Asianet Suvarna News Asianet Suvarna News

ತಿರುಪತಿ ದೇವಸ್ಥಾನಕ್ಕೆ ಒಂದೇ ದಿನ 75,000 ಭಕ್ತರ ಭೇಟಿ: ದಾಖಲೆ

ಇಲ್ಲಿನ ವೆಂಕಟೇಶ್ವರ ದೇವರ ದರ್ಶನಕ್ಕೆ ಶುಕ್ರವಾರ 75,000ಕ್ಕೂ ಅಧಿಕ ಭಕ್ತರು ಆಗಮಿಸುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ಇದೇ ಮೊದಲ ಬಾರಿಗೆ ತಿರುಮಲ ತಿರುಪತಿ ದೇವಸ್ಥಾನಗಳಿಗೆ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಭಕ್ತರ ದಂಡು ಹರಿದು ಬಂದಿದೆ.

75000 devotees visit Tirupati temple in a single day, a record created akb
Author
First Published Oct 2, 2022, 8:06 AM IST

ತಿರುಮಲ: ಇಲ್ಲಿನ ವೆಂಕಟೇಶ್ವರ ದೇವರ ದರ್ಶನಕ್ಕೆ ಶುಕ್ರವಾರ 75,000ಕ್ಕೂ ಅಧಿಕ ಭಕ್ತರು ಆಗಮಿಸುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ಇದೇ ಮೊದಲ ಬಾರಿಗೆ ತಿರುಮಲ ತಿರುಪತಿ ದೇವಸ್ಥಾನಗಳಿಗೆ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಭಕ್ತರ ದಂಡು ಹರಿದು ಬಂದಿದೆ.

ವಾರ್ಷಿಕ ಬ್ರಹ್ಮರಥೋತ್ಸವದ (Brahma rathostava) ಹಿನ್ನೆಲೆಯಲ್ಲಿ ಎಲ್ಲ ವಿಐಪಿ ದರ್ಶನ (VIP Darshan) ವ್ಯವಸ್ಥೆಯನ್ನು ಸೆ.27 ರಿಂದ ಅ.5 ರವರೆಗೆ ಟಿಟಿಡಿ ಟ್ರಸ್ಟ್‌ (TTD Trust) ರದ್ದುಗೊಳಿಸಿದ್ದು, ಎಲ್ಲ ಭಕ್ತರಿಗೆ ಉಚಿತ ದರ್ಶನ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಭಕ್ತರ ಸಂಖ್ಯೆ ದಾಖಲೆ ಬರೆದಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್‌ (Tirumala Tirupati temple Trust) ಹೇಳಿದೆ. ಒಟ್ಟು 75,382 ಭಕ್ತರು ಶುಕ್ರವಾರ ಆಗಮಿಸಿದ್ದರು. ಈ ವೇಳೆ 2.85 ಕೋಟಿ ರು. ದೇಣಿಗೆ ಸಂಗ್ರಹವಾಗಿದೆ. ಭಕ್ತರಿಗೆ ಗ್ಯಾಲರಿಗಳ (Gallery) ಮೂಲಕ ಬ್ರಹ್ಮರಥೋತ್ಸವವನ್ನು ವೀಕ್ಷಣೆ ಮಾಡುವ ಅವಕಾಶವನ್ನು ನೀಡಲಾಗಿದೆ ಎಂದು ಟಿಟಿಡಿ ಹೇಳಿದೆ.
 

ತಿರುಪತಿ ದೇವಸ್ಥಾನಕ್ಕೆ 1.02 ಕೋಟಿ ದೇಣಿಗೆ ನೀಡಿದ ಮುಸ್ಲಿಂ ಕುಟುಂಬ

ಅಪರೂಪದ ವಿದ್ಯಮಾನದಲ್ಲಿ ಕೆಲ ದಿನಗಳ ಹಿಂದೆ ಮುಸ್ಲಿಂ ದಂಪತಿಯು ಜಗತ್ಪ್ರಸಿದ್ಧ ತಿರುಪತಿ ತಿರುಮಲ ಕ್ಷೇತ್ರಕ್ಕೆ 1.02 ಕೋಟಿ ರೂಪಾಯಿಗಳ ದಾನ ಮಾಡುವ ಮೂಲಕ ಅಚ್ಚರಿಗೆ ಕಾರಣರಾಗಿದ್ದರು. ಚೆನ್ನೈ ಮೂಲದ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ದಂಪತಿಯೇ ತಿರುಪತಿ ವೆಂಕಟೇಶ್ವರನ ಸನ್ನಿಧಿಗೆ ಈ ಪ್ರಮಾಣದ ದಾನ ಮಾಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿರುವವರು. 

ವಿಶ್ವದ ಅತ್ಯಂತ ಶ್ರೀಮಂತ ದೇವಾಲಯವೆನಿಸಿಕೊಂಡಿರುವ ತಿರುಪತಿ ಕ್ಷೇತ್ರದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಗೆ ಈ ದಂಪತಿಯು ತಮ್ಮ ಕೊಡುಗೆ ನೀಡಿದ್ದಾರೆ. ದೇವಸ್ಥಾನದ ರಂಗನಾಯಕುಲ ಮಂಟಪದಲ್ಲಿ ಟಿಟಿಡಿ(Tirumala Tirupati Devasthanam) ಇಒ ಎವಿ ಧರ್ಮಾ ರೆಡ್ಡಿ ಅವರಿಗೆ ಡಿಡಿ ಹಸ್ತಾಂತರಿಸಿದ್ದಾರೆ. ಇದರಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ರೂ.87 ಲಕ್ಷ ಮೌಲ್ಯದ ಪೀಠೋಪಕರಣಗಳು ಮತ್ತು ಪಾತ್ರೆಗಳು, ಎಸ್‌ವಿ ಅನ್ನಪ್ರಸಾದ ಟ್ರಸ್ಟ್‌ಗೆ ರೂ.15 ಲಕ್ಷದ ಡಿಡಿಯನ್ನು ಒಳಗೊಂಡಿದೆ. 

