'ಮುಕ್ಕೋಟಿ ಚೆಲ್ಲೀತಲೇ ಕಲ್ಯಾಣ ಕಟ್ಟೀತಲೇ ಪರಾಕ್': ದೇವರಗುಡ್ಡ ಕಾರ್ಣಿಕ
ದೇವರಗುಡ್ಡದಲ್ಲಿ ಕಾರ್ಣಿಕೋತ್ಸವದಲ್ಲಿ ಗೊರವಪ್ಪ "ಮುಕ್ಕೋಟಿ ಚೆಲ್ಲೀತಲೇ ಕಲ್ಯಾಣ ಕಟ್ಟೀತಲೇ ಪರಾಕ್" ಎಂದು ಕಾರ್ಣಿಕ ನುಡಿದಿದ್ದಾರೆ.
ಹಾವೇರಿ (ಅ.23): ರಾಜ್ಯದ ಐತಿಹಾಸಿಕ ಶ್ರೀ ಕ್ಷೇತ್ರ ದೇವರಗುಡ್ಡದಲ್ಲಿ ದಸರಾ ಹಬ್ಬದ ವೇಳೆ ನಡೆಯುವ ಕಾರ್ಣಿಕೋತ್ಸವದಲ್ಲಿ ದೈವವಾಣಿ ನುಡಿಯುವ ಗೊರವಪ್ಪ "ಮುಕ್ಕೋಟಿ ಚೆಲ್ಲೀತಲೇ ಕಲ್ಯಾಣ ಕಟ್ಟೀತಲೇ ಪರಾಕ್" ಎಂದು ಕಾರ್ಣಿಕ ನುಡಿದಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವ ನುಡಿಗೆ ಲಕ್ಷಾಂತರ ಜನ ಸಾಕ್ಷಿಯಾಗಿದ್ದಾರೆ. ವಿಜಯ ದಶಮಿಯ ಆಯುಧ ಪೂಜಾ ದಿನದಂದು ಐತಿಹಾಸಿಕ ಸುಕ್ಷೇತ್ರ ದೇವರಗುಡ್ಡದಲ್ಲಿ ಇಂದು (ಸೋಮವಾರ) ಗೊರವಪ್ಪನವರು ಕಾರ್ಣೀಕ ನುಡಿದಿದ್ದಾರೆ. ಮುಕ್ಕೋಟಿ ಚೆಲ್ಲೀತಲೇ ಕಲ್ಯಾಣ ಕಟ್ಟೀತಲೇ ಪರಾಕ್ ಎಂದು ದೇವರಗುಡ್ಡದಲ್ಲಿ ಬಿಲ್ಲನ್ನೇರಿ ಗೊರವಪ್ಪ ಕಾರ್ಣೀಕ ನುಡಿದಿದ್ದಾರೆ.
ಭಾರತೀಯ ಸೇನೆಗೆ ಸೇರಿಸುವುದಾಗಿ 150 ಯುವಕರಿಗೆ 1 ಕೋಟಿ ವಂಚಿಸಿದ ಶಿವರಾಜ್ ವಟಗಲ್
ದಸರಾ ಹಬ್ಬದ ಸಮಯದಲ್ಲಿ ನಡೆಯುವ ಮಾಲತೇಶ ದೇವರ ಕಾರ್ಣಿಕೋತ್ಸವ ಬಹಳ ಪ್ರಸಿದ್ಧಿ ಪಡೆದಿದೆ. ವರ್ಷದ ಭವಿಷ್ಯ ವಾಣಿ ಅಂತಲೇ ಜನ ಕಾರ್ಷಿಕೋತ್ಸವವನ್ನು ನಂಬುತ್ತಾರೆ. ಈ ಬಗ್ಗೆ ವಿಶ್ಲೇಷಣೆ ಮಾಡಲಾಗುತ್ತಿದ್ದು, ಕಾರ್ಣಿಕ ದೈವವಾಣಿಯನ್ನು ರಾಜಕೀಯ, ಕೃಷಿ ಹಾಗೂ ಆರ್ಥಿಕ ಬೆಳವಣಿಗೆಗೆ ಸಂಬಂಧಪಟ್ಟಂತೆ ಒಂದು ವರ್ಷದ ಭವಿಷ್ಯವೆಂದೇ ಹೇಳಲಾಗುತ್ತದೆ. ದೇವರಗುಡ್ಡದ ಪ್ರಧಾನ ಅರ್ಚಕ ಸಂತೋಷ್ ಭಟ್ ಅವರು ಕಾರ್ಣಿಕದ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ.
