗೀತು ಮೋಹನ್ ದಾಸ್ ನಿರ್ದೇಶಿಸಿರುವ 'ಟಾಕ್ಸಿಕ್' ಚಿತ್ರದಲ್ಲಿ ಯಶ್‌ಗೆ ಜೊತೆಯಾಗಿ ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ನಯನತಾರಾ ಸೇರಿದಂತೆ ಹಲವು ಖ್ಯಾತ ಕಲಾವಿದರು ನಟಿಸಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾ ನಂತರ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೆ ಡಬ್ ಆಗುತ್ತಿದೆ. ಇನ್ನು ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಿಸಿರುವ ಈ ಪ್ಯಾನ್-ವರ್ಲ್ಡ್ ಸಿನಿಮಾ ಆಗಸ್ಟ್ 26, 2026ರಂದು ವಿಶ್ವದಾದ್ಯಂತ ತೆರೆಗೆ ಬರಲಿದ್ದು, ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ.

Scroll to load tweet…