ಮಂತ್ರಾಲಯ ರಾಯರ ಮಠ: ಒಂದೇ ತಿಂಗಳಲ್ಲಿ ₹3. 30 ಕೋಟಿ ಕಾಣಿಕೆ ಸಂಗ್ರಹ
ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮೀಜಿಗಳು ನೆಲೆಸಿರುವ ಪುಣ್ಯ ಭೂಮಿ ಮಂತ್ರಾಲಯದಲ್ಲಿ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಗುರುರಾಯರ ಸನ್ನಿಧಿ ಮಂತ್ರಾಲಯ ಮಠದಲ್ಲಿ ಕಳೆದ ಒಂದು ತಿಂಗಳಿಂದ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.
ವರದಿ : ಜಗನ್ನಾಥ ಪೂಜಾರ್, ಏಷ್ಯಾನೆಟ್ ಸುವರ್ಣನ್ಯೂಸ್
ರಾಯಚೂರು (ಡಿ.30) : ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮೀಜಿಗಳು ನೆಲೆಸಿರುವ ಪುಣ್ಯ ಭೂಮಿ ಮಂತ್ರಾಲಯದಲ್ಲಿ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಗುರುರಾಯರ ಸನ್ನಿಧಿ ಮಂತ್ರಾಲಯ ಮಠದಲ್ಲಿ ಕಳೆದ ಒಂದು ತಿಂಗಳಿಂದ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.
ನವೆಂಬರ್ ಹಾಗೂ ಡಿಸೆಂಬರ್ ತಿಂಗಳುಗಳ ಕಳೆದ 34 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು ನಾಣ್ಯ ಹಾಗೂ ನೋಟುಗಳು ಸೇರಿ ಒಟ್ಟು 3 ಕೋಟಿ 30 ಲಕ್ಷದ 20 ಸಾವಿರದ 636 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಹಣದ ಜೊತೆಗೆ ಭಕ್ತರು ರಾಯರ ಹುಂಡಿಯಲ್ಲಿ 0.095 ಗ್ರಾಂ ಚಿನ್ನ ಹಾಗೂ 1 ಕೆ.ಜಿ.300 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ನೀಡಿದ್ದಾರೆ.
ಮಂತ್ರಾಲಯದ ತುಂಗಾ ತೀರದಲ್ಲಿ ತುಂಗಾರತಿ ಸಂಭ್ರಮ
ಕಳೆದ ಅಕ್ಟೋಬರ್ ನವೆಂಬರ್ ತಿಂಗಳುಗಳ 36 ದಿನಗಳಲ್ಲಿ 3 ಕೋಟಿ 20 ಲಕ್ಷ ರೂಪಾಯಿ ಸಂಗ್ರಹವಾಗಿತ್ತು. ಸೆಪ್ಟೆಂಬರ್ ಅಕ್ಟೋಬರ್ ತಿಂಗಳುಗಳ 20 ದಿನಗಳಲ್ಲಿ 1,98,17,614 ರೂಪಾಯಿ ಸಂಗ್ರಹವಾಗಿತ್ತು. ಈ ಬಾರಿ 34 ದಿನಗಳ ಕಾಣಿಕೆ ಎಣಿಕೆ ಇದ್ದಿದ್ದರಿಂದ ಸತತವಾಗಿ ಎರಡು ದಿನಗಳ ಕಾಲ ನಾಣ್ಯ(coin) ಹಾಗೂ ನೋಟು(Notes)ಗಳ ಎಣಿಕೆ ಕಾರ್ಯ ನಡೆಯಿತು. ಎಣಿಕೆ ಕಾರ್ಯ ಸಂಪೂರ್ಣ ಮುಕ್ತಾಯವಾಗಿರುವ ಕುರಿತು ಗುರು ರಾಘವೇಂದ್ರ ಸ್ವಾಮಿ ಮಠ(Raghavendra Swamy Mutt )ದ ವ್ಯವಸ್ಥಾಪಕ ಶ್ರೀನಿವಾಸ ರಾವ್(Srinivas rao) ಮಾಹಿತಿ ನೀಡಿದ್ದಾರೆ.
ಮುಜರಾಯಿ ಇಲಾಖೆ(Department of Mujarai) ಅಧಿಕಾರಿಗಳು, ಗುರುಪಾದ ಕರಸೇವಕರು ಹಾಗೂ ನೂರಾರು ಜನ ಸಿಬ್ಬಂದಿ ಹಾಗೂ ಭಕ್ತರು ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು ಎಣಿಕೆ ಕಾರ್ಯ ಮುಕ್ತಾಯವಾಗಿದೆ.
ಮಂತ್ರಾಲಯದಲ್ಲಿ ರಾಯರ ಆರಾಧನಾ ಸಂಭ್ರಮ
ಶಿಫಾರಸು ಪತ್ರ ತೆಗೆದುಕೊಂಡು ಬಂದ್ರೂ ರೂಂ ಸಿಗಲ್ಲ:
ಸಾಲು-ಸಾಲು ರಜೆ ಬಂದಿರುವ ಹಿನ್ನೆಲೆಯಲ್ಲಿ ಮಂತ್ರಾಲಯ(Mantralaya)ಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮಂತ್ರಾಲಯ ಮಠದ ಎಲ್ಲಾ ರೂಂಗಳು ಫುಲ್ ಆಗಿದ್ದು, ಶಿಫಾರಸು ಪತ್ರ ತೆಗೆದುಕೊಂಡು ಬಂದ್ರೆ ತಕ್ಷಣಕ್ಕೆ ಮಠದ ರೂಂಗಳು ಭಕ್ತರಿಗೆ ದೊರೆಯುವುದಿಲ್ಲವೆಂದು ಶ್ರೀಮಠದಿಂದ ಸೂಚನೆ ಬಿಡುಗಡೆ ಮಾಡಿದ್ದಾರೆ. ಡಿಸೆಂಬರ್ 31ರಿಂದ ಜನವರಿ 2ರವರೆಗೆ ಮಾತ್ರ ಈ ಸೂಚನೆ ಅನ್ವಯ ಆಗಲಿದೆ.