ಕರ್ನಾಟಕ ಸಂಘ ಕತಾರ್ ವತಿಯಿಂದ 'ಕಬ್ಜ' ಚಿತ್ರದ ವಿಶೇಷ ಪ್ರದರ್ಶನ

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಶಿವರಾಜ್ ಕುಮಾರ್ ನಟಿಸಿರುವ, ಆರ್.ಚಂದ್ರು ನಿರ್ದೇಶನದ 'ಕಬ್ಜ' ಚಿತ್ರವು  ದೋಹ ಕತಾರ್‌ನಲ್ಲಿ ಕರ್ನಾಟಕ ಸಂಘ ಕತಾರ್ ಹಾಗೂ ಕೋರ್ಸಿಸ್ ಕನ್ನಡ ಮೂವೀಸ್ ಸಂಯೋಗದೊಂದಿಗೆ ಸ್ಪೆಷಲ್ ಶೋ ಆಯೋಜಿಸಿದರು. 

special screening of kabza film by karnataka sangha qatar gvd

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಶಿವರಾಜ್ ಕುಮಾರ್ ನಟಿಸಿರುವ, ಆರ್.ಚಂದ್ರು ನಿರ್ದೇಶನದ 'ಕಬ್ಜ' ಚಿತ್ರವು  ದೋಹ ಕತಾರ್‌ನಲ್ಲಿ ಕರ್ನಾಟಕ ಸಂಘ ಕತಾರ್ ಹಾಗೂ ಕೋರ್ಸಿಸ್ ಕನ್ನಡ ಮೂವೀಸ್ ಸಂಯೋಗದೊಂದಿಗೆ ಸ್ಪೆಷಲ್ ಶೋ ಆಯೋಜಿಸಿದರು. ಚಿತ್ರವು ಕತಾರ್‌ನಲ್ಲಿ ಮೊಟ್ಟ ಮೊದಲ ಬಾರಿಗೆ 11ಕ್ಕಿಂತ ಹೆಚ್ಚು ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ.  ಪೂರ್ಣವಾಗಿ ಸ್ಕ್ರಿಪ್ಟ್, ಸ್ಕ್ರೀನ್ ಪ್ಲೇ, ಚಿತ್ರಕಥೆ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ. ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳು ಕೇಕ್ ಕತ್ತರಿಸಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು. 

ವಿಶೇಷ ಪ್ರದರ್ಶನಕ್ಕೆ ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಶ್ರೀ ಸುಬ್ರಹ್ಮಣ್ಯ ಹೆಬ್ಬಾಗಿಲು ಮತ್ತು ಶ್ರೀ ಪ್ರಭುರಾಜ್ ಅವರು ಏರ್ಪಡಿಸಿದ್ದರು. ಶ್ರೀಯುತ ಮಹೇಶ್ ಗೌಡರವರ ಮಾತನಾಡಿ ಕಬ್ಜ ಚಿತ್ರವು 100ದಿನಗಳು ಯಶಸ್ವಿಯಾಗಿ ಸಾಗಲಿ ಎಂದು ಹಾರೈಸಿದರು. ಶ್ರೀಯುತ ಸುಬ್ರಮಣ್ಯ ಹೆಬ್ಬಾಗಿಲು ಅವರು ಮಾತನಾಡಿ ಕನ್ನಡ ಸಿನಿಮಾಗಳು ಕತಾರ್‌ನಲ್ಲಿ ಇದೇ ರೀತಿ ಅದ್ದೂರಿಯಾಗಿ ತೆರೆ ಗೊಳ್ಳಲು  ಪ್ರಯತ್ನ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸದ್ಯ ಅನೇಕ ಕನ್ನಡ ಚಿತ್ರ ಪ್ರೇಮಿಗಳು 'ಕಬ್ಜ 2' ಚಿತ್ರವು ಇನ್ನು ಅದ್ದೂರಿಯಾಗಿ ಬರುತ್ತಿರುವ ನಿರೀಕ್ಷೆಯಲ್ಲಿದ್ದಾರೆ.

ಕಬ್ಜ ಸಿನಿಮಾದ ಮಾಸ್ ಸಾಂಗ್ ಮೇಕಿಂಗ್ ವಿಡಿಯೋ ಲೀಕ್: ಜಾನಿ ಮಾಸ್ಟರ್​​ಗೆ ಸ್ಟೆಪ್ಸ್ ಹೇಳಿಕೊಟ್ಟ ಉಪ್ಪಿ!

