Asianet Suvarna News Asianet Suvarna News

ಬಘೀರ ಚಿತ್ರೀಕರಣದ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿ ಕಾಲಿಗೆ ಪೆಟ್ಟು: ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್‌ನ ರೋರಿಂಗ್ ಸ್ಟಾರ್ ನಟ  ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದ್ದು, ಬಘೀರ ಚಿತ್ರದ ಚಿತ್ರೀಕರಣದ ವೇಳೆ ಈ ಅನಾಹುತವಾಗಿದೆ. ಹೌದು! ಶೂಟಿಂಗ್ ವೇಳೆ ಶ್ರೀಮುರಳಿ ಕಾಲಿಗೆ ತೀವ್ರ ಪೆಟ್ಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. 

sandalwood actor sri murali was injured during the shooting of the film bagheera gvd
Author
First Published Jan 12, 2023, 8:54 PM IST

ಸ್ಯಾಂಡಲ್‌ವುಡ್‌ನ ರೋರಿಂಗ್ ಸ್ಟಾರ್ ನಟ  ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದ್ದು, ಬಘೀರ ಚಿತ್ರದ ಚಿತ್ರೀಕರಣದ ವೇಳೆ ಈ ಅನಾಹುತವಾಗಿದೆ. ಹೌದು! ಶೂಟಿಂಗ್ ವೇಳೆ ಶ್ರೀಮುರಳಿ ಕಾಲಿಗೆ ತೀವ್ರ ಪೆಟ್ಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮದಗಜ ಸಿನಿಮಾದ ನಂತರ ಬಘೀರ ಚಿತ್ರದಲ್ಲಿ ನಟ ಶ್ರೀಮುರಳಿ ನಟಿಸುತ್ತಿದ್ದು, ರಾಕ್‌ಲೈನ್ ಸ್ಟುಡಿಯೋದಲ್ಲಿ ಹೊಂಬಾಳೆ ಸಂಸ್ಥೆ ನಿರ್ಮಾಣದ ಬಘೀರ ಚಿತ್ರದ ಫೈಟಿಂಗ್ ಸೀಕ್ವೆನ್ಸ್ ನಡೆಯುತ್ತಿತ್ತು. ಈ ವೇಳೆ ಶ್ರೀಮುರಳಿ ಕಾಲಿಗೆ ಗಂಭೀರ ಗಾಯವಾಗಿದೆ. 

ಇನ್ನು ಸೂರಿ ನಿರ್ದೇಶನದ ಈ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿತ್ತು. ಇನ್ನೆರೆಡು ದಿನಗಳಲ್ಲಿ ಚಿತ್ರೀಕರಣ ಮುಗಿಯುವುದಿತ್ತು. ಆದರೆ ಈ ವೇಳೆ ಶ್ರೀಮುರಳಿಗೆ ಪೆಟ್ಟಾಗಿದೆ. ಈ ಹಿಂದೆ ಮಹೇಶ್ ಕುಮಾರ್ ನಿರ್ದೇಶನದ ಮದಗಜ ಶೂಟಿಂಗ್ ವೇಳೆಯೂ ಶ್ರೀಮುರಳಿ ಅವರ ಎಡಗಾಲಿಗೆ ಪೆಟ್ಟಾಗಿತ್ತು. ಈಗ ಮತ್ತೆ ಅದೇ ಕಾಲಿಗೆ ಪೆಟ್ಟಾಗಿದ್ದು, ಈ ಸಂಬಂಧ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಮುರಳಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಘೀರ ಸಿನಿಮಾದ ಬಗ್ಗೆ ಹೇಳುವುದಾದರೆ ಈಗಾಗಲೇ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸಿನಿಮಾ ಅನೌನ್ಸ್ ಮಾಡುವ ಸಮಯದಲ್ಲಿ ಬಘೀರನ ಲುಕ್ ರಿವೀಲ್ ಆಗಿತ್ತು. ಪೋಸ್ಟರ್ ಶೇರ್ ಮಾಡಿ ಸಿನಿಮಾತಂಡ 'ಇಡೀ ಸಮಾಜವೇ ಅರಣ್ಯವಾದಾಗ ಒಬ್ಬನೇ ಒಬ್ಬ ಮಾತ್ರ ನ್ಯಾಯಕ್ಕಾಗಿ ಹೋರಾಡುತ್ತಾನೆ' ಎಂದು ಕ್ಯಾಪ್ಷನ್ ನೀಡಲಾಗಿತ್ತು. ಲುಕ್ ನೋಡಿದ್ರೆ ಶ್ರೀಮುರಳಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ಗೊತ್ತಾಗಿತ್ತು. ನಿರ್ದೇಶಕ ಪ್ರಶಾಂತ್ ನೀಲ್ ಬಘೀರ ಸಿನಿಮಾಗೆ ಚಿತ್ರಕಥೆ ಬರೆದಿದ್ದಾರೆ. ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿ ಈ ಚಿತ್ರ ನಿರ್ಮಾಣವಾಗಿದೆ.

Bagheera; ಶ್ರೀಮುರಳಿ ಹುಟ್ಟುಹಬ್ಬಕ್ಕೆ ಸಿಕ್ತು 'ಬಘೀರ' ಪೋಸ್ಟರ್ ಗಿಫ್ಟ್

ಅಂದಹಾಗೆ ಬಘೀರ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಉಗ್ರಂ ಸಿನಿಮಾ ಬಳಿಕ ಪ್ರಶಾಂತ್ ನೀಲ್ ಮತ್ತು ಶ್ರೀಮುರಳಿ ಕಾಂಬಿನೇಷನ್ ನಲ್ಲಿ ಬರ್ತಿರುವ ಸಿನಿಮಾ ಇದಾಗಿದೆ. ಅದರಲ್ಲೂ ಹೊಂಬಾಳೆ ಫಿಲ್ಮ್ಸ್ ಬಂಡಾಳ ಹೂಡುತ್ತಿದೆ ಎಂದರೆ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಚಿತ್ರಕ್ಕೆ ಡಾ. ಸೂರ್ ಆಕ್ಷನ್ ಹೇಳುತ್ತಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ರುಕ್ಮಿಣಿ ವಸಂತ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ರುಕ್ಮಿಣಿ, ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಕ್ಮಿಣಿ ಅವರ ಪೋಸ್ಟರ್ ವೈರಲ್ ಆಗಿತ್ತು. ಇದೀಗ ಬಘೀರ ಸಿನಿಮಾದಲ್ಲಿ ಕಾಣಿಸಿಕೊಳ್ಳುವ ಮೂಲಕ ಶ್ರೀಮುರಳಿ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದಾರೆ.

Follow Us:
Download App:
  • android
  • ios