ವರ್ಷದ ಬಳಿಕ ಬಾಗಿಲು ತೆರೆದ ಹಾಸನಾಂಬೆ ದೇಗುಲ, ನ.14ರವರೆಗೆ ದೇವರ ದರ್ಶನ

ಹಾಸನಾಂಬ ದೇವರ ಗರ್ಭಗುಡಿಯ ಬಾಗಿಲು ಗುರುವಾರ ಮಧ್ಯಾಹ್ನ 12 ಗಂಟೆಗೆ ತೆರೆಯಲಾಗಿದೆ. ಸಾರ್ವಜನಿಕರಿಗೆ ನ.14ರವರೆಗೆ ದರ್ಶನಕ್ಕೆ ಅವಕಾಶ ಇರುತ್ತದೆ.

Hasanamba Temple doors opened pilgrims have visit to God till November 14 sat

ಹಾಸನ (ನ.02): ಐತಿಹಾಸಿಕ ಹಾಗೂ ಪವಾಡ ಸ್ವರೂಪಿಣಿಯಾದ ಹಾಸನದ ಹಾಸನಾಂಬ ದೇವರ ಗರ್ಭಗುಡಿಯ ಬಾಗಿಲು ಗುರುವಾರ ಮಧ್ಯಾಹ್ನ 12 ಗಂಟೆಗೆ ತೆರೆಯಲಾಗಿದೆ. ಇನ್ನು ಸಾರ್ವಜನಿಕರಿಗೆ ನ.3ರಿಂದ ನ.14ರವರೆಗೆ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ ಇರುತ್ತದೆ.

ವರ್ಷಕ್ಕೊಮ್ಮೆ ದರ್ಶನ ನೀಡೋ ಹಾಸನದ ಅಧಿದೇವತೆ ಹಾಸನಾಂಬೆ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ನವೆಂಬರ್ 2 ರಿಂದ 15 ವರೆಗೆ ಹಾಸನಾಂಬ ಉತ್ಸವ ಜರುಗಲಿದೆ. ಹಾಸನಾಂಬೆಯ ದರ್ಶನೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ನ.2ರಿಂದ ಆರಂಭವಾಗಲಿರುವ ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಹಾಸನ ಜಿಲ್ಲಾಡಳಿತದಿಂದ ವಿಶೇಷ ಪ್ಯಾಕೇಜ್‌ಗಳನ್ನು ಆಯೋಜನೆ ಮಾಡಲಾಗಿದೆ. 

ಕಾಂಗ್ರೆಸ್‌ನಲ್ಲಿ ಮತ್ತೆ ಬಾಂಬ್ ಸಿಡಿಸಿದ ಸಚಿವ ರಾಜಣ್ಣ: ಡಿಕೆಶಿ ಸೇರಿ 2 ಡಜನ್‌ ಜನರು ಸಿಎಂ ಆಗಲು ಅರ್ಹರಿದ್ದಾರೆ!

ಆದರೆ ಇದೇ ಮೊದಲ ಬಾರಿಗೆ ದೇವಿಯ ದರ್ಶನದ ಜೊತೆ ಜೊತೆಯಲ್ಲೇ ಹಲವು ರೀತಿಯ ಹೊಸ ಪ್ರಯೋಗ, ನವ ವಿಧಾನ ಅಳವಡಿಸಲಾಗುತ್ತಿದೆ. ವಿವಿಧೆಡೆಗಳಿಂದ ಬರುವ ಭಕ್ತರು, ಪ್ರವಾಸಿಗರಿಗೆ ಹಾಸನಾಂಬೆ ದರ್ಶನ ದರ್ಶನ ಮಾಡಿಸುವುದರ ಜೊತೆಗೆ ಅವರಿಗೆ ಹಾಸನ ಜಿಲ್ಲೆಯ ಐತಿಹಾಸಿಕ ಮಹತ್ವ, ಪ್ರಾಕೃತಿಕ ಸೊಬಗು, ಶಿಲ್ಪಕಲೆ ಹಾಗೂ ಸಾಂಸ್ಕೃತಿಕ ವೈಭವ ಪರಿಚಯಿಸುವುದರ ಜೊತೆಗೆ ಮನರಂಜನೆ, ಮನೋಲ್ಲಾಸ ಉಣ ಬಡಿಸುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಇದು ಯಶಸ್ಸಿಯಾದರೆ ಒಟ್ಟಾರೆ ಭಕ್ತರು ಹಾಗೂ ಜನಮಾನಸದಲ್ಲಿ ಉಳಿಯುವ ಉತ್ಸವ ಇದಾಗಲಿದೆ. 

12 ದಿನ 24 ಗಂಟೆಯೂ ದರ್ಶನ: ಮೊದಲಿಗೆ ದೇವಿಯ ಗರ್ಭಗುಡಿ ಬಾಗಿಲು ತೆರೆಯುವ ನ.2 ಹಾಗೂ ಮುಚ್ಚುವ ನ.15 ಹೊರತು ಪಡಿಸಿ ಉಳಿದ 12 ದಿನಗಳ ಕಾಲ ದಿನದ 24 ಗಂಟೆಯೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದಾಗಿ ಡಿಸಿ ಸತ್ಯಭಾಮಾ ಹೇಳಿದ್ದಾರೆ. ಇದೇ ಮೊದಲ ಬಾರಿಗೆ ಬ್ಯಾರಿಕೇಡ್ ದೂರವನ್ನು 10.8 ಕಿಮೀ ಉದ್ದಕ್ಕೆ ಹಿಗ್ಗಿಸಲಾಗಿದೆ. ಭಕ್ತರಿಗೆ ಬಿಸಿಲು ಮಳೆಯಲ್ಲಿ ರಕ್ಷಣೆ ನೀಡಲು ಜರ್ಮನ್ ಟೆಂಟ್ ಅಳವಡಿಕೆ ಜೊತೆಗೆ ಸರತಿ ಸಾಲಿನಲ್ಲಿ ಕಾಲು ಸುಡದಂತೆ ಮ್ಯಾಟ್ ಹಾಸಲಾಗುತ್ತಿದೆ.

Bengaluru ನಾಲ್ಕು ದಿನ ಆಹಾರವಿಲ್ಲದೇ ಬಳಲಿದ್ದ ಚಿರತೆ ಎದೆಗೆ ಗುಂಡಿಟ್ಟು ಕೊಂದ ಅರಣ್ಯ ಇಲಾಖೆ: ಈ ಸಾವು ನ್ಯಾಯವೇ?

ಹಾಸನ ಜೊತೆಗೆ ಜಿಲ್ಲೆಯ ದರ್ಶನ: ಈ ಸಲದ ಉತ್ಸವದ ಮತ್ತೊಂದು ವಿಶೇಷತೆ ಎಂದರೆ ಆಗಸದಿಂದ ಹಾಸನ ಎಂಬ ವಿನೂತನ ವೈಮಾನಿಕ ವೀಕ್ಷಣೆ ಮಾಡಿರುವುದು. ನ.3 ರಿಂದ 6 ರವರೆಗೆ ಒಬ್ಬರು 4,300 ರೂ. ಪಾವತಿಸಿದರೆ 6-7 ನಿಮಿಷ ಆಗಸದಲ್ಲಿ ಹಾರಾಡಿ ಹಾಸನ ನಗರ, ಸೀಗೆಗುಡ್ಡ, ಮಳೆ ಮಲ್ಲೇಶ್ವರ ದೇವಾಲಯ, ಗೆಂಡೆಕಟ್ಟೆ ವನ್ಯಧಾಮವನ್ನು ಮೇಲಿಂದ ಕಣ್ತುಂಬಿಕೊಳ್ಳಬಹುದಾಗಿದೆ. ಹೆಲಿಕಾಪ್ಟರ್ ಸರ್ಕಾರಿ ಕಾಲೇಜು ಆವರಣದಿಂದ ಹೊರಟು ಅಲ್ಲೇ ಬಂದು ಇಳಿಯಲಿದೆ. ಇಂದು ಒಂದಾದರೆ ಇಡೀ ನಗರದ ತುಂಬೆಲ್ಲಾ ಖಾಸಗಿ ಕಟ್ಟಡ ಸೇರಿದಂತೆ ಸರ್ಕಾರಿ ಕಟ್ಟಡ, ಪ್ರಮುಖ ರಸ್ತೆ ಹಾಗೂ ಜಿಲ್ಲಾದ್ಯಂತ ಎ ಮತ್ತು ಬಿ ಗ್ರೇಡ್ ದೇವಾಲಯಗಳಲ್ಲಿ ಅಲಂಕಾರ ಜೊತೆಗೆ ನಿತ್ಯ ಪೂಜೆ ಮಾಡಲು ಸೂಚಿಸಲಾಗಿದೆ.

Latest Videos
Follow Us:
Download App:
  • android
  • ios