Asianet Suvarna News Asianet Suvarna News

ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಉತ್ಸವ; ಆ.15ರ ವರೆಗೆ ಕರಕುಶಲ ಸಂಭ್ರಮ!

ಬೆಂಗಳೂರಿನಲ್ಲಿ ಕರ ಕುಶಲ ಕರ್ಮಿಗಳ ಉತ್ಸವ ನಡೆಯುತ್ತಿದೆ. ಚಿತ್ರಕಲಾ ಪರಿಷತ್ತಿನಲ್ಲಿ ನಡೆಯುತ್ತಿರುವ ಬೆಂಗಳೂರು ಉತ್ಸವಕ್ಕೆ ನಟಿ ಭೂಮಿ ಶೆಟ್ಟಿ ಚಾಲನೆ ನೀಡಿದ್ದಾರೆ. ಈ ಬಾರಿ ಹಲವು ವಿಶೇಷತೆಗಳೊಂದಿಗೆ ಉತ್ಸವ ನಡೆಯುತ್ತಿದೆ.
 

Big boss Fame bhoomi shetty inaugurate Bengaluru Festival in Karnataka Chitrakala Parishad ckm
Author
Bengaluru, First Published Aug 8, 2021, 9:19 PM IST
  • Facebook
  • Twitter
  • Whatsapp

ಬೆಂಗಳೂರು(ಆ.08): ಕೊರೋನಾ ಲಾಕ್‌ಡೌನ್‌‌ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಇಂದಿನಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಲಾಯಿತು.

ಬ್ಯಾಡ್ಮಿಂಟನ್ ಮಾತ್ರವಲ್ಲ ಫ್ಯಾಷನ್‌ನಲ್ಲೂ ಸೂಪರ್ ಸಿಂಧು

ಬಿಗ್‌ಬಾಸ್ ಖ್ಯಾತಿಯ ಭೂಮಿ ಶೆಟ್ಟಿ ಸಂಭ್ರಮದ ಬೆಂಗಳೂರ ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಳಿಗೆಗಳಿಗೆ ಭೇಟಿ ನೀಡಿ ಕರ ಕುಶಲ ಕರ್ಮಿಗಳಿಗೆ ಬೆಂಬಲ ಸೂಚಿಸಿದರು. ನವೀನ ಹಾಗೂ ಸೂಕ್ಷ್ಮ ಕರ ಕುಶಲ ವಸ್ತುಗಳ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

Big boss Fame bhoomi shetty inaugurate Bengaluru Festival in Karnataka Chitrakala Parishad ckm

ಕರೋನಾ ಕಾಲದಲ್ಲಿ ಎಲ್ಲರಿಗೂ ಸಂಕಷ್ಟ ಅನುಭವಿಸಿದ್ದಾರೆ. ಅದರಲ್ಲೂ ಕರಕುಶಲಕರ್ಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ತೊಂದರೆಗೀಡಾಗಿದ್ದರು. ಅವರಿಗೆ ಮಾರುಕಟ್ಟೆಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಉತ್ಸವದಲ್ಲಿ ಪಾಲ್ಗೊಂಡು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಿ ಎಂದು ಮನವಿ ಮಾಡಿದರು ಎಂದು  ನಟಿ ಭೂಮಿ ಶೆಟ್ಟಿ ಹೇಳಿದರು.

ಈ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಗಸ್ಟ್‌ 15 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಕರೋನಾ ಸಾಂಕ್ರಾಮಿಕ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Big boss Fame bhoomi shetty inaugurate Bengaluru Festival in Karnataka Chitrakala Parishad ckm

ಕಾರ್ಯಕ್ರಮದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ. ಬಿ.ಎಲ್‌ ಶಂಕರ್‌, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಪ್ರೊ. ಕೆ.ಎಸ್‌ ಅಪ್ಪಾಜಯ್ಯ ಪಾಲ್ಗೊಂಡಿದ್ದರು.

Follow Us:
Download App:
  • android
  • ios