ಬೆಂಗಳೂರು[ಜೂ.08]: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ತಲೆ ಮರೆಸಿಕೊಂಡಿದ್ದ ನಟ ದುನಿಯಾ ವಿಜಿ ಅವರನ್ನು ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

’ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ಮೃತಪಟ್ಟಿದ್ದ ಇಬ್ಬರು ಕಲಾವಿದರ ಕುರಿತಂತೆ ನಿರ್ಮಾಪಕ ಸುಂದರ್ ಪಿ. ಗೌಡ ಅವರನ್ನು ಬಂಧಿಸಲು ಪೊಲೀಸರು ತೆರಳಿದ್ದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿ ನಿರ್ಮಾಪಕರು ತಪ್ಪಿಸಿಕೊಳ್ಳಲು ಸಹಕರಿಸಿದ್ದರು. ಈ ಹಿನ್ನಲೆಯಲ್ಲಿ ದುನಿಯಾ ವಿಜಯ್ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ ವಿಜಯ್ ತಲೆ ಮರೆಸಿಕೊಂಡಿದ್ದರು.  

ದುನಿಯಾ ವಿಜಯ್ ವಿರುದ್ಧ ಎಫ್’ಐಆರ್ ದಾಖಲಾಗಿತ್ತು. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ದುನಿಯಾ ವಿಜಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. ಕೊನೆಗೆ ದುನಿಯಾ ವಿಜಿಗಾಗಿ ವಿಶೇಷ ತಂಡ ರಚನೆ ಮಾಡಿದ್ದ ಪೋಲೀಸರು, ಮೊಬೈಲ್ ನೆಟ್ವರ್ಕ್ ಆಧರಿಸಿ ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ಕಲಾವಿದರಾದ ಉದಯ್ ಹಾಗೂ ಅನಿಲ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು.