Asianet Suvarna News Asianet Suvarna News

ನಾರಾಯಣಗುರು ಚಿಂತನೆಗಳು ಎಲ್ಲೆಡೆ ಪಸರಿಸಲಿ: ಕೆ.ಜಿ.ಬೋಪಯ್ಯ

ಸಮಾನ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ ಬ್ರಹ್ಮಶ್ರೀ ನಾರಾಯಣಗುರು ಅವರ ಆದರ್ಶ ಮತ್ತು ಚಿಂತನೆಗಳನ್ನು ತಿಳಿದುಕೊಂಡು, ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವಂತೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಹೇಳಿದರು.

Let Narayanaguru thoughts spread everywhere says KG Bopaiah at siddapur rav
Author
First Published Sep 11, 2022, 9:36 AM IST

ಸಿದ್ದಾಪುರ (ಸೆ.11) : ಸಮಾನ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದ ಬ್ರಹ್ಮಶ್ರೀ ನಾರಾಯಣಗುರು ಅವರ ಆದರ್ಶ ಮತ್ತು ಚಿಂತನೆಗಳನ್ನು ತಿಳಿದುಕೊಂಡು, ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವಂತೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಕೊಡಗು ಯೂನಿಯನ್‌ ವತಿಯಿಂದ ಸಿದ್ದಾಪುರದ ನಾರಾಯಣಗುರು ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ 168ನೇ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾರಾಯಣಗುರು ಪಠ್ಯ ಮರುಸೇರ್ಪಡೆ ಹೋರಾಟಕ್ಕೆ ಸಂದ ಜಯ; ಬಿಲ್ಲವ ನಾಯಕರ ಸ್ಪಷ್ಟನೆ

ಭಾರತವು ಅನೇಕ ಆಚಾರ-ವಿಚಾರ, ಸಂಸ್ಕೃತಿ ಮತ್ತು ಭಾಷೆ ಹೊಂದಿದೆ. ಆ ನಿಟ್ಟಿನಲ್ಲಿ ಭಾರತೀಯರೆಲ್ಲರೂ ಒಂದು ಎಂಬುವುದನ್ನು ಸಾರಿದ ಮಹಾನ್‌ ಮಾನವತಾವಾದಿ ನಾರಾಯಣಗುರು. ಒಂದೇ ಕುಲ, ಒಂದೇ ಜಾತಿ ಎಂಬುವುದನ್ನು ನಾರಾಯಣಗುರು ಸಾರಿದ್ದಾರೆ. ಅವರು ಸಮಾಜಕ್ಕೆ ನೀಡಿರುವ ಸಂದೇಶಗಳು ಸಾರ್ವಕಾಲಿಕವಾಗಿದ್ದು, ಅವರು ಮನುಕುಲಕ್ಕೆ ಆದರ್ಶವಾಗಿದ್ದಾರೆ ಎಂದರು.

ನಾರಾಯಣಗುರು(Narayanaguru) ಅವರು ಶಿಕ್ಷಣ(Education)ದ ಮಹತ್ವ ಸಾರಿದ್ದರು. ಆ ನಿಟ್ಟಿನಲ್ಲಿ ಶಿಕ್ಷಣಕ್ಕೆ ಪ್ರತಿಯೊಬ್ಬರೂ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳನ್ನು ಆರಂಭಿಸಿದ್ದು, ಈ ಸೌಲಭ್ಯಗಳನ್ನು ಪಡೆದುಕೊಂಡು ಎಲ್ಲ ಬಡ ಮಕ್ಕಳು ವಿದ್ಯಾವಂತರಾಗಬೇಕು. ಯಾರು ಸಹ ಅವಕಾಶದಿಂದ ವಂಚಿತರಾಗಬಾರದು ಎಂದು ಹೇಳಿದರು. ಮಡಿಕೇರಿ ಶಾಸಕ(Madikeri MLA) ಎಂ.ಪಿ.ಅಪ್ಪಚ್ಚು ರಂಜನ್‌(M.P.Appachhu Ranjan) ಮಾತನಾಡಿ, ನಾರಾಯಣಗುರು ಅವರು ಮನುಕುಲದ ಕೆಡಕುಗಳನ್ನು ತೊಡೆದು ಹಾಕಲು ಪ್ರಯತ್ನಿಸಿದರು. ಮಾಹಿತಿ ತಂತ್ರಜ್ಞಾನ ಯುಗದಲ್ಲಿ ವಿಶ್ವ ಒಂದು ಹಳ್ಳಿಯಾಗಿದ್ದರೂ ಸಹ, ಸಮಾಜದ ಅಭಿವೃದ್ಧಿಯಲ್ಲಿ ಇನ್ನೂ ಸಾಕಷ್ಟುಸುಧಾರಣೆಗಳು ಮತ್ತು ಬದಲಾವಣೆಗಳು ಆಗಬೇಕಿದೆ ಎಂದರು.

ಸೋಮವಾರಪೇಟೆ(Somavarapete) ತಾಲೂಕಿನಲ್ಲಿ ಮಲಯಾಳಿ(Malayalai) ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಕಾಯ್ದಿರಿಸಿರುವ ಅನುದಾನವನ್ನು ಇನ್ನೂ ಬಳಸಿಕೊಂಡಿಲ್ಲ. ಶಾಸಕರ ಅನುದಾನದಿಂದ ಇನ್ನಷ್ಟುಹೆಚ್ಚಿನ ಅನುದಾನ ನೀಡಿ ಭವನ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ವಿಧಾನ ಪರಿಷತ್‌ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ(M.P.suja Kushalappa) ಮಾತನಾಡಿ, ಜಿಲ್ಲೆಯಲ್ಲಿ ಮಲಯಾಳಂ ಮಾತನಾಡುವ ಭಾಷಿಕರ ಸಂಖ್ಯೆ ಹೆಚ್ಚಿದೆ. ಆ ನಿಟ್ಟಿನಲ್ಲಿ ನಾರಾಯಣಗುರು ಭವನ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದರು.

ರಾಮನಗರ(Ramanagara) ಜಿಲ್ಲೆಯ ಸೋಲೂರು(Soluru) ಗ್ರಾಮದ ಆರ್ಯ ಈಡಿಗ ಮಹಾ ಸಂಸ್ಥಾನದ ಶ್ರೀ ರೇಣುಕಾ ಪೀಠ, ಶ್ರೀ ನಾರಾಯಣಗುರು ಮಠದ ವಿಖ್ಯಾತನಂದ ಸ್ವಾಮೀಜಿ ಆರ್ಶೀವಚನ ನೀಡಿ, ನಾರಾಯಣಗುರು ಅವರ ತತ್ವ ಸಂದೇಶಗಳು ಇಂದಿಗೂ ಅತ್ಯಂತ ಪ್ರಸ್ತುತವಾಗಿದೆ. ಇಡೀ ದಕ್ಷಿಣ ಭಾರತದಲ್ಲಿ ಕೇರಳ ರಾಜ್ಯ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ನಾರಾಯಣಗುರು ಅವರ ಕೊಡುಗೆ ಅಪಾರ ಎಂಬುವುದನ್ನು ಮರೆಯುವಂತಿಲ್ಲ. ನಾರಾಯಣಗುರು ಅವರ ತತ್ವ ಸಂದೇಶಗಳು ಎಲ್ಲೆಡೆ ಪಸರಿಸುವಂತಾಗಬೇಕು. ನಾರಾಯಣಗುರು ಅವರು ವಿದ್ಯೆಯಿಂದ ಸಮಾಜವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಾಧ್ಯ ಎಂದು ಪ್ರತಿಪಾದಿಸಿದರು ಎಂದರು.

ಉಪ ವಿಭಾಗಾಧಿಕಾರಿ ಯತೀಶ್‌ ಉಲ್ಲಾಳ್‌ ಮಾತನಾಡಿ, ನಾರಾಯಣಗುರು ಅವರ ತತ್ವ ಸಿದ್ಧಾಂತಗಳು ಸಾಮಾಜಿಕ ಪರಿವರ್ತನೆಗೆ ಸಹಕಾರಿಯಾಗಿದೆ. ಅವರ ಸಂದೇಶಗಳು ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ ಎಂದರು. ಸಿದ್ದಾಪುರದ ಕೊಡಗು ಯೂನಿಯನ್‌ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಅಧ್ಯಕ್ಷ ವಿ.ಕೆ. ಲೋಕೇಶ್‌, ಮಾಜಿ ಅಡ್ವಕೇಟ್‌ ಜನರಲ್‌ ಎ.ಎಸ್‌.ಪೊನ್ನಣ್ಣ, ಮಾತನಾಡಿದರು. ನಾರಾಯಣ ಗುರು ಪಾಠ ಮತ್ತೆ ಸಮಾಜ ವಿಜ್ಞಾನಕ್ಕೇ ಸೇರ್ಪಡೆ: ನಾಗೇಶ್‌ ಸೂಚನೆ

ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀನಾ ತುಳಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಕೊಡಗು ಬಿಲ್ಲವ ಸಮಾಜದ ಜಿಲ್ಲಾಧ್ಯಕ್ಷ ರಘು ಆನಂದ್‌, ಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ವಿ.ಎಂ.ವಿಜಯ, ನಾರಾಯಣಗುರು ಜಯಂತಿ ಆಚರಣಾ ಸಮಿತಿ ಅಧ್ಯಕ್ಷÜ ಆರ್‌.ಗಿರೀಶ್‌, ಕಾರ್ಯದರ್ಶಿ ರೀಶಾ ಸುರೇಂದ್ರ ಇತರರು ಇದ್ದರು.

* ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: ಎಸ್‌.ಎಸ್‌.ಎಲ….ಸಿ ಮತ್ತು ಪಿ.ಯು.ಸಿ ಯಲ್ಲಿ ಅತೀ ಹೆಚ್ಚು ಪಡೆದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನಾರಾಯಣಗುರು ಅವರ ಕುರಿತು ಪುಸ್ತಕ ಬರೆದಿರುವ ಸಾಹಿತಿ ಡಾ.ಜೆ.ಸೋಮಣ್ಣ, ಸುನಿತಾ ಲೋಕೇಶ್‌, ರಾಣಿ ಅರುಣ ಅವರನ್ನು ಗೌರವಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಪ್ರಯುಕ್ತ ಸಿದ್ದಾಪುರದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿಯಿಂದ ಮೆರೆವಣಿಗೆಗೆ ಪ್ರವೀಣ್‌ ಅವರು ಚಾಲನೆ ನೀಡಿದರು. ಅಲಂಕೃತ ಮಂಟಪದಲ್ಲಿ ಶ್ರೀ ನಾರಾಯಣಗುರು ಅವರ ಪ್ರತಿಮೆಯೊಂದಿಗೆ ಮೆರವಣಿಗೆ ಗಮನ ಸೆಳೆಯಿತು. ಚೆಂಡೆ ವಾದ್ಯ, ಕಳಸ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಉಪನ್ಯಾಸಕರಾದ ಸುನೀತಾ ಗಿರೀಶ್‌, ಸತೀಶ್‌ ನಿರೂಪಿಸಿದರು. ಕಾರ್ಯದರ್ಶಿ ಪ್ರೇಮಾನಂದ ಸ್ವಾಗತಿಸಿದರು, ರವಿ ಪ್ರಾರ್ಥಿಸಿದರು, ರೀಶಾ ಸುರೇಂದ್ರ ವಂದಿಸಿದರು.

Follow Us:
Download App:
  • android
  • ios