ಯುಟ್ಯೂಬ್’ನಲ್ಲಿ ಧೂಳೆಬ್ಬಿಸುತ್ತಿದೆ ವಿಲನ್ ಸಾಂಗ್!

The Villain first song released
Highlights

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಹಾಗೂ ಸುದೀಪ್ ಅಭಿನಯಿಸಿರುವ ಬಹುನಿರೀಕ್ಷಿತ ಚಿತ್ರ ವಿಲನ್  ಚಿತ್ರದ  ಟೀಸರ್ ರಿಲೀಸ್ ಆಗಿ ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿತ್ತು. ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. 
 

ಬೆಂಗಳೂರು (ಜು. 14):  ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಹಾಗೂ ಸುದೀಪ್ ಅಭಿನಯಿಸಿರುವ ಬಹುನಿರೀಕ್ಷಿತ ಚಿತ್ರ ವಿಲನ್  ಚಿತ್ರದ  ಟೀಸರ್ ರಿಲೀಸ್ ಆಗಿ ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿತ್ತು. ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. 

'ಮಚ್ಚು ಗಿಚ್ಚು ಹಿಡಿದವನಲ್ಲ...' ಎನ್ನುವ ಹಾಡು ರಿಲೀಸ್​​ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ.  ಬಿಡುಗಡೆಯಾದ ಒಂದು ಗಂಟೆಯಲ್ಲೇ ನಾಲ್ಕು ಲಕ್ಷಕ್ಕೂ ಹೆಚ್ಚು ಜನ ನೋಡಿದ್ದಾರೆ.   ಸುದೀಪ್ ಮತ್ತು ಶಿವರಾಜ್ ಕುಮಾರ್ ಅವರ ಫೈಟಿಂಗ್ ಚಿತ್ರೀಕರಣದ ಮೇಕಿಂಗ್ ಈ ಹಾಡಿನಲ್ಲಿದೆ. ನಿರ್ದೇಶಕ ಪ್ರೇಮ್ ಸಾಹಿತ್ಯ ಬರೆದಿದ್ದು, ಶಂಕರ್ ಮಹಾದೇವನ್ ಹಾಡಿರುವ ಈ ಹಾಡನ್ನು ನೀವು ಒಂದು ಬಾರಿ ನೋಡಿ. 

 

loader