ಆರ್.ಚಂದ್ರು ನಿರ್ದೇಶನದಲ್ಲಿ ಮೂಡಿ ಬಂದಿರುವ ಕಬ್ಜ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಕಿಚ್ಚ ಸುದೀಪ್ ಮತ್ತು ಶಿವರಾಜ್ ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಮೂವರು ಸ್ಟಾರ್ ನಟರು ಒಟ್ಟಿಗೆ ಕಾಣಿಸಿಕೊಂಡಿರುವ ಕಬ್ಜ ಅಭಿಮಾನಿಗಳ ಕಣ್ಣಿಗೆ ದೊಡ್ಡ ಹಬ್ಬವಾಗಿದೆ. ಅಂದಹಾಗೆ ಕಬ್ಜ ಸಿನಿಮಾ 7 ಭಾಷೆಗಳಲ್ಲಿ ರಿಲೀಸ್ ಆಗಿದೆ. ಸುಮಾರು 50ಕ್ಕೂ ಅಧಿಕ ದೇಶಗಳಲ್ಲಿ ಕಬ್ಜ ಬಿಡುಗಡೆಯಾಗುತ್ತಿದೆ. ವಿಶೇಷ ಎಂದರೆ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಕಬ್ಜ ತೆರೆಗೆ ಬಂದಿದೆ.

ಕರ್ನಾಟಕದಲ್ಲೂ ಕಬ್ಜ ಅದ್ದೂರಿಯಾಗಿ ರಿಲೀಸ್ ಆಗಿದೆ. ಕರ್ನಾಟಕದಲ್ಲಿ ಕಬ್ಜ ಬರೋಬ್ಬರಿ 450 ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ. ಇಂದು ವಿಶೇಷ ಎಂದರೆ ಪವರ್ ಸ್ಟಾರ್ ಪುನೀತ್ ಅವರ ಜನ್ಮ ದಿನ. ಈ ವಿಶೇಷ ದಿನದಂದು ಕಬ್ಜ ಸಿನಿಮಾ ತೆರೆಗೆ ಬರುತ್ತಿದೆ. ಅನೇಕ ಚಿತ್ರಮಂದಿರಗಳಲ್ಲಿ ಅಪ್ಪು ಕಟೌಟ್ ಕೂಡ ರಾರಾಜಿಸುತ್ತಿದೆ. ಈ ಬಗ್ಗೆ ರಿಯಲ್ ಸ್ಟಾರ್ ಪುಣ್ಯಾತ್ಮನ ಹುಟ್ಟುಹಬ್ಬದ ದಿನ ನಮ್ಮ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ ಎಂದು ಹೇಳಿದ್ದರು. 

Kabzaa; ಪಾರ್ಟ್-2ನಲ್ಲಿ ಅಮರಾಪುರ 'ಕಬ್ಜ' ಮಾಡಿ ಉಪ್ಪಿ ಸಾಮ್ರಾಜ್ಯಕ್ಕೆ ಅಧಿಪತಿ ಆಗ್ತಾರಾ ಶಿವಣ್ಣ?

ಬೆಂಗಳೂರಿನಲ್ಲೂ ಕಬ್ಜ ದರ್ಬಾರ್ ಜೋರಾಗಿದೆ. ರಾಜಧಾನಿಯಲ್ಲೇ ಸುಮಾರು 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ. ಈಗಾಗಲೇ ಅನೇಕ ಚಿತ್ರಮಂದಿರಗಳು ಹೌಸ್ ಆಗಿವೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಕಬ್ಜದ ಹಬ್ಬ ಜೋರಾಗಿದೆ. ಮೂವರು ಸ್ಟಾರ್ಸ್ ಒಟ್ಟಿಗೆ ತೆರೆಮೇಲೆ ಬಂದಿರುವುದನ್ನು ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದರು. ಇದೀಗ ಮೂವರನ್ನು ಒಟ್ಟಿಗೆ ನೋಡಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ರಿಯಲ್ ಸ್ಟಾರ್‌ಗೆ ನಾಯಕಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದಾರೆ.

Latest Videos
Follow Us:
Download App:
  • android
  • ios