ಖ್ಯಾತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದಲ್ಲಿ ಮೂಡಿ ಬರ್ತಾಯಿದೆ ಉದ್ಘರ್ಷ ಚಿತ್ರ | ವಿಭಿನ್ನವಾಗಿ ಮೂಡಿ ಬರಲಿದೆ ಉದ್ಘರ್ಷ | ಚಿತ್ರ ಪ್ರೇಮಿಗಳಿಗೆ ಖುಷಿ ನೀಡಲಿದ್ದಾರೆ ದೇಸಾಯಿ.
ಬೆಂಗಳೂರು (ಜ. 07): ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳ ಮಾಸ್ಟರ್ ಡೈರೆಕ್ಟರ್ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಬಹುನಿರೀಕ್ಷಿತ 'ಉದ್ಘರ್ಷ' ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ.
ಕನ್ನಡ, ತೆಲುಗು ಹಾಗೂ ತಮಿಳಿನಲ್ಲಿ ಉದ್ಘರ್ಷ ಚಿತ್ರ ತೆರೆ ಕಾಣಲಿದ್ದು, ತಮಿಳಿನಲ್ಲಿ 'ಉಚ್ಚಕಟ್ಟಮ್' ಅಂತ ಹೆಸರಿಡಲಾಗಿದೆ. ಇನ್ನು ಚಿತ್ರದ ಬಹುತೇಕ ಚಿತ್ರೀಕರಣ ಮಡಿಕೇರಿಯಲ್ಲಿ ನಡೆದಿದ್ದು, ಬೆಂಗಳೂರು, ಹೈದರಾಬಾದ್ ಹಾಗೂ ಕೇರಳದಲ್ಲೂ ಕೆಲ ದೃಶ್ಯಗಳ ಚಿತ್ರೀಕರಣವಾಗಿದೆ.
ವೈರಲ್ ಆಯಿತು ಉದ್ಘರ್ಷ ಫಸ್ಟ್‌ಲುಕ್; ಏನಿದೆ ಅಂತದ್ದು?ಇನ್ನು ಚಿತ್ರದಲ್ಲಿ ಸಿಂಗಂ-3 ಖ್ಯಾತಿಯ ಠಾಕೂರ್ ಅನೂಪ್ ಸಿಂಗ್ ನಾಯಕ ನಟರಾಗಿ ನಟಿಸಿದ್ದರೆ, ತಮಿಳಿನ ಕಬಾಲಿ ಖ್ಯಾತಿಯ ಧನ್ಸಿಕಾ ಹಾಗೂ ನವ ನಟಿ ತಾನ್ಯಾ ಹೋಪ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಅಲ್ಲದೇ ಬಾಲಿವುಡ್ ವಿಲನ್ ಕಬೀರ್ ಸಿಂಗ್ ದುಹಾನ್, ತೆಲುಗಿನ ಬಾಹುಬಲಿ ಖ್ಯಾತಿಯ ಪ್ರಭಾಕರ್, ಶ್ರವಣ್ ರಾಘವೇಂದ್ರ, ವಂಶಿ ಕೃಷ್ಣ, ಶ್ರದ್ಧಾ ದಾಸ್ ಮುಂತಾದವರು ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಬಹುಭಾಷಾ ತಾರೆ ಕನ್ನಡಿಗ ಕಿಶೋರ್ ಮತ್ತೊಂದು ಪ್ರಮುಖ ಹಾಗೂ ವಿಶಿಷ್ಟ ಪಾತ್ರದಲ್ಲಿ ನಟಿಸಿದ್ದರೆ, ಹರ್ಷಿಕಾ ಪೂಣಚ್ಚ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಸಿನಿಮಾದಲ್ಲಿ 25 ನಿಮಿಷ ಮಾತ್ರ ಡೈಲಾಗ್ ! ಉಳಿದಂತೆ ಸಿನಿಮಾ ಪೂರ್ತಿ ಸೈಲಂಟ್!ಚಿತ್ರಕ್ಕೆ ಪಿ ರಾಜನ್ ಹಾಗೂ ದಿವಂಗತ ವಿಷ್ಣುವರ್ಧನ್ ಅವರ ಕ್ಯಾಮರಾ ಕೆಲಸ ಮಾಡಿದ್ದರೆ, ಹಿಂದಿಯ ಖ್ಯಾತ ಸಂಗೀತ ನಿರ್ದೇಶಕ ಸಂಜೋಯ್ ಚೌಧುರಿ ಸಂಗೀತ ನೀಡಿದ್ದಾರೆ. ಇನ್ನು ಚಿತ್ರಕ್ಕೆ ನಿರ್ದೇಶಕ ದೇಸಾಯಿ ಅವರ ಸ್ನೇಹಿತ ಆರ್. ದೇವರಾಜ್ ನಿರ್ಮಾಣ ಮಾಡಿದ್ದು ರಾಜೇಂದ್ರ ಹಾಗೂ ಡಿ. ಮಂಜುನಾಥ್ ಸಹ ನಿರ್ಮಾಪಕರಾಗಿದ್ದಾರೆ. ಡಿ ಕ್ರಿಯೇಶನ್ಸ್ ಬ್ಯಾನರ್ ಅಡಿ ಚಿತ್ರ ಮೂಡಿ ಬಂದಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 7, 2019, 4:29 PM IST