ಬಿಗ್‌ಬಾಸ್ ವಿನ್ನರ್ ಪ್ರಥಮ್ ನಟನೆಯ ಮತ್ತೊಂದು ಸಿನಿಮಾ ತೆರೆಗೆ ಬರುತ್ತಿದೆ. ಚಿತ್ರದ ಹೆಸರು ‘ಎಂಎಲ್‌ಎ’.

ಮದರ್ ಪ್ರಾಮೀಸ್ ಲೆಕ್ಕಕ್ಕೆ ಸಿಗದ ಅಸಾಮಿ ಎನ್ನುವ ಅರ್ಥವನ್ನು ಒಳಗೊಂಡ ಈ ಸಿನಿಮಾ ತುಂಬಾ ರಾಜಕೀಯ ತುಂಬಿದೆ. ಅದು ಪ್ರಥಮ್‌ನ ನಿಜ ಜೀವನಕ್ಕೂ ಹತ್ತಿರ ಇರುವ ಕತೆ ಇಲ್ಲಿದೆಯಂತೆ. ತ್ರಿವೇಣಿ 24ಕ್ರಾಫ್ ಲಾಂಛನದಲ್ಲಿ ವೆಂಕಟೇಶ್ ರೆಡ್ಡಿ ಅವರು ನಿರ್ಮಿಸಿರುವ ಚಿತ್ರ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಜು ಮೌರ್ಯ ಕತೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಸ್ಪರ್ಶ ರೇಖಾ, ಕುರಿ ಪ್ರತಾಪ್, ರಾಜಶೇಖರ್, ನವೀನ್, ಚಂದ್ರಕಲಾ ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮಾಜಿ ಸಚಿವ ಎಚ್. ಎಂ.ರೇವಣ್ಣ ಶೇಷಪಾತ್ರದಲ್ಲಿ ಅಭಿನಯಿಸಿದ್ದಾರೆ. ವಿಕ್ರಂ ಸುಬ್ರಮಣ್ಯ ಸಂಗೀತ ನಿರ್ದೇಶನ ಇರುವ ಈ ಚಿತ್ರಕ್ಕೆ ಕೃಷ್ಣಸಾರಥಿ ಅವರ ಛಾಯಾಗ್ರಹಣವಿದೆ. ಕೆ.ಆರ್.ಲಿಂಗರಾಜು ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ದೇವಿಪ್ರಕಾಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.