Asianet Suvarna News Asianet Suvarna News

ಇಂದು ವರ್ಷದ ಕೊನೆಯ ಚಂದ್ರಗ್ರಹಣ: ಹಲ ದೇಗುಲಗಳು ಬಂದ್‌

ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಸಂಜೆಯ ಮಹಾಪೂಜೆಯ ಸಮಯ ಬದಲಾಗಿದ್ದು, ದೇವಾಲಯವನ್ನು ಕೆಲವೆಡೆ ಬೇಗನೆ ಬಂದ್‌ ಮಾಡಿದರೆ, ಕೆಲವೆಡೆ ಗ್ರಹಣ ಕಾಲದಲ್ಲಿ ಭಕ್ತರಿಗೆ ವಿಶೇಷಪೂಜೆ, ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

Many Temples Close Due to Lunar Eclipse grg
Author
First Published Oct 28, 2023, 6:30 AM IST

ನವದೆಹಲಿ/ಬೆಂಗಳೂರು(ಅ.28):  ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು(ಶನಿವಾರ) ನಡೆಯಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಮಧ್ಯರಾತ್ರಿ 1:5 ಗಂಟೆಗೆ ಚಂದ್ರಗ್ರಹಣ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಒಟ್ಟಾರೆ ಗ್ರಹಣದ ಅವಧಿ 1 ತಾಸು 19 ನಿಮಿಷ ಆಗಿದೆ.

ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಸಂಜೆಯ ಮಹಾಪೂಜೆಯ ಸಮಯ ಬದಲಾಗಿದ್ದು, ದೇವಾಲಯವನ್ನು ಕೆಲವೆಡೆ ಬೇಗನೆ ಬಂದ್‌ ಮಾಡಿದರೆ, ಕೆಲವೆಡೆ ಗ್ರಹಣ ಕಾಲದಲ್ಲಿ ಭಕ್ತರಿಗೆ ವಿಶೇಷಪೂಜೆ, ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ರಾಶಿಗೆ ಕಷ್ಟ ತರಲಿದೆ ವರ್ಷದ ಕೊನೆಯ ಚಂದ್ರಗ್ರಹಣ

ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನವನ್ನು ಸಂಜೆ 6ಕ್ಕೆ ಬಂದ್ ಮಾಡಲಾಗುವುದು. ಅ.29 ರಂದು ಬೆಳಗ್ಗೆ 7.30ರ ನಂತರ ಭಕ್ತಾದಿಗಳ ದರ್ಶನಕ್ಕೆ ತೆರೆಯಲು ನಿರ್ಧರಿಸಲಾಗಿದೆ. ಹುಬ್ಬಳಿಯ ವಿವಿಧ ದೇವಾಲಯಗಳಲ್ಲಿ ಗ್ರಹಣ ಸಂದರ್ಭದಲ್ಲಿ ಅಭಿಷೇಕ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ರಾತ್ರಿ ಗ್ರಹಣ ಅವಧಿಯಲ್ಲಿ ದೇವಾಲಯಗಳಲ್ಲಿ ವಿಶೇಷ ಅಭಿಷೇಕ ನಡೆಯಲಿದೆ. ಇನ್ನು, ಗ್ರಹಣ ನಿಮಿತ್ತ ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ ಸಂಜೆ 4ರಿಂದ 5.30ರ ತನಕ ಮಾತ್ರ ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ಅವಕಾಶ ಇದೆ.

ಇಡಗುಂಜಿ ವಿನಾಯಕ ದೇವಾಲಯದಲ್ಲಿ ರಾತ್ರಿ 8ಕ್ಕೆ ಮಹಾಪೂಜೆ ನೆರವೇರಲಿದ್ದು, ಗ್ರಹಣ ಸ್ಪರ್ಶವಾಗುತ್ತಿದ್ದಂತೆ ದೇವಾಲಯದ ದೊಡ್ಡ ಗಂಟೆ ಬಾರಿಸಿ, ಬಾಗಿಲು ತೆರೆಯಲಿದ್ದು ದೇವರ ದರ್ಶನಕ್ಕೆ ಅವಕಾಶವಿದ್ದು, ಅಭಿಷೇಕ ಹಾಗೂ ಪೂಜೆ ನಡೆಯಲಿದೆ.

ಈ ರಾಶಿಯವರಿಗೆ ಬಂಪರ್ ಲಾಭ ತರಲಿದೆ ವರ್ಷದ ಕೊನೆಯ ಚಂದ್ರಗ್ರಹಣ

ಮುರ್ಡೇಶ್ವರ ಕ್ಷೇತ್ರದಲ್ಲಿ ಸಂಜೆ 5.30ಕ್ಕೆ ಮಹಾಪೂಜೆ ನಡೆಯಲಿದ್ದು, ನಂತರ ದೇವಾಲಯದ ದ್ವಾರವನ್ನು ಬಂದ್ ಮಾಡಲಾಗುತ್ತದೆ. ರಾತ್ರಿ 1 ಗಂಟೆ ತರುವಾಯ ದೇವಾಲಯದ ಬಾಗಿಲು ತೆರೆದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ಬಾಗಿಲನ್ನು ಸಂಜೆ 6 ಗಂಟೆ ನಂತರ ಮುಚ್ಚಲಾಗುತ್ತದೆ. ಮರುದಿನ ಬೆಳಗ್ಗೆ 6.30ರಿಂದ ಎಂದಿನಂತೆ ದರ್ಶನಕ್ಕೆ ಅವಕಾಶವಿರಲಿದೆ ಎಂದು ಮುಜರಾಯಿ ಇಲಾಖೆಯ ಮೂಲಗಳು ತಿಳಿಸಿವೆ.

ವರ್ಷದ ಕೊನೆಯ ಗ್ರಹಣ

ಇದು ವರ್ಷದ ಕೊನೆಯ ಗ್ರಹಣವಾಗಿದ್ದು, ಇದಾದ ಬಳಿಕ ದೇಶದಲ್ಲಿ 2025ರ ಸೆ.7ರಂದು ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಕಳೆದ ಬಾರಿ ನ.8, 2022ರಂದು ಚಂದ್ರಗ್ರಹಣ ಸಂಭವಿಸಿತ್ತು. ಇಡೀ ದೇಶದಲ್ಲಿ ಚಂದ್ರಗ್ರಹಣ ಕಾಣಲಿದ್ದು, ಇದರ ಜೊತೆಗೆ ಏಷ್ಯಾ ಖಂಡ ಸೇರಿ ಎಲ್ಲ ಕಡೆಗಳಲ್ಲಿಯೂ ವೀಕ್ಷಿಸಬಹುದಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

Follow Us:
Download App:
  • android
  • ios