ಸೀತಾರಾಮ ಸೀತಾ ಉರ್ಫ್ ವೈಷ್ಣವಿ ಗೌಡ ಅವರು ಅರಿಶಿಣ ಶಾಸ್ತ್ರಕ್ಕೂ ಮುನ್ನ ಕುಣಿದು ಕುಪ್ಪಳಿಸಿದ್ದು ಅದರ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.
ಸೀತಾರಾಮ ಸೀತೆಯ ಕಲ್ಯಾಣ ಸೀರಿಯಲ್ನಲ್ಲಿ ಮುಗಿದು, ಧಾರಾವಾಹಿಯನ್ನೂ ಮುಗಿದಿದ್ದರೂ, ರಿಯಲ್ ಲೈಫ್ನಲ್ಲಿ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಈಚೆಗಷ್ಟೇ ಸೀತಾ ಪಾತ್ರಧಾರಿ ನಟಿ ವೈಷ್ಣವಿ ಗೌಡ ಅವರು ಅದ್ಧೂರಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಮದ್ವೆ ಫಿಕ್ಸ್ ಆಗಿದ್ದ ವಿಷಯವನ್ನು ಗುಟ್ಟಾಗಿ ಇಟ್ಟಿದ್ದ ನಟಿ ಎಲ್ಲರಿಗೂ ಬಿಗ್ ಸರ್ಪ್ರೈಸ್ ಕೊಟ್ಟಿದ್ದರು. ವೈಷ್ಣವಿ ಗೌಡ ಅವರು ಅನುಕೂಲ್ ಮಿಶ್ರಾ ಎನ್ನುವವರ ಜೊತೆ ಎಂಗೇಜ್ ಆಗಿದ್ದಾರೆ. ಅನುಕೂಲ್ ಅವರು ಛತ್ತೀಸಗಢದವರು. ಏರ್‌ಫೋರ್ಸ್‌ನಲ್ಲಿ ಅನುಕೂಲ್ ಕೆಲಸ ಮಾಡುತ್ತಿದ್ದಾರೆ. ಅನುಕೂಲ್ ಅವರಿಂದಲೇ ವೈಷ್ಣವಿ ಈ ಬಾರಿ ಬೆಂಗಳೂರಿನಲ್ಲಿ ನಡೆದಿದ್ದ ಏರ್ ಷೋ ವೀಕ್ಷಣೆ ಮಾಡಿದ್ದರು. ಇದನ್ನೇ ಅವರು ಪರೋಕ್ಷವಾಗಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, “ಥ್ಯಾಂಕ್ಯು ಎ. ನಿಮ್ಮಿಂದಲೇ ಏರ್ ಷೋ ನೋಡೋದು ಸಾಧ್ಯ ಆಯ್ತು, ಇದೊಂದು ಅದ್ಭುತ ಅನುಭವ” ಎಂದು ಹೇಳಿದ್ದರು. ಆದರೆ, ಗುಟ್ಟನ್ನು ಮಾತ್ರ ಬಿಟ್ಟು ಕೊಟ್ಟಿರಲಿಲ್ಲ. ಕೊನೆಗೂ ಗುಟ್ಟನ್ನು ಅವರೇ ರಿವೀಲ್ ಮಾಡುವ ಜೊತೆಜೊತೆಗೇನೇ ಎಂಗೇಜ್ಮೆಂಟ್ ಕೂಡ ಮಾಡಿಕೊಂಡು ಬಿಗ್ ಸರ್ಪ್ರೈಸ್ ನೀಡಿದ್ದರು.
ಇದೀಗ ಎಲ್ಲವೂ ಮುಗಿದು ನಟಿ ವೈಷ್ಣವಿ ಗೌಡ (Vaishnavi Gowda) ವಧುವಾಗಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡಲು ಅಣಿಯಾಗಿದ್ದಾರೆ. ಸದ್ದಿಲ್ಲದೆ ಅವರ ಮದುವೆ ಶಾಸ್ತ್ರ ಶುರುವಾಗಿದೆ. ವೈಷ್ಣವಿ ಗೌಡ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಅರಿಶಿನ ಶಾಸ್ತ್ರ ಸಡಗರದಿಂದ ನಡೆದಿದೆ. ಮನೆಯವರ ಸಮ್ಮುಖದಲ್ಲಿ ವೈಷ್ಣವಿ ಮೈಗೆ ಅರಿಶಿಣದ ಸ್ಪರ್ಶವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವೈಷ್ಣವಿ ಗೌಡ ಶಾಸ್ತ್ರದ ವಿಡಿಯೋ ವೈರಲ್ ಆಗ್ತಿದೆ. ಸೀರೆಯುಟ್ಟು, ಕೊರಳಿಗೆ ಮಾಲೆ ಹಾಕಿ ಕುಳಿತಿರುವ ವೈಷ್ಣವಿ ಗೌಡಗೆ, ಕುಟುಂಬಸ್ಥರು ಅರಿಶಿಣ ಹಚ್ಚುತ್ತಿದ್ದಾರೆ. ಮನೆಯವರ ಜೊತೆ ಫೋಟೋಗಳಿಗೆ ವೈಷ್ಣವಿ ಫೋಸ್ ನೀಡಿದ್ದಾರೆ. ಆದರೆ ಅದಕ್ಕೂ ಮುನ್ನ ನಟಿ ಸಕತ್ ಸ್ಟೆಪ್ ಹಾಕಿದ್ದು, ಅದನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಇನ್ನೇನು ಬ್ಯಾಚುಲರ್ ಲೈಫ್ ಮುಗೀತು ಎಂದು ಕೊನೆಯ ಬಾರಿ ಖುಷಿಯಿಂದ ಸ್ಟೆಪ್ ಹಾಕಿದ್ದಾರೆ.
