ತಮ್ಮ ಹಾಸ್ಯದ ಮೂಲಕ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ಕಾಮಿಡಿ ಕಿಂಗ್ ಗೆ ಹೃದಯ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಮುಂಬೈ, [ಜ.16]: ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಅವರಿಗೆ ಹೃದಯ ನೋವು ಕಾಣಿಸಿಕೊಂಡಿದ್ದು, ತುರ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
62 ವರ್ಷದ ಬ್ರಹ್ಮಾನಂದಂ ಅವರು ಮುಂಬೈನಲ್ಲಿರುವ ಏಷಿಯನ್ ಹಾರ್ಟ್ ಇನ್ಸ್ಟಿಟ್ಯೂಟ್ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.
ಭಾನುವಾರ ಬ್ರಹ್ಮಾನಂದಂ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹಲವು ಟೆಸ್ಟ್ಗಳ ನಂತರ ಅವರಿಗೆ ತಕ್ಷಣ ಬೈಪಾಸ್ ಸರ್ಜರಿ ಮಾಡಲಾಗಿದೆ.
ಮೂರು ದಿನ ಕಾಲ ಅವರ ಆರೋಗ್ಯದ ಮೇಲೆ ನಿಗಾವಹಿಸುವುದಾಗಿ ವೈದ್ಯರು ತಿಳಿಸಿದ್ದಾರೆ.ಇನ್ನು ಬ್ರಹ್ಮಾನಂದ ಅವರು ಶೀಘ್ರ ಗುಣಮುಖರಾಗಲೆಂದು ಖ್ಯಾತ ನಟ, ನಟಿಯರು, ಅಭಿಮಾನಿಗಳೂ ಸೇರಿದಂತೆ ಹಲವಾರು ಹಾರೈಸಿದ್ದಾರೆ.
1985ರಲ್ಲಿ ‘ಆಹಾ ನಾ ಪೆಲ್ಲಂಟಾ’ ಚಿತ್ರದ ಮೂಲಕ ಸಿನಿ ಜಗತ್ತಿಗೆ ಎಂಟ್ರಿ ಕೊಟ್ಟಿರುವ ಬ್ರಹ್ಮಾನಂದಂ ಅವರು ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ಇವರು ತಮ್ಮ ಹಾಸ್ಯದ ಮೂಲಕ ಪ್ರೇಕ್ಷಕರಿಗೆ ರಸದೌತಣ ನೀಡುವ ಕಲೆಯನ್ನು ಗಮನಿಸಿ 2009ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಲಾಗಿದೆ.
