Tulu film director Suraj Bolar Death: ಪತ್ತೀಸ್ ಗ್ಯಾಂಗ್ ಮತ್ತು ರಾಹುಕಾಲ ಗುಳಿಗಕಾಲ ಸೇರಿದಂತೆ ತುಳು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಅಂದ್ರಹಳ್ಳಿ ಮುಖ್ಯರಸ್ತೆಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರು: ತುಳು ಭಾಷೆ ಸಿನಿಮಾ ನಿರ್ದೇಶಕ ಸೂರಜ್ ಬೋಳಾರ್ ಅವರು ಬೆಂಗಳೂರಿನ ನಿಧನರಾಗಿದ್ದಾರೆ. ದಿವಂಗತ ಆನಂದ ಬೋಳಾರ್ ಅವರ ಪುತ್ರರಾಗಿದ್ದ ಸೂರಜ್ ಬೋಳಾರ್ ನಿರ್ದೇಶಕ, ನಟ ಮತ್ತು ಬರಹಗಾರರಾಗಿ ಗುರುತಿಸಿಕೊಂಡಿದ್ದರು. ಕನ್ನಡ ಮತ್ತು ತುಳು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದರು. ಪತ್ತೀಸ್ ಗ್ಯಾಂಗ್ ಮತ್ತು ರಾಹುಕಾಲ ಗುಳಿಗಕಾಲ ಸೇರಿದಂತೆ ತುಳು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಅಂದ್ರಹಳ್ಳಿ ಮುಖ್ಯರಸ್ತೆಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಅಂತಿಮ ದರ್ಶನ ಇರಲಿದ್ದು, ಸುಮನಹಳ್ಳಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.