Asianet Suvarna News Asianet Suvarna News

ಜಗತ್ತು ಮೈಸೂರಿನತ್ತ ನೋಡಲು ಮಹಾರಾಜರೇ ಕಾರಣ: ಸಚಿವ ಎಚ್.ಕೆ. ಪಾಟೀಲ್

ಕನ್ನಡ ನಾಡಿಗೆ ಹಬ್ಬವಾಗಿರುವ ದಸರಾ ಮೈಸೂರಿಗಾಗಲಿ, ನಾಡಿಗಾಗಲಿ ಸೀಮಿತವಾಗಿಲ್ಲ. ವಿಶ್ವವಿಖ್ಯಾತವಾಗಿರುವ