Fact Check: ಶಾಹೀನ್ ಬಾಗ್ ಪ್ರತಿಭಟನಾಗಾರ್ತಿಗೆ ಕೊರೋನಾ?
ಜಗತ್ತಿನಾದ್ಯಂತ ಕೊರೋನಾ ಬೀಕರತೆ ಹೆಚ್ಚುತ್ತಿದೆ. ಭಾರತದಲ್ಲೂ 31 ಜನರಲ್ಲಿ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಈ ನಡುವೆ ದೆಹಲಿಯ ಶಾಹೀನ್ ಬಾಗ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಕುಳಿತ ಮಹಿಳೆಯಲ್ಲೂ ಕೊರೋನಾ ಸೋಂಕಿರುವುದು ದೃಢಪಟ್ಟಿದೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ?
ಜಗತ್ತಿನಾದ್ಯಂತ ಕೊರೋನಾ ಬೀಕರತೆ ಹೆಚ್ಚುತ್ತಿದೆ. ಭಾರತದಲ್ಲೂ 31 ಜನರಲ್ಲಿ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಈ ನಡುವೆ ದೆಹಲಿಯ ಶಾಹೀನ್ ಬಾಗ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಕುಳಿತ ಮಹಿಳೆಯಲ್ಲೂ ಕೊರೋನಾ ಸೋಂಕಿರುವುದು ದೃಢಪಟ್ಟಿದೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಈ ಕುರಿತ ಟ್ವೀಟ್ವೊಂದರ ಸ್ಕ್ರೀನ್ಶಾಟ್ ವೈರಲ್ ಆಗಿದ್ದು, ಅದರಲ್ಲಿ ‘ಬಿಗ್ ಬ್ರೇಕಿಂಗ್ ನ್ಯೂಸ್: ಶಾಹೀನ್ ಬಾಗ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಜ್ಮಾ ಬೇಗಂ (43) ಎಂಬ ಮಹಿಳೆಯು ಅನಾರೋಗ್ಯದಿಂದ ಬಳಲುತ್ತಿದ್ದು, ಅವರಲ್ಲಿ ಕೊರೋನಾ ಸೋಂಕಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಆದರೆ ಆಕೆ ಚಿಕಿತ್ಸೆಯನ್ನು ನಿರಾಕರಿಸಿ ಶಾಹೀನ್ ಬಾಗ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಳೆ. ಈ ಜನರಿಗೆ ಇನ್ನೇನು ಹೇಳಲು ಸಾಧ್ಯ?’ ಎಂದು ಕೊರೋನಾ ವೈರಸ್ ರೀಚ್ ದೆಹಲಿ ಎಂದು ಹ್ಯಾಷ್‌ಟ್ಯಾಗ್ ಹಾಕಲಾಗಿದೆ.
Fact Check: ದೆಹಲಿ ಸಿಎಂ ಕೇಜ್ರಿವಾಲ್ಗೆ ಆರ್ಎಸ್ಎಸ್ ಹಿನ್ನೆಲೆ!
ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಆದರೆ ಬೂಮ್ಲೈವ್ ಸುದ್ದಿಸಂಸ್ಥೆ ಈ ಸುದ್ದಿಯ ಸತ್ಯಾಸತ್ಯ ಪರಿಶೀಲಿಸಿದಾಗ ಇದು ಸುಳ್ಳುಸುದ್ದಿ ಎಂಬುದು ಖಚಿತವಾಗಿದೆ.
ಈ ಬಗ್ಗೆ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳೂ ವರದಿ ಮಾಡಿಲ್ಲ. ಅಲ್ಲದೆ ‘ಬೂಮ್’ ಶಾಹೀನ್ ಬಾಗ್ ಪ್ರತಿಭಟನೆಯ ಸಂಘಟಕರ ಬಳಿ ಸ್ಪಷ್ಟನೆ ಪಡೆದಿದ್ದು, ಅವರು ಈ ವೈರಲ್ ಸಂದೇಶ ಸುಳ್ಳು ಎಂದು ಹೇಳಿದ್ದಾರೆ. ಹಾಗೆಯೇ ಈ ಟ್ವೀಟ್ ಮಾಡಿರುವ ಟ್ವೀಟರ್ ಖಾತೆ ಈಗ ಅಸ್ತಿತ್ವದಲ್ಲಿ ಇಲ್ಲ. ಜೊತೆಗೆ ದೆಹಲಿಯಲ್ಲಿ ಕೊರೋನಾ ವೈರಸ್ಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತೆಗಳೂ ಈ ಸುದ್ದಿಯನ್ನು ಅಲ್ಲಗಳೆದಿವೆ.
- ವೈರಲ್ ಚೆಕ್