ತಿರುಪತಿ ಯಾತ್ರೆ : ಆ.15ರವರೆಗೆ ಬುಕ್ ಮಾಡಿದವರಿಗೆ ಮಾತ್ರ ತಿಮ್ಮಪ್ಪನ ಭೇಟಿಗೆ ಅವಕಾಶ

ಬಾಲಾಜಿ ದೇವಸ್ಥಾನ ಎಂದೂ ಕರೆಯಲ್ಪಡುವ ದೇವಸ್ಥಾನಕ್ಕೆ ಅಬ್ದುಲ್ ಘನಿ ಎಂಬ ಉದ್ಯಮಿ ದೇಣಿಗೆ ನೀಡಿರುವುದು ಇದೇ ಮೊದಲೇನಲ್ಲ. 2020ರಲ್ಲಿ, ಅವರು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ದೇವಾಲಯದ ಆವರಣದಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸಲು ಬಹು ಆಯಾಮದ ಟ್ರಾಕ್ಟರ್-ಮೌಂಟೆಡ್ ಸ್ಪ್ರೇಯರ್ ಅನ್ನು ದೇಣಿಗೆ ನೀಡಿದ್ದರು. ಇದಕ್ಕೂ ಮುನ್ನ ದೇವಸ್ಥಾನಕ್ಕೆ ತರಕಾರಿ ಸಂರಕ್ಷಿಸಿ ಸಾಗಿಸಲು ರೂ.35 ಲಕ್ಷದ ರೆಫ್ರಿಜರೇಟರ್ ಟ್ರಕ್ ಅನ್ನು ಕೊಡುಗೆಯಾಗಿ ನೀಡಿದ್ದರು.

ತಿರುಪತಿ ದೇಗುಲದ ಸ್ಥಿರಾಸ್ತಿ ಎಷ್ಟು ಗೊತ್ತಾ?

ವಿಶ್ವದ ಅತ್ಯಂತ ಶ್ರೀಮಂತ ದೇಗುಲಗಳ ಪೈಕಿ ಒಂದಾದ ತಿರುಪತಿ ತಿಮ್ಮಪ್ಪ ದೇವಾಲಯ, ಜಮೀನು ಸೇರಿದಂತೆ ಒಟ್ಟು 85,705 ಕೋಟಿ ರು. ಮೌಲ್ಯದಷ್ಟು ಸ್ಥಿರಾಸ್ತಿ ಹೊಂದಿದೆ ಎಂದು ದೇಗುಲದ ಆಡಳಿತ ಮಂಡಳಿ ಹೇಳಿದೆ. ದೇಗುಲದ ಒಟ್ಟು ಸ್ಥಿರಾಸ್ತಿ ಕುರಿತು ಶ್ವೇತಪತ್ರ ಬಿಡುಗಡೆ ಮಾಡಿರುವ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನ ಸಮಿತಿ) ಮುಖ್ಯಸ್ಥ ವೈ.ವಿ.ಸುಬ್ಬಾರೆಡ್ಡಿ, ದೇಶದ ವಿವಿಧ ಕಡೆ ಒಟ್ಟು 7123 ಎಕರೆ ಪ್ರದೇಶದಲ್ಲಿ ತಿರುಪತಿ ದೇಗುಲದ 960 ಸ್ಥಿರಾಸ್ತಿಗಳಿವೆ ಎಂದು ಮಾಹಿತಿ ನೀಡಿದ್ದಾರೆ.

ತಿರುಪತಿ ಬಳಿಕ ಗುರುವಾಯೂರು ದೇವಸ್ಥಾನಕ್ಕೆ Mukesh Ambani ಭೇಟಿ: ಕೋಟಿ ಕೋಟಿ ರೂ. ಕಾಣಿಕೆ ಸಲ್ಲಿಕೆ

ದೇಗುಲದ ಆಡಳಿತದಲ್ಲಿ ಪಾರದರ್ಶಕತೆ ತರಲು 2020ರಲ್ಲೇ ದೇಗುಲದ ಆಸ್ತಿ ಕುರಿತು ಶ್ವೇತಪತ್ರ ಹೊರಡಿಸಲು ಟಿಟಿಡಿ ನಿರ್ಧರಿಸಿತ್ತು. ಆದರೆ ಕೋವಿಡ್‌ ಮತ್ತಿತರೆ ಕಾರಣಗಳಿಂದಾಗಿ ಆಸ್ತಿ ಸಮೀಕ್ಷೆ ಮತ್ತು ಸರ್ವೇ ಸಾಧ್ಯವಾಗಿರಲಿಲ್ಲ. ಇದೀಗ ಆ ಕಾರ್ಯ ಪೂರ್ಣಗೊಂಡಿದ್ದು, ದೇಗುಲವು ಜಮೀನು ಸೇರಿದಂತೆ ಒಟ್ಟು 85,705 ಕೋಟಿ ರು.ಮೌಲ್ಯದ ಸ್ಥಿರಾಸ್ತಿ ಹೊಂದಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಸುಬ್ಬಾರೆಡ್ಡಿ ಹೇಳಿದ್ದಾರೆ.

Follow Us:
Download App:
  • android
  • ios