Asianet Suvarna News Asianet Suvarna News

ಚಿಕ್ಕಮಗಳೂರಲ್ಲಿ ನವರಾತ್ರಿ ಸಂಭ್ರಮ: ಭಕ್ತರಿಗೆ ದರ್ಶನದ ಭಾಗ್ಯ ನೀಡಿದ ಶೃಂಗೇರಿ ಶಾರದೆ, ಅನ್ನಪೂಣೇಶ್ವರಿ..!

ಹೊರನಾಡು, ಶೃಂಗೇರಿಯಲ್ಲಿ ನವರಾತ್ರಿ ಸಂಭ್ರಮ , ಮೋಹಿನಿ ಅಲಂಕಾರದಲ್ಲಿ ಶೃಂಗೇರಿ ಶಾರದೆ, ಅಶ್ವರೂಢಾ ಗೌರೀ ಅಲಂಕಾರದಲ್ಲಿ ಹೊರನಾಡಿನ ಅನ್ನಪೂಣೇಶ್ವರಿ 

Devotees Visited to Temples During Dasara Festival in Chikkamagaluru grg
Author
First Published Oct 21, 2023, 8:28 PM IST

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು 

ಚಿಕ್ಕಮಗಳೂರು(ಅ.21):  ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಹೊರನಾಡಿನ ಧಾರ್ಮಿಕ ಕ್ಷೇತ್ರಗಳಲ್ಲಿ ನವರಾತ್ರಿ ಸಂಭ್ರಮ ಮನೆಮಾಡಿದೆ. ಶೃಂಗೇರಿ, ಹೊರನಾಡಿನ ದೇವಿ ದರ್ಶನ ಪಡೆಯಲು ಭಕ್ತ ಸಾಗರವೇ ಹರಿದುಬಂದಿದೆ. ಇಂದು ಶೃಂಗೇರಿ ಶಾರದೆ ಮೋಹಿನಿ ಅಲಂಕಾರದಲ್ಲಿ ದರ್ಶನ ನೀಡಿದ್ರೆ, ಅನ್ನಪೂಣೇಶ್ವರಿಗೆ ಅಶ್ವರೂಢಾ ಗೌರೀ ಅಲಂಕಾರದಲ್ಲಿ ಭಕ್ತರಿಗೆ ದರ್ಶನದ ಭಾಗ್ಯ ನೀಡಿದ್ದಳು.

ಶೃಂಗೇರಿ ಶಾರದೆಗೆ ಮೋಹಿನಿ ಅಲಂಕಾರದಲ್ಲಿ : 

ವಿದ್ಯಾಧಿದೇವತೆ ಶೃಂಗೇರಿ ಶಾರದಾಂಭೆ ನವರಾತ್ರಿ 7ನೇ ದಿನವಾದ ಇಂದು ವೈವಿಧ್ಯಮ ಚಿನ್ನದ ಹಾರವನ್ನು ತೊಟ್ಟು, ಕೈಯಲ್ಲಿ ಅಮೃತ ಕಲಶವನ್ನು ಹಿಡಿದು ರಾಕ್ಷಸರನ್ನು ಸಂಹರಿಸಿ ದೇವತೆಗಳಿಗೆ ಅಮೃತವನ್ನು ನೀಡುವ ರೂಪಗೈದು ಭಕ್ತರಿಗೆ ದರ್ಶನ ನೀಡಿದ್ದಳು. ಬೀದಿ ಉತ್ಸವದಲ್ಲಿ ಅಡ್ಡಗದ್ದೆ ಗ್ರಾ.ಪಂ ಭಕ್ತಾದಿಗಳು ಭಾಗವಹಿಸಿದರು.ನವರಾತ್ರಿ ಹಿನ್ನಲೆಯಲ್ಲಿ ಶ್ರೀ ಮಠದಲ್ಲಿ ಪ್ರತಿದಿನದಂತೆ ಇಂದು ಕೂಡ ಪಾರಾಯಣ,ಕುಂಕುಮಾರ್ಚನೆ ಪೂಜೆಗಳು ನೆರವೇರಿದವು.ಬೀದಿ ಉತ್ಸವದ ಜೊತೆಗೆ ಪ್ರತಿನಿತ್ಯ ಸಂಜೆ 6.30 ಕ್ಕೆ ಶ್ರೀಶಾರದಾಂಬೆಗೆ ರಾಜಬೀದಿಯಲ್ಲಿ ರಥೋತ್ಸವ ನಡೆಯುಲಿದೆ.ನವರಾತ್ರಿಯ ಅಂಗವಾಗಿ ಶೃಂಗೇರಿ ಶಾರದಾಂಭೆ ದೇಗುಲದ ಒಳಭಾಗ, ಹೊರಭಾಗದಲ್ಲಿ ಹೂವಿನ ಅಲಂಕಾರ ಭಕ್ತರನ್ನು ಆಕರ್ಷಣೆ ಮಾಡುತ್ತಿದೆ.

ನವರಾತ್ರೀಲಿ ಕರಣಿಕ ಮುತ್ತೈದೆಗೆ ಬಾಗೀನಾ ಕೊಡೋದ್ರಿಂದ ಏನು ಶುಭ?

ಅಶ್ವರೂಢಾ ಗೌರೀಯಾಗಿ ಕಂಗೊಳಿಸಿದ ಅನ್ನಪೂಣೇಶ್ವರಿ : 

ಶರನ್ನವರಾತ್ರಿ  ಮಹೋತ್ಸವದ ಅಂಗವಾಗಿ ಹೊರನಾಡಿನ ಮಾತೆ ಅನ್ನಪೂರ್ಣೇಶ್ವರಿ ಶನಿವಾರ ಅಶ್ವರೂಢಾ ಗೌರೀಯಾಗಿ ಕಂಗೊಳಿಸಿದಳು.ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ  ಸಪ್ತಶತಿ ಪಾರಾಯಣ,ವೇದ ಪಾರಾಯಣ,ಸುಂದರಕಾಂಡ ಪಾರಾಯಣ,ಕುಂಕುಮಾರ್ಚನೆ ಮತ್ತು  ಶ್ರೀ ವಾಗೀಶ್ವರೀ ಮೂಲಮಂತ್ರ ಹೋಮ ನೆರವೇರಿತು.ಬೆಳಿಗ್ಗೆ 8.30 ಗೆ ನಡೆದ ಪೂರ್ಣಾಹುತಿಯಲ್ಲಿ ದೇವಸ್ಥಾನದ ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ಪಾಲ್ಗೊಂಡರು.ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ವಿದುಷಿ ಧನ್ಯಾ ದಿನೇಶ್ ರುದ್ರಪಟ್ಟಣಂ ಚೆನೈ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಸಂಜೆ ಅರ್ಥ ನೃತ್ಯ ಕಲಾ ಮಂದಿರ ಬೆಂಗಳೂರು ವಿದುಷಿ ಶ್ರೀಮತಿ ಸ್ಮಿತ ಶ್ರೀಪತಿ ಎಂ.ನಿಶಾಂತ್ ಮತ್ತು ತಂಡ ಬೆಂಗಳೂರು ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಸಂಜೆ ಶ್ರೀ ಮಹಾಗಣಪತಿ ಮತ್ತು ಶಿಷ್ಯವೃಂದದವರಿಂದ ನವದುರ್ಗ ವೈಭವ ಭರತನಾಟ್ಯ ಕಾರ್ಯಕ್ರಮ ನಡೆಯಿತು.

ನಾಳೆ ಅನ್ನಪೂರ್ಣೇಶ್ವರಿಗೆ ವೃಷಭಾರೂಢಾ ತ್ರಿಮೂರ್ತಿ ಅಲಂಕಾರ ಪೂಜೆ  ಮತ್ತು ಶ್ರೀ ದುರ್ಗಾ ಮೂಲಮಂತ್ರ ಹೋಮ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಶಾಸ್ತ್ರೀಯ ಸಂಗೀತ ಸಂಜೆ ಯಕ್ಷಗಾನ ನಡೆಯಲಿದೆ.

Follow Us:
Download App:
  • android
  • ios