ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಈ ಮೊದಲು ಸಿಕೆ ಅಚ್ಚಕಟ್ಟು ಪ್ರದೇಶದ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
ಕನ್ನಡದ ಹಾಸ್ಯ ನಟನ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪದಡಿ ದೂರು ಸಲ್ಲಿಸಿದ್ದಾರೆ. ಹಲವು ಚಿತ್ರಗಳಲ್ಲಿ ಹಾಗೂ ರಿಯಾಲಿಟಿ ಶೋ'ಗಳಲ್ಲಿ ಹಾಸ್ಯ ಕಲಾವಿದನಾಗಿ ನಟಿಸಿರುವ ನಟ ತರಂಗ ವಿಶ್ವನ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಮಹಿಳಾ ಐಟಿ ಉದ್ಯೋಗಿಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಿದ್ದಾರೆ.
ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಈ ಮೊದಲು ಸಿಕೆ ಅಚ್ಚಕಟ್ಟು ಪ್ರದೇಶದ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆದ ಕಾರಣ ನಗರ ಪೊಲೀಸ್ ಆಯುಕ್ತರ ಮೊರೆ ಹೋಗಿದ್ದು ಎಫ್ ಐ ಆರ್ ದಾಖಲಾಗಿದೆ ಎಂದು ಮಹಿಳೆ ತಿಳಿಸಿದ್ದಾರೆ.
