‘ರಾಮಾಯಣ-1 ಚಿತ್ರವು 2026ರ ದೀಪಾವಳಿಗೆ ಮತ್ತು ಎರಡನೇ ಭಾಗವು 2027ರ ದೀಪಾವಳಿಗೆ ಅದ್ದೂರಿಯಾಗಿ ತೆರೆಕಾಣಲಿದೆ. ಕೇವಲ ಭಾರತೀಯರಷ್ಟೇ ಅಲ್ಲದೆ, ಇಡೀ ವಿಶ್ವದ ಸಿನಿಪ್ರಿಯರು ತುದಿಗಾಲಿನಲ್ಲಿ ಕಾಯುತ್ತಿರುವ 'ರಾಮಾಯಣ' ಚಿತ್ರವು ಅಂತರರಾಷ್ಟ್ರೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸುವುದು ಖಚಿತವಾಗಿದೆ.

Ramayana Trailer New Record in Indian Cinemas: ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ!

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮಹತ್ವಾಕಾಂಕ್ಷೆಯ ಚಿತ್ರವೆನಿಸಿರುವ 'ರಾಮಾಯಣ' (Ramayana) ತನ್ನ ಮೊದಲ ಅಧಿಕೃತ ಟ್ರೈಲರ್ ಮೂಲಕ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ವಿಶ್ವದಾದ್ಯಂತ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಈ ಚಿತ್ರದ ಟ್ರೈಲರ್, ಬಿಡುಗಡೆಯಾದ ಕೇವಲ 4 ದಿನಗಳಲ್ಲಿ ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ 800 ಮಿಲಿಯನ್‌ ಗೂ ಅಧಿಕ ವೀಕ್ಷಣೆಗಳನ್ನು ಪಡೆದು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದೆ.

ಹಾಲಿವುಡ್‌ನ ಹೆಮ್ಮೆಯ ಚಿತ್ರಗಳಾದ ಮಾರ್ವೆಲ್‌ನ 'ಅವೆಂಜರ್ಸ್: ಡೂಮ್ಸ್‌ಡೇ' (936 ಮಿಲಿಯನ್) ಮತ್ತು 'ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ' (1.1 ಬಿಲಿಯನ್) ಚಿತ್ರಗಳ ಟ್ರೈಲರ್ ವೀಕ್ಷಣೆಗಳ ಸಾಲಿನಲ್ಲಿ 'ರಾಮಾಯಣ' ಚಿತ್ರವು ಹೆಮ್ಮೆಯಿಂದ ನಿಂತಿದ್ದು, ಭಾರತೀಯ ಸಿನಿಮಾದ ಶಕ್ತಿಯನ್ನು ವಿಶ್ವದ ಎತ್ತರಕ್ಕೆ ಕೊಂಡೊಯ್ದಿದೆ. ಈ ಜಾಗತಿಕ ಸಫಲತೆಯು ಭಾರತೀಯ ಸಿನಿಮಾದ ಸ್ಟ್ಯಾಂಡರ್ಡ್ ಅನ್ನು ಸಂಪೂರ್ಣವಾಗಿ ಬದಲಾಯಿಸಿದೆ ಎನ್ನಬಹುದು.

ಈ ಮಹಾಕಾವ್ಯದಲ್ಲಿ ಬಾಲಿವುಡ್‌ನ ಜನಪ್ರಿಯ ನಟ ರಣಬೀರ್ ಕಪೂರ್ (Ranbir Kapoor) ಶ್ರೀರಾಮನಾಗಿ, ನಟಿ ಸಾಯಿ ಪಲ್ಲವಿ (Sai Pallavi) ಸೀತಾ ಮಾತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ, ರಾವಣನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯಿಸುತ್ತಿದ್ದು, ಸನ್ನಿ ಡಿಯೋಲ್ ಹನುಮಂತನಾಗಿ ಹಾಗೂ ರವಿ ದುಬೆ ಲಕ್ಷ್ಮಣನ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು, ಪ್ರೈಮ್ ಫೋಕಸ್ ಸ್ಟುಡಿಯೋಸ್‌ನ ನಮಿತ್ ಮಲ್ಹೋತ್ರಾ ಹಾಗೂ ಎಂಟು ಬಾರಿ ಆಸ್ಕರ್ ಪ್ರಶಸ್ತಿ ವಿಜೇತ DNEG ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹಯೋಗದಲ್ಲಿ ನಿರ್ಮಿಸುತ್ತಿದ್ದಾರೆ. ಕಟಿಂಗ್-ಎಡ್ಜ್ ವಿಷುಯಲ್ಸ್ ಮತ್ತು ವಿಶ್ವ ದರ್ಜೆಯ ಕಥೆಗಾರಿಕೆಯೊಂದಿಗೆ ಈ ಸಿನಿಮಾ ರೂಪುಗೊಳ್ಳುತ್ತಿದೆ. ಈ ಎರಡು ಭಾಗಗಳ ಬ್ರಹ್ಮಾಂಡ ಮಹಾಕಾವ್ಯವು ಐಮ್ಯಾಕ್ಸ್ (IMAX) ತಂತ್ರಜ್ಞಾನದೊಂದಿಗೆ ಜಾಗತಿಕವಾಗಿ ಬಿಡುಗಡೆಯಾಗಲಿದೆ.

ಇದರ ಮೊದಲ ಭಾಗವು 2026ರ ದೀಪಾವಳಿಗೆ ಮತ್ತು ಎರಡನೇ ಭಾಗವು 2027ರ ದೀಪಾವಳಿಗೆ ಅದ್ದೂರಿಯಾಗಿ ತೆರೆಕಾಣಲಿದೆ. ಕೇವಲ ಭಾರತೀಯರಷ್ಟೇ ಅಲ್ಲದೆ, ಇಡೀ ವಿಶ್ವದ ಸಿನಿಪ್ರಿಯರು ತುದಿಗಾಲಿನಲ್ಲಿ ಕಾಯುತ್ತಿರುವ 'ರಾಮಾಯಣ' ಚಿತ್ರವು ಅಂತರರಾಷ್ಟ್ರೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸುವುದು ಖಚಿತವಾಗಿದೆ.