ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದೆ. ಡಾರ್ಲಿಂಗ್ ಕೃಷ್ಣ ಹಾಗೂ ನಟಿ ಮಿಲನ ಇದೇ ವರ್ಷ ಹಸೆಮಣೆ ಏರಲಿದ್ದಾರೆ.

ಲವ್ ಮಾಕ್ಟೈಲ್ ಸಿನಿಮಾ ಸಕ್ಸಸ್ ಮೀಟ್ ನಲ್ಲಿ ಪ್ರೀತಿ ಬಗ್ಗೆ  ಜೋಡಿ ಹೇಳಿಕೊಂಡಿತ್ತು. ನಾಲ್ಕು ವರ್ಷದಿಂದ ಪರಸ್ಪರ ಪ್ರೀತಿಸುತ್ತಿರುವುದಾಗಿ  ಕೃಷ್ಣ ಮತ್ತು ಮಿಲನ ತಿಳಿಸಿದ್ದರು.

ನಿಖಿಲ್ ಕುಮಾರಸ್ವಾಮಿ ಅದ್ದೂರಿ  ನಿಶ್ಚಿತಾರ್ಥ

ಇತ್ತೀಚೆಗೆ ಲವ್ ಮಾಕ್ಟೈಲ್ ನಲ್ಲಿ ಅಭಿನಯಿಸಿದ್ದ ಕೃಷ್ಣ ಹಾಗೂ ಮಿಲನ ಜೋಡಿ ಅಭಿಮಾನಿಗಳ ಮೆಚ್ಚುಗೆ ಪಡೆದುಕೊಂಡಿತ್ತು. ಈ ಹಿಂದೆಯೂ ಎರಡು ಚಿತ್ರದಲ್ಲಿ ಜೋಡಿಯಾಗಿ ಅಭಿನಯಿಸಿದ್ದರು. ಈ ವರ್ಷ ನಿಶ್ಚಿತಾರ್ಥ ಮಾಡಿಕೊಂಡು ವಿವಾಹ ಆಗಲಿದ್ದೇವೆ ಎಂದು ಹೇಳಿದ್ದಾರೆ. ನಮ್ಮ ಕಡೆಯಿಂದಲೂ ಹೊಸ ಜೋಡಿಗೆ ಅಭಿನಂದನೆ.