ಬರಗಾಲದಿಂದ ರೈತರಿಗೆ ಸಂಕಷ್ಟ: ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್ ದೈವನುಡಿಯಯ ಬಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಅವರು ವಿಶ್ಲೇಷಣೆ ಮಾಡಿದ್ದಾರೆ. ಈ ಬಾರಿ ಮಳೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಬರಗಾಲ ಎದುರಾಗಿರುವುದರಿಂದ ರೈತರಿಗೆ ಭಾರೀ ನಷ್ಟವಾಗುವ ಸಂಭವ ಇದೆ. ರೈತರು ಭೂಮಿಗೆ ಸುರಿದ ಬಂಡವಾಳ ಕೈಗೆ ವಾಪಸ್ ಬರುವುದು ಕಷ್ಟ ಎಂದು ಈ ಕಾರ್ಣಿಕದ ನುಡಿಯನ್ನು ವಿಶ್ಲೇಷಿಸಲಾಗಿದೆ. ಆದರೆ, ರಾಜಕೀಯವಾಗಿ ಯಾವುದೇ ವಿಶ್ಲೇಷಣೆಯನ್ನೂ ಮಾಡಿಲ್ಲ. ಆದರೆ, ಜನರು ರಾಜಕೀಯದಲ್ಲಿ ಬದಲಾವಣೆ ಆಗುವುದಕ್ಕೆ ಸಾಧ್ಯವಿಲ್ಲ ಎಂಬ ಮಾತು ಕೇಳಿಬಂದಿದೆ.
ವರ್ತೂರು ಸಂತೋಷ್‌ಗೆ ಹುಲಿ ಉಗುರು ಪೆಂಡೆಂಟ್‌ನಿಂದ ಚಿನ್ನದಂಗಡಿ ಮಾಲೀಕನಿಗೂ ಸಂಕಷ್ಟ!
ದೇವರಗುಡ್ಡದ ಮಾಲತೇಶ ದೇವಸ್ಥಾನ ಸುಮಾರು ವರ್ಷಗಳ ಇತಿಹಾಸ ಹೊಂದಿದೆ. ದಸರಾ ಹಬ್ಬದ ಸಮಯದಲ್ಲಿ ದೇವರಗುಡ್ಡದ ಕರಿಯಾಲ ಪ್ರದೇಶದಲ್ಲಿ ನಡೆಯುವ ಮಾಲತೇಶ ದೇವರ ಕಾರ್ಣಿಕ ಕೇಳಲು ಜನರ ದಂಡೇ ನರೆದಿರುತ್ತೆ. ಸುಮಾರು 9 ದಿನಗಳ ಕಾಲ ಕಠಿಣ ಉಪವಾಸ ವ್ರತ ಮಾಡಿ ಗೊರವಪ್ಪ ನಾಗಪ್ಪ ಉರ್ಮಿ ಕಾರ್ಣಿಕ ನುಡಿಯುತ್ತಾರೆ. ಕರಿಯಾಲ ಪ್ರದೇಶಕ್ಕೆ ಡಮರುಗ, ಚಾಟಿ ಏಟಿನ ಸದ್ದಿನ ಮೂಲಕ ಗೊರವಪ್ಪಗಳು ಕಾರ್ಣಿಕದ ಗೊರವಪ್ಪನನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಬರ್ತಾರೆ. ಸಂಜೆಯಾಗುತ್ತಿದ್ದಂತೆ ಆಗ್ತಿದ್ದಂತೆ ಕಾರ್ಣಿಕ ಸ್ಥಳಕ್ಕೆ ಬರೋ ಗೊರವಯ್ಯ 15 ಅಡಿ ಎತ್ತರದ ಬಿಲ್ಲನ್ನೇರಿ ಸದ್ದಲೆ ಅನ್ನುತ್ತಲೇ ಕಿಕ್ಕಿರಿದು ಸೇರಿದ ಜನರ ನಡುವೆ ಕಾರ್ಣಿಕ ನುಡಿಯುತ್ತಾರೆ.
ಸೋಮವಾರ ಸಂಜೆ ವೇಳೆ 15 ಅಡಿ ಬಿಲ್ಲನೇರಿದ ಗೊರವಪ್ಪಜ್ಜ ನಾಗಪ್ಪ ದುರುಗಪ್ಪ ಉರ್ಮಿ ಪ್ರಸ್ತುತ ವರ್ಷದ ಕಾರ್ಣಿಕ ನುಡಿದು ಕೆಳಗೆ ಧುಮುಕಿದರು. ಕಾರ್ಣಿಕ ನುಡಿದ ನಾಗಪ್ಪಜ್ಜ ಪ್ರಸ್ತುತ ವರ್ಷದ ಕಾರ್ಣಿಕ ನುಡಿದು ಮೇಲಿನಿಂದ ಕೆಳಗೆ ಧುಮುಕುತ್ತಲೆ ಸೇರಿದ್ದ ಸಹಸ್ರಾರು ಭಕ್ತರ ಜಯಘೋಷ ಮುಗಿಲು ಮುಟ್ಟಿತ್ತು.