2010ರಲ್ಲಿ  ದೆಹಲಿ ಮೂಲದ ಉದ್ಯಮಿಯೊಬ್ಬರಿಂದ ಸಾವಿರ ಕೋಟಿ ರೂ. ಸಾಲ ಕೊಡಿಸುವುದಾಗಿ 5 ಕೋಟಿ ರೂ. ಪಡೆದುಕೊಂಡಿದ್ದ. ಇತ್ತ ಸಾಲವನ್ನು ಕೊಡಿಸದೆ ಹಣವನ್ನು ವಾಪಸ್ ಕೊಡಿಸದ ಕಾರಣ 2013ರಲ್ಲಿಯೇ ಬಂಧಿಸಿ ಜೈಲಿಗಟ್ಟಲಾಗಿತ್ತು.

ಚೆನ್ನೈ(ಮಾ.10): ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಿನ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ಎಂಬುವವರನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ.

2010ರಲ್ಲಿ ದೆಹಲಿ ಮೂಲದ ಉದ್ಯಮಿಯೊಬ್ಬರಿಂದ ಸಾವಿರ ಕೋಟಿ ರೂ. ಸಾಲ ಕೊಡಿಸುವುದಾಗಿ 5 ಕೋಟಿ ರೂ. ಪಡೆದುಕೊಂಡಿದ್ದ. ಇತ್ತ ಸಾಲವನ್ನು ಕೊಡಿಸದೆ ಹಣವನ್ನು ವಾಪಸ್ ಕೊಡಿಸದ ಕಾರಣ 2013ರಲ್ಲಿಯೇ ಬಂಧಿಸಿ ಜೈಲಿಗಟ್ಟಲಾಗಿತ್ತು.

ಜಾಮೀನಿನ ಮೇಲೆ ಹೊರ ಬಂದ ಮೇಲೂ ಹಣ ಹಿಂದಿರುಗಿಸದೆ ತಲೆ ತಪ್ಪಿಸಿಕೊಂಡಿದ್ದ ಈತನನ್ನು ಈಗ ಮತ್ತೆ ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಬೆಂಗಳೂರು ಸೇರಿದಂತೆ 8ಕ್ಕೂ ಹೆಚ್ಚು ಪ್ರಕರಣಗಳಿವೆ. ಶ್ರೀನಿವಾಸನ್ 12 ಕ್ಕೂ ಹೆಚ್ಚು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾನೆ.