ಜೈನ ಸನ್ಯಾಸ ದೀಕ್ಷೆ ಪಡೆದ ಯುವತಿ: ಇಪ್ಪತ್ತರ ಹರೆಯದಲ್ಲೇ ಆಧ್ಯಾತ್ಮದತ್ತ ಒಲವು

ಲೌಕಿಕ ಜಗತ್ತಿಗಿಂತ  ಅಧ್ಯಾತ್ಮಿಕ ಜಗತ್ತೇ ಉತ್ತಮ ಎಂದುಕೊಂಡಿರೋ ಇಪ್ಪತ್ತು ವರ್ಷದ ಹರೆಯದ ಯುವತಿಯೊಬ್ಬಳು ಹೊಸಪೇಟೆಯಲ್ಲಿಂದು ಜೈನ ಸನ್ಯಾಸತ್ವ ಸ್ವೀಕರಿಸಿದ್ದಾಳೆ. 
 

20 year young woman took jain monkhood deeksha in vijayanagara gvd

ವರದಿ: ನರಸಿಂಹ ಮೂರ್ತಿ ಕುಲಕರ್ಣಿ, ಏಷ್ಯಾನೆಟ್ ಸುವರ್ಣ ನ್ಯೂಸ್

ವಿಜಯನಗರ (ಜ.18): ಲೌಕಿಕ ಜಗತ್ತಿಗಿಂತ  ಅಧ್ಯಾತ್ಮಿಕ ಜಗತ್ತೇ ಉತ್ತಮ ಎಂದುಕೊಂಡಿರೋ ಇಪ್ಪತ್ತು ವರ್ಷದ ಹರೆಯದ ಯುವತಿಯೊಬ್ಬಳು ಹೊಸಪೇಟೆಯಲ್ಲಿಂದು ಜೈನ ಸನ್ಯಾಸತ್ವ ಸ್ವೀಕರಿಸಿದ್ದಾಳೆ. ಹೊಸಪೇಟೆ ಮೂಲದ ಶ್ರೀಮಂತ ಕುಟುಂಬಕ್ಕೆ ಸೇರಿದ ಜೈನ ಸಮುದಾಯದ ಯುವತಿ ಮುಮುಕ್ಷಾ ವಿಧಿ ಕುಮಾರಿ ಇಂದು ಮಹಾವೀರ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಶ್ರೀ ಆದಿನಾಥ ಜೈನ ಶ್ವೇತಾಂಬರ ಸಂಘದ ವತಿಯಿಂದ ಧೀಕ್ಷಾ ಕಾರ್ಯಕ್ರಮ‌ ಮಲ್ಲಿಗೆ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನಡೆಯಿತು.

ಉದ್ಯಮಿ ಮಗಳು ಆಧ್ಯಾತ್ಮಿಕತೆಯ ಒಲವು: ಹೊಸಪೇಟೆಯ ಉದ್ಯಮಿಯಾದ ದಿವಂಗತ ಕಾಂತಿಲಾಲಾ ಜಿ. ಜಿರಾವಲಾ ಮತ್ತು ರೇಖಾ ದೇವಿ ಜಿರಾವಲಾ ದಂಪತಿಗಳ ನಾಲ್ವರು ಪುತ್ರಿಯರಲ್ಲಿ ಮುಮುಕ್ಷಾ ಮೂರನೇಯವರು. 10ನೇ ತರಗತಿಯಲ್ಲಿ ಶೇ.94 ರಷ್ಟು ಮತ್ತು ಪಿಯುಸಿಯಲ್ಲಿ ಶೇ.99ರಷ್ಟು ಫಲಿತಾಂಶ ಪಡೆದಿರೋ, ಪ್ರತಿಭಾನ್ವಿತ ವಿದ್ಯಾರ್ಥಿನಿ.‌ ತಮ್ಮ ಬಾಲ್ಯದಿಂದಲೇ ಜೈನ ಸನ್ಯಾಸ ತತ್ವದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಮುಮುಕ್ಷು ಅಂತಿಮವಾಗಿ ಇಂದು ಸನ್ಯಾಸತ್ವ ಸ್ವೀಕಾರ ಮಾಡಿದ್ದಾರೆ. ಇನ್ನೂ ಮುಮುಕ್ಷು ಅವರು ತಮ್ಮ 10 ಮತ್ತು 12ನೇ ವಯಸ್ಸಿನಲ್ಲಿ ಎರಡು ಬಾರಿ 48 ದಿನಗಳ ಉಪಧ್ಯಾನ ತಪ (ಕಠಿಣ ವೃತ ಅಚರಣೆ ಮಾಡುವುದು ) ಸಂಪನ್ನಗೊಳಿಸಿದ್ದಾರೆ. 

ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಬೆಸ್ಕಾಂ: ವಿದ್ಯುತ್ ಬಿಲ್ ಮೇಲೆ 0.25%ರಷ್ಟು ರಿಯಾಯಿತಿ ಘೋಷಣೆ

ಆಧ್ಯಾತ್ಮಿಕದತ್ತ ಹೆಚ್ಚಿದ ಯುವಕರ ಒಲವು:ಇನ್ನೂ ದೇಶದಲ್ಲಿ ಪ್ರತಿ ವರ್ಷ 300 ಯುವಕ- ಯುವತಿಯರು ಸನ್ಯಾಸತ್ವ ಸ್ವೀಕರಿಸುತ್ತಿದ್ದಾರೆ. ಒಮ್ಮೆ ಸನ್ಯಾಸತ್ವ ಸೀಕಾರ ಮಾಡಿದವರು.ಲೌಕಿಕ ಬದುಕಿಗೆ ಮರಳಿದ ಉದಾಹರಣೆಗಳಿಲ್ಲ. ಅಷ್ಟರ ಮಟ್ಟಿಗೆ ಜೈನ ಸನ್ಯಾಸತ್ವದಲ್ಲಿ ನಂಬಿಕೆಯನ್ನಿಟ್ಟಿರುತ್ತಾರೆ. ಸನ್ಯಾಸತ್ವ ಸ್ವೀಕರಿಸಿರುವ ಬಹುತೇಕರು ಕೋಟ್ಯಾಧೀಶರು, ಅವರ ತಂದೆ, ತಾಯಿಗಳು ಸಿರಿವಂತರಾಗಿದ್ದು, ಮನೆಯಲ್ಲಿ ಯಾವುದೇ ಕೊರತೆಗಳಿರುವುದಿಲ್ಲ. ಆದರೆ, ಆಡಂಬರ ಜೀವನ, ಮಾನವ ಸಂಬಂಧಗಳಲ್ಲಿ ಯಾವುದೇ ಅರ್ಥವಿಲ್ಲ ಎಂಬ ವೈರಾಗ್ಯದಿಂದಲೇ ಸನ್ಯಾಸತ್ವ ಸ್ವೀಕರಿಸುತ್ತಾರೆ ಎಂದು ಜೈನ ಮುನಿಗಳು ಹೇಳುತ್ತಾರೆ. ಯಾವುದೇ ವಸ್ತುಗಳ ಮೇಲೆ ಮೇಲೆ ವ್ಯಾಮೊಹ ಇಲ್ಲದೇ ಕೇವಲ ಭಿಕ್ಷೆಯಿಂದಲೇ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಜೈನ ಸಮುದಾಯವಲ್ಲದೇ, ಶುದ್ಧ ಸಸ್ಯಹಾರಿ ಕುಟುಂಬದಿಂದ ಆತಿಥ್ಯ ಆಹ್ವಾನ ಬಂದರೆ ಖಂಡಿತಾ ಭಿಕ್ಷೆ ಸ್ವೀಕರುತ್ತಾರಂತೆ ಈ ಜೈನ ಮುನಿಗಳು.

Latest Videos
Follow Us:
Download App:
  • android
  • ios