ರಶ್ಮಿಕಾ ಮಂದಣ್ಣ ಕನ್ನಡ ವಿರೋಧಿ ಹೇಳಿಕೆ ನೀಡಿರುವ ಕಾರಣಕ್ಕೆ ಮತ್ತು ಕನ್ನಡ ವಿರೋಧಿ ನಡವಳಿಕೆ ತೋರಿರುವುದಕ್ಕೆ ಜಗ್ಗೇಶ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಕನ್ನಡ ಚಿತ್ರರಂಗದ ಆಶೀರ್ವಾದ ಪಡೆದು ಬೆಳೆದು ಪರಭಾಷೆಗೆ ಹೋಗಿ ಅಲ್ಲಿಯು ಬೆಳೆದ ಅನೇಕ ಸ್ನೇಹಿತರಿದ್ದಾರೆ! ಅವರೆಲ್ಲ ಇಂದು ಕನ್ನಡಲ್ಲೇ ಮಾತಾಡಿ ಕನ್ನಡವನ್ನ ಅಪಾರ ಗೌರವಿಸುತ್ತಾರೆ. ಅದು ಅವರ ಕನ್ನಡದ ಸಂಸ್ಕೃತಿ! ಆ ಗುಣವಿರದ ಇಂದಿನ ಪೀಳಿಗೆಯ ನಡಾವಳಿ ದುರಾದೃಷ್ಟಕರ! ಕನ್ನಡ ಪ್ರೇಕ್ಷಕನ ಚಪ್ಪಾಳೆ ಬಿದ್ದೇ ನಿಮ್ಮ ಬೆಳವಣಿಗೆ ಆದದ್ದು ನೆನಪಿರಲಿ’ ಎಂದು ಜಗ್ಗೇಶ್‌ ಟ್ವೀಟ್‌ ಮಾಡಿದ್ದಾರೆ.