ಭಾರತ ಹುಣ್ಣಿಮೆ: ರೇಣುಕಾಂಬೆ ದರ್ಶನಕ್ಕೆ ಭಕ್ತರ ದಂಡು..!
ದೇವರ ಹೆಸರಿನಲ್ಲಿ ಭಕ್ತರು ಧಾರ್ಮಿಕ ಪೂಜಾ ವಿಧಿ ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವುದು, ವಿವಿಧ ಸೇವೆ ಮುಂತಾದವುಗಳನ್ನು ಆಚರಿಸಿದರು. ಭಕ್ತರು ಸ್ಥಳದಲ್ಲೇ ಒಲೆ ಹೂಡಿ ಕರಿದ ಹೋಳಿಗೆ, ರೊಟ್ಟಿ, ಬುತ್ತಿ ತಯಾರಿಸಿ ರೇಣುಕಾಂಬೆಗೆ ನ್ಯೆವೇದ್ಯ ಅರ್ಪಿಸಿದರು. ನಂತರ ತಮ್ಮ ಬಂಧು ಬಳಗದವರ ಜತೆ ಸಾಮೂಹಿಕ ಭೋಜನ ಮಾಡಿದರು. ಸಂಜೆ ವೇಳೆಗೆ ದೇವಸ್ಥಾನದಿಂದ ಆರಂಭವಾದ ಶ್ರೀದೇವಿಯ ಪಲ್ಲಕ್ಕಿ ಉತ್ಸವ ಮಂಗಳಾರತಿ ಕಟ್ಟೆ, ರಥ ಬೀದಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯ ಮೇಳಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
ಸೊರಬ(ಫೆ.25): ತಾಲೂಕಿನ ಚಂದ್ರಗುತ್ತಿ ಗ್ರಾಮದ ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ರೇಣುಕಾಂಬ ದೇವಸ್ಥಾನಕ್ಕೆ ಭಾರತ ಹುಣ್ಣಿಮೆ ಪ್ರಯುಕ್ತ ಸಾವಿರಾರು ಭಕ್ತರು ಶನಿವಾರ ಆಗಮಿಸಿ ಶ್ರದ್ಧೆಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.
ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮಲೆನಾಡಿನ ಆರಾಧ್ಯದೇವಿ ರೇಣುಕಾದೇವಿ ದರ್ಶನ ಪಡೆದು ಉಧೋ ಉಧೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.
ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವರ ಹೆಸರಿನಲ್ಲಿ ಭಕ್ತರು ಧಾರ್ಮಿಕ ಪೂಜಾ ವಿಧಿ ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವುದು, ವಿವಿಧ ಸೇವೆ ಮುಂತಾದವುಗಳನ್ನು ಆಚರಿಸಿದರು. ಭಕ್ತರು ಸ್ಥಳದಲ್ಲೇ ಒಲೆ ಹೂಡಿ ಕರಿದ ಹೋಳಿಗೆ, ರೊಟ್ಟಿ, ಬುತ್ತಿ ತಯಾರಿಸಿ ರೇಣುಕಾಂಬೆಗೆ ನ್ಯೆವೇದ್ಯ ಅರ್ಪಿಸಿದರು. ನಂತರ ತಮ್ಮ ಬಂಧು ಬಳಗದವರ ಜತೆ ಸಾಮೂಹಿಕ ಭೋಜನ ಮಾಡಿದರು. ಸಂಜೆ ವೇಳೆಗೆ ದೇವಸ್ಥಾನದಿಂದ ಆರಂಭವಾದ ಶ್ರೀದೇವಿಯ ಪಲ್ಲಕ್ಕಿ ಉತ್ಸವ ಮಂಗಳಾರತಿ ಕಟ್ಟೆ, ರಥ ಬೀದಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯ ಮೇಳಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
ಶಿವರಾತ್ರಿಯಂದು ಈ ಕೆಲಸ ಮಾಡಿದ್ರೆ ಮದುವೆಯ ಯೋಗ ಕೂಡಿ ಬರುತ್ತಂತೆ
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದ ರಥ ಬೀದಿಯಲ್ಲಿ ವ್ಯಾಪಾರವಹಿವಾಟು ಜೋರಾಗಿಯೇ ನಡೆಯಿತು. ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಆಡಳಿತ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸಿದರು.
ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಕ್ರಮ ವಹಿಸಲಾಗಿದೆ. ಟ್ಯಾಂಕರ್ ಮತ್ತು ಕೊಳವೆ ಬಾವಿ ಮೂಲಕ ಕುಡಿಯುವ ನೀಡಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ದೇವಸ್ಥಾನದ ಆವರಣದಲ್ಲಿರುವ ಮಳಿಗೆಗಳನ್ನು ಫೆ. ೨೯ರಂದು ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ದೇವಸ್ಥಾನದ ಆಡಳಿತ ಮಂಡಳಿಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಶ್ರೀ ರೇಣುಕಾಂಬ ದೇವಸ್ಥಾನ ಆಡಳಿತ ಮಂಡಳಿ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ತಿಳಿಸಿದ್ದಾರೆ.