'ಸೂರ್ಯಕಾಂತಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ರೆಜಿನಾ ಕಸ್ಸಂದ್ರ 'ನಾನು ಚಿಕ್ಕವಯಸ್ಸಿನಲ್ಲಿಯೇ ಬ್ಲೂ ಫಿಲ್ಮ್‌ಗಳನ್ನು ನೋಡಿದ್ದೇನೆ' ಎಂದು ಬೋಲ್ಡ್ ಸ್ಟೇಟ್‌ಮೆಂಟ್‌ ಕೊಡುವ ಮೂಲಕ ಸುದ್ದಿಯಾಗಿದ್ದರು.

ಚಿಕ್ಕವಯಸ್ಸಿನಲ್ಲಿ ಈ ನಟಿ ಬ್ಲೂ ಫಿಲ್ಮ್ ನೋಡುತ್ತಿದ್ದರಂತೆ!

 

ಈಗ ಅದೇ ರಜಿನಾ ತನ್ನ ಬಾಯ್‌ಫ್ರೆಂಡ್‌ ಜೊತೆ ಸೀಕ್ರೆಟ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಮತ್ತೊಂದು ವದಂತಿ ಕೇಳಿ ಬರುತ್ತಿದೆ. ಟಾಲಿವುಡ್‌ ಹಾಗೂ ಕಾಲಿವುಡ್‌ನಲ್ಲಿ ಸಿಕ್ಕಾಪಟ್ಟೆ ಫೇಮಸ್ ಆದ ರೆಜಿನಾ ಚೆನೈನಲ್ಲಿ ಗುಪ್ತವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು ಮಾಧ್ಯಮದವರನ್ನು ಇದರಿಂದ ದೂರ ಇಡುವ ಸಲುವಾಗಿ ಈ ವಿಚಾರವನ್ನು ಮುಚ್ಚಿಡಲಾಗಿದೆ ಎನ್ನಲಾಗುತ್ತಿದೆ.

ಕೆಲ ದಿನಗಳ ಹಿಂದೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಜಿನಾಗೆ ಈ ವದಂತಿ ಬಗ್ಗೆ ಪತ್ರಕರ್ತನೊಬ್ಬ ಕೇಳಿದ ಪ್ರಶ್ನೆಗೆ 'ಇದೆಲ್ಲಾ ಎಲ್ಲಿಂದ ಕೇಳಿ ಬರುತ್ತಿದೆ ಎಂಬುವುದು ನನಗೆ ಗೊತ್ತಿಲ್ಲ, ಟಾಲಿವುಡ್‌ ಹಾಗೂ ಹಾಲಿವುಡ್‌ ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದೀನಿ' ಎಂದು ಹೇಳಿ ನುಣುಚಿಕೊಂಡಿದ್ದಾರೆ.