ಬೆಂಗಳೂರು(ಡಿ.02): ಸ್ಯಾಂಡಲ್‌ವುಡ್ ಖ್ಯಾತ ನಿರ್ಮಾಪಕ ಎಸ್ ನಾಗರಾಜ ಶೆಟ್ಟಿ ವಿಧಿವಶರಾಗಿದ್ದಾರೆ.

ಪರಾಜಯ, ನಾಗರಹೊಳೆ, ನೂರುಜನ್ಮ, ಕೂಡಿಬಾಳಿದರೆ ಸ್ವರ್ಗ ಸುಖ ಹಾಗೂ ಶ್ರಾವಣ ಸಂಜೆದಂತ ಚಿತ್ರಗಳನ್ನು ನಿರ್ಮಿಸಿದ್ದ ನಾಗರಾಜ್ ಶೆಟ್ಟಿ, ಚಿತ್ರರಂಗದಲ್ಲಿ ನಿರ್ಮಾಪಕ, ಪ್ರದರ್ಶಕ ಹಾಗೂ ವಿತರಕರಾಗಿಯೂ ಸೇವೆ ಸಲ್ಲಿಸಿದ್ದರು.

ಚಿಕ್ಕಮಗಳೂರು ಮೂಲದವರಾದ ನಾಗರಾಜ ಶೆಟ್ಟಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇನ್ನು ಕನ್ನಡ ಚಿತ್ರರಂಗ ನಾಗರಾಜ ಶೆಟ್ಟಿ ನಿಧನಕ್ಕೆ ಕಂಬನಿ ಮಿಡಿದಿದ್ದು, ಅವರು ನಿರ್ಮಿಸಿದ ಚಿತ್ರಗಳಲ್ಲಿ ಅವರು ಯಾವಾಗಲೂ ಜೀವಂತವಾಗಿರುತ್ತಾರೆ ಎಂದು ಹೇಳಿದೆ.