ಇನ್ನು ವೈಷ್ಣವಿ ಗೌಡ ಕುರಿತು ಹೇಳುವುದಾದರೆ, ಕನ್ನಡದ ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಇವರು ಪರಿಚಯವಿದ್ದರು. ಅಗ್ನಿಸಾಕ್ಷಿ ಸೀರಿಯಲ್‌ನ ಸನ್ನಿಧಿ ಮೂಲಕ ಸಕತ್ ಫೇಮಸ್ ಆಗಿದ್ದ ನಟಿ ಈಗ ಸೀತಾರಾಮದ ಸೀತೆಯಾಗಿ ಮನೆ ಮಾತಾಗಿದ್ದಾರೆ. ವೈಷ್ಣವಿ ಕನ್ನಡ ಕಿರುತೆರೆಲೋಕದ ಜನಪ್ರಿಯ ನಟಿ. ಅಷ್ಟೇ ಅಲ್ಲದೇ, ಹಲವು ಉತ್ಪನ್ನಗಳ ರಾಯಭಾರಿಯೂ ಹೌದು. ಜೀ ಕನ್ನಡದ `ದೇವಿ' ಸೀರಿಯಲ್‌ನಿಂದ ಇವರ ಕಿರುತೆರೆ ಪಯಣ ಆರಂಭವಾಯಿತು.ನಂತರ `ಪುನರ್‌ವಿವಾಹ'ದಲ್ಲಿ ನಟಿಸಿ `ಅಗ್ನಿಸಾಕ್ಷಿ' ಸೀರಿಯಲ್‌ನ ಸನ್ನಿಧಿಯಾಗಿ ಆಯ್ಕೆಗೊಂಡರು. ಈ ಪಾತ್ರದ ಮೂಲಕ ಅಪಾರ ಜನಮನ್ನಣೆ ಪಡೆದಿದ್ದಾರೆ. `ಗಿರಿಗಿಟ್ಲೆ' ಚಿತ್ರದ ಮೂಲಕ ನಾಯಕಿಯಾಗಿದ್ದಾರೆ. `ಭರ್ಜರಿ ಕಾಮಿಡಿ' ಎಂಬ ರಿಯಾಲಿಟಿ ಷೋ ನಿರೂಪಣೆ ಕೂಡ ಮಾಡಿದ್ದಾರೆ. `ಕುಣಿಯೋಣ ಬಾರ' ಡ್ಯಾನ್ಸ್ ರಿಯಾಲಿಟಿ ಷೋ ಆಗೂ ಬಿಗ್ಬಾಸ್ ಸೀಸನ್ 8ನಲ್ಲಿ ಭಾಗವಹಿಸಿದ್ದಾರೆ.
ಇನ್ನು ಅವರ ಭಾವಿ ಪತಿ ಅನುಕೂಲ್ ಮಿಶ್ರಾ ಕುರಿತು ಹೇಳುವುದಾದರೆ, ಅನುಕೂಲ್ ಛತ್ತೀಸಗಢದವರು. ಏರ್‌ಫೋರ್ಸ್‌ನಲ್ಲಿ ಅನುಕೂಲ್ ಕೆಲಸ ಮಾಡುತ್ತಿದ್ದಾರೆ. ಅನುಕೂಲ್ ಅವರಿಂದಲೇ ವೈಷ್ಣವಿ ಈ ಬಾರಿ ಬೆಂಗಳೂರಿನಲ್ಲಿ ನಡೆದಿದ್ದ ಏರ್ ಷೋ ವೀಕ್ಷಣೆ ಮಾಡಿದ್ದರು. ಇದನ್ನೇ ಅವರು ಪರೋಕ್ಷವಾಗಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, “ಥ್ಯಾಂಕ್ಯು ಎ. ನಿಮ್ಮಿಂದಲೇ ಏರ್ ಷೋ ನೋಡೋದು ಸಾಧ್ಯ ಆಯ್ತು, ಇದೊಂದು ಅದ್ಭುತ ಅನುಭವ” ಎಂದು ಹೇಳಿದ್ದರು. ಆದರೆ, ಗುಟ್ಟನ್ನು ಮಾತ್ರ ಬಿಟ್ಟು ಕೊಟ್ಟಿರಲಿಲ್ಲ. ಇದೀಗ ಕೊನೆಗೂ ಗುಟ್ಟನ್ನು ಅವರೇ ರಿವೀಲ್ ಮಾಡಿದ್ದು, ಭಾವಿ ಪತಿಯನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ.


