ಗುಂಡಿನ ದಾಳಿಯ ಸಂದರ್ಭದಲ್ಲಿ ಟೈಗರ್ ಶ್ರಾಫ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಕುರಿತು ಕಂಪ್ಲೀಟ್ ಸ್ಟೋರಿ ವರದಿ ಇಲ್ಲಿದೆ.
ಹಿಂದಿ ಚಿತ್ರರಂಗದ ಖ್ಯಾತ ನಟ ಟೈಗರ್ ಶ್ರಾಫ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯು ಮುಂಬೈನ ಪ್ರಸಿದ್ಧ ಜುಹು ಪ್ರದೇಶದಲ್ಲಿ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಗುಂಡಿನ ದಾಳಿಯ ಸಂದರ್ಭದಲ್ಲಿ ಟೈಗರ್ ಶ್ರಾಫ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ಕಾರ್ಯಪ್ರವೃತ್ತರಾಗಿರುವ ಮುಂಬೈ ಪೊಲೀಸರು ದಾಳಿಕೋರರು ಯಾರು ಮತ್ತು ದಾಳಿಗೆ ಕಾರಣವೇನು ಎಂಬ ಬಗ್ಗೆ ತೀವ್ರ ತನಿಖೆ ನಡೆಸಿದ್ದಾರೆ.


