ಬೆಂಗಳೂರಿನಲ್ಲಿ 'ಗಲ್ಲಿ ಗಣೇಶ ಕೂರಿಸಲು 63 ಸಿಂಗಲ್ ವಿಂಡೋ ವ್ಯವಸ್ಥೆ' ಮಾಡಿದ ಬಿಬಿಎಂಪಿ!
ಬೆಂಗಳೂರು ನಗರದಲ್ಲಿ ಗಣೇಶ ಕೂರಿಸಲು ಅನುಮತಿ ಪಡೆಯುವುದಕ್ಕೆ ಬಿಬಿಎಂಪಿ ವತಿಯಿಂದ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಪದ್ದತಿ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಬೆಂಗಳೂರು (ಆ.21): ಬೆಂಗಳೂರು ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ (Single Window System) ಅನುಮತಿ ಪತ್ರವನ್ನು ಪಡೆಯಬಹುದಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಬುಧವಾರ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ನಡೆದ 'ಶಾಂತಿ ಸೌಹಾರ್ದತೆ ಸಭೆ'ಯನ್ನು ಉದ್ದೇಶಿಸಿ ಮಾತನಾಡಿದರು. ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು ಎಂದು ತಿಳಿಸಿದರು.
ಸರ್ಕಾರಿ ಬಸ್ಸಿನಲ್ಲಿ ಜನಿಸಿದ ಮಗುವಿಗೆ ಜೀವನಪೂರ್ತಿ ಉಚಿತ ಪ್ರಯಾಣದ ಕೊಡುಗೆ ಕೊಟ್ಟ ಸಾರಿಗೆ ಸಂಸ್ಥೆ!
ಬಿಬಿಎಂಪಿಯ 63 ಉಪ ವಿಭಾಗಗಳಲ್ಲಿ ತೆರೆದ ಏಕಗವಾಕ್ಷಿ ಕೇಂದ್ರಗಳ ವಿಳಾಸ ಹಾಗೂ ಏಕಗವಾಕ್ಷಿ ಕೇಂದ್ರಗಳಲ್ಲಿರುವ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ ನೋಡಲ್ ಅಧಿಕಾರಿಗಳ ವಿವರವಾದ ಮಾಹಿತಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ. ಅದರ ಅನುಸಾರ ಗಣೇಶ ಮೂರ್ತಿಗಳನ್ನಿಡುವವರು ಏಕಗವಾಕ್ಷಿ ಸ್ಥಳಕ್ಕೆ ಭೇಟಿ ನೀಡಿ ಒಂದೇ ಸ್ಥಳದಲ್ಲಿ ಅನುಮತಿ ಪಡೆಯಬಹುದೆಂದು ಹೇಳಿದರು.
ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿರುತ್ತದೆ. ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಲಾಗಿದ್ದು, ಯಾರೂ ಕೂಡಾ ಪಿಒಪಿ ಗಣೇಶ ಮೂರ್ತಿಗಳನ್ನು ಖರೀದಿಸದೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸಲು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ಹಲಸೂರು ಕೆರೆ ಸೇರಿದಂತೆ ಇನ್ನಿತರೆ ಪ್ರಮುಖ ಕೆರೆಗಳ ಕಲ್ಯಾಣಿಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಂಡು ಸರಿಯಾಗಿ ವಿಸರ್ಜನೆ ಮಾಡಲು ಅವಕಾಶ ಮಾಡಿಕೊಡಲಾಗುವುದು. ಪ್ರಮುಖ ಸ್ಥಳ/ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ(ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
ರಾಜೀನಾಮೆ.. ಇತಿಹಾಸ.. ರಹಸ್ಯ! ಭ್ರಷ್ಟಾಚಾರದ ಆರೋಪಕ್ಕೆ ಪದತ್ಯಾಗ ಮಾಡ್ತಾರಾ ಸಿಎಂ!
ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಕಲ್ಯಾಣಿಗಳ ಬಳಿ ಭದ್ರತೆಯ ದೃಷ್ಠಿಯಿಂದ ಪೊಲೀಸ್ ವ್ಯವಸ್ಥೆಯ ಜೊತೆಗೆ ಬ್ಯಾರಿಕೇಡಿಂಗ್, ಸಿಸಿಟಿವಿ, ವಿದ್ಯುತ್ ದ್ವೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಗಳ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.