Asianet Suvarna News Asianet Suvarna News

ಮುಚ್ಚಿ ಹೋಗಲಿದ್ದ ಕನ್ನಡ ಶಾಲೆ ದತ್ತು ಪಡೆದ ರಿಷಬ್ ಶೆಟ್ಟಿ

25  ಕೋಟಿ ಗಳಿಕೆ ಕಂಡ ಸಹಿಪ್ರಾ ಶಾಲೆ ಕಾಸರಗೋಡು | ಮುಚ್ಚಿಹೋಗಲಿದ್ದ ಕನ್ನಡ ಶಾಲೆಗೆ ಜೀವ ನೀಡಲು ನಿರ್ಧರಿಸಿದ ಚಿತ್ರತಂಡ | ಕೈರಂಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದ ರಿಷಬ್ ಶೆಟ್ಟಿ 

Sandalwood director Rishab Shetty adopted Kairam kannada school
Author
Bengaluru, First Published Oct 9, 2018, 11:41 AM IST

ಬೆಂಗಳೂರು (ಅ. 09): ಸಹಿಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ ಸಿನಿಮಾ ಚಿತ್ರೀಕರಣಗೊಂಡಿದ್ದು ಮಂಜೇಶ್ವರ ಮತ್ತು ಮಂಗಳೂರು ಮಧ್ಯ ಭಾಗದಲ್ಲಿರುವ ಕೈರಂಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.

ಈ ಕನ್ನಡ ಶಾಲೆ ಮುಚ್ಚುವ ಭೀತಿ ಎದುರಿಸುತ್ತಿತ್ತು. ಇದೀಗ ಆ ಶಾಲೆಯನ್ನು ರಿಷಬ್ ಶೆಟ್ಟಿ ದತ್ತು ಪಡೆದುಕೊಂಡಿದ್ದಾರೆ. ಮಾದರಿ ಶಾಲೆಯನ್ನಾಗಿ ರೂಪಿಸುವ ಕನಸು ಹೊತ್ತಿದ್ದಾರೆ. ರಿಷಬ್ ಶೆಟ್ಟಿ ಚಿತ್ರದ ಚಿತ್ರೀಕರಣ ನಡೆಸುತ್ತಿದ್ದ  ವೇಳೆಯಲ್ಲಿ 42 ಮಂದಿ ವಿದ್ಯಾರ್ಥಿಗಳಿದ್ದರು.

ಅಂಡಮಾನ್ -ನಿಕೋಬಾರ್‌ನಲ್ಲಿ ’ಸರ್ಕಾರಿ ಶಾಲೆ’ ತೆರೆದ ರಿಷಬ್ ಶೆಟ್ಟಿ!

ಆ ವರ್ಷ ಕೆಲವು ಮಂದಿ ಏಳನೇ ತರಗತಿ ಪಾಸಾಗಿ ಈಗ 25 ಮಂದಿ ವಿದ್ಯಾರ್ಥಿಗಳು ಉಳಿದುಕೊಂಡಿದ್ದರು. ವಿಪರ್ಯಾಸವೆಂದರೆ ಒಂದನೇ ತರಗತಿಗೆ ವಿದ್ಯಾರ್ಥಿಗಳನ್ನು ಅಡ್ಮಿಷನ್ ಮಾಡಿಕೊಳ್ಳುವುದನ್ನು ನಿಲ್ಲಿಸಲಾಗಿತ್ತು. ಬೇರೆ ದಾರಿಯೇ ಇಲ್ಲದೆ ಕೆಲವೇ ವರ್ಷಗಳಲ್ಲಿ ಈ ಶಾಲೆಯನ್ನು ಮುಚ್ಚಬೇಕಾಗುತ್ತಿತ್ತು. ಇಂಥಾ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ಚಿತ್ರ ವಿಮರ್ಶೆ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ತನ್ನ ಪ್ರೀತಿಯ ಶಾಲೆಯನ್ನು ಉಳಿಸಿಕೊಳ್ಳುವ ಮನಸ್ಸು ಮಾಡಿದ್ದಾರೆ. ಕನ್ನಡ ಶಾಲೆ ಉಳಿಸಿ ಆಂದೋಲನದ ರೂವಾರಿ ಅನಿಲ್ ಶೆಟ್ಟಿಯವರ ಜೊತೆಗೂಡಿ ರಿಷಬ್ ಈ ಶಾಲೆಯನ್ನು ವಿಭಿನ್ನ ರೂಪಿಸಲಿದ್ದಾರೆ. ಕನ್ನಡ ಶಾಲೆ ಉಳಿಸಿ ಆಂದೋಲನದ ಕಾರ್ಯಕರ್ತರು ಈಗಾಗಲೇ ಎರಡು ಕನ್ನಡ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದಾರೆ. ಮತ್ತೊಂದಷ್ಟು ಕನ್ನಡ ಶಾಲೆ ಉಳಿಸಲು ಪ್ರಯತ್ನ ಪಡುತ್ತಿದ್ದಾರೆ.  ಈ ಹಂತದಲ್ಲಿ ರಿಷಬ್ ಅವರ ಜೊತೆಯಾಗಿ ಮಾದರಿ ಕೆಲಸ ಮಾಡಿದ್ದಾರೆ. 

ಈ ಕುರಿತು ಮಾತನಾಡಿದ ರಿಷಬ್ ಶೆಟ್ಟಿ ಹೇಳಿದ ಮಾತುಗಳು ಇಲ್ಲಿವೆ

- ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ ಸಿಗಬೇಕು ಅನ್ನುವುದು ನನ್ನ ನಿಲುವು. ಅದಕ್ಕಾಗಿ ಕನ್ನಡ ಶಾಲೆ ಉಳಿಯಬೇಕು.
- ಚಿತ್ರೀಕರಣ ನಡೆಸುತ್ತಿದ್ದಾಗ 42 ಮಂದಿ ಇದ್ದರು. ಅವರನ್ನು ಚಿತ್ರದ ಹಾಡಿನಲ್ಲಿ ತೋರಿಸಿದ್ದೇವೆ. ಈಗ ಮಕ್ಕಳ ಸಂಖ್ಯೆ ಕಡಿಮೆಯಾಗಿ ಶಾಲೆ ಮುಚ್ಚುವ ಸ್ಥಿತಿ ಇದೆ.
- ನಾನು ಕನ್ನಡ ಶಾಲೆಯಲ್ಲಿ ಓದಿದವನು. ಅದರ ಜೊತೆಗೆ ಈ ಶಾಲೆ ನನ್ನ ಹೃದಯಕ್ಕೆ ತುಂಬಾ ಹತ್ತಿರವಾದ ಶಾಲೆ. ಹಾಗಾಗಿ ಈ ಶಾಲೆ ದತ್ತು ಪಡೆಯಲು ನಿರ್ಧರಿಸಿದ್ದೇನೆ.
- ಮತ್ತೆ ಈ ಶಾಲೆಯನ್ನು ಹೊಸತಾಗಿ ರೂಪಿಸುವ ಆಲೋಚನೆ ಇದೆ. ಪ್ರೀ ಸ್ಕೂಲ್ ಆರಂಭಿಸಬೇಕು. ಮಕ್ಕಳನ್ನು ಶಾಲೆಗೆ ಕರೆತರಲು ವಾಹನ ವ್ಯವಸ್ಥೆ ಮಾಡಿಸಬೇಕು.

-ಹೊಸ ಥರ ಪೇಂಟ್ ಮಾಡಿಸಿ ಕ್ರಿಯೇಟಿವ್ ಆಗಿ ರೂಪಿಸಬೇಕು.
- ಇದೆಲ್ಲಾ ಒಬ್ಬನಿಂದ ಆಗುವ ಕೆಲಸ ಅಲ್ಲ. ಈ ಶಾಲೆಯಲ್ಲಿ ಓದಿದವರೆಲ್ಲಾ ಮುಂದೆ ಬಂದರೆ ಚೆಂದ. ಈ ಶಾಲೆಯನ್ನು ಮಾದರಿಯಾಗಿ ಮಾಡಿದರೆ ಬೇರೆ ಊರಲ್ಲಿ ಬೇರೆಯವರು ಈ ಥರದ ಪ್ರಯತ್ನ ಮಾಡುತ್ತಾರೆ ಅನ್ನುವ ಆಸೆ
ನನ್ನದು.
- ಅ.18 ರಂದು ನಮ್ಮ ಚಿತ್ರತಂಡ ಆ ಶಾಲೆಯಲ್ಲಿ ನಡೆಯುವ ಶಾರದೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ.
- ಅವತ್ತು ಆ ಶಾಲೆಯ ಮಕ್ಕಳ ಪೋಷಕರಲ್ಲಿ ನೆರವು ನೀಡಲು ಕೇಳಿಕೊಳ್ಳುತ್ತೇನೆ. ಕನ್ನಡ ಶಾಲೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ. 

Follow Us:
Download App:
  • android
  • ios