Asianet Suvarna News Asianet Suvarna News

ಹುಬ್ಬಳ್ಳಿ ಯುವತಿ ಶೃತಿ ಹೆಗಡೆಗೆ ಮಿನಿ ವಿಶ್ವಸುಂದರಿ ಕಿರೀಟ..!

2018ರಲ್ಲಿ ಮಿಸ್ ಕರ್ನಾಟಕ ರನ್ನರ್‌ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. 2023ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಶೃತಿ ಹೆಗಡೆ ಅಮೆರಿಕದಲ್ಲಿ ಇತ್ತೀಚೆಗೆ ನಡೆದ ಮಿನಿ ವಿಶ್ವ ಸುಂದರಿಯ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 

Hubballi Origin Shruti Hegde Won Mini Miss World Competition Held in America grg
Author
First Published Jul 2, 2024, 12:47 PM IST

ಶಿರಸಿ(ಜು.02):  ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಹುಬ್ಬಳ್ಳಿಯ ಯುವತಿ ಶೃತಿ ಹೆಗಡೆ ಅವರು ಇತ್ತೀಚೆಗೆ ಅಮೆರಿಕದಲ್ಲಿ ಜರುಗಿದ ಮಿನಿ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ. 

2018ರಲ್ಲಿ ಮಿಸ್ ಕರ್ನಾಟಕ ರನ್ನರ್‌ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. 2023ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಇವರು ಅಮೆರಿಕದಲ್ಲಿ ಇತ್ತೀಚೆಗೆ ನಡೆದ ಮಿನಿ ವಿಶ್ವ ಸುಂದರಿಯ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 

ಮಿಸ್​ ವರ್ಲ್ಡ್​ ಟಾಪ್​ 8ಗೆ ಏರಿದ ಕನ್ನಡತಿ ಸಿನಿ ಶೆಟ್ಟಿಗೆ ಆತ್ಮೀಯ ಸ್ವಾಗತ: ಜಸ್ಟ್​ ಮಿಸ್​ಗೆ ಕಣ್ಣೀರಾದ ಸುಂದರಿ

ಅಮೆರಿಕದ ಪ್ಲೋರಿಡಾದಲ್ಲಿ ಕಳೆದ ಜೂ. 6ರಿಂದ 10ರ ವರೆಗೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ 40 ದೇಶಗಳ ಸುಂದರಿಯರು ಪೈಪೋಟಿಯಲ್ಲಿದ್ದರು. ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶೋತ್ತರ, ವೈಯಕ್ತಿಕ ಸಂದರ್ಶನ ಮೊದಲಾದ ವಿಭಾಗಳಲ್ಲಿ ಸ್ಪರ್ಧೆ ನಡೆದಿತ್ತು. ಮುಂಡಿಗೆಸರ ಅಷ್ಟೊರಮನೆ ಕುಟುಂಬದವರಾದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಆಗಿರುವ ಶೃತಿ ಹೆಗಡೆ ಹುಬ್ಬಳ್ಳಿಯಲ್ಲಿ ಎಂಬಿಬಿಎಸ್ ಪೂರೈಸಿದ್ದು, ತುಮಕೂರಿನಲ್ಲಿ ಎಂಡಿ ಅಧ್ಯಯನ ನಡೆಸುತ್ತಿದ್ದಾರೆ. ಇವರು ಭರತನಾಟ್ಯ ಕಲಾವಿದೆಯೂ ಆಗಿದ್ದು, ಕೆಲವು ಧಾರಾವಾಹಿ, ಕನ್ನಡ ಚಲನಚಿತ್ರ, ವೆಬ್ ಸಿರೀಸ್‌ನಲ್ಲಿ ನಟಿಸಿದ್ದಾರೆ.

Latest Videos
Follow Us:
Download App:
  • android
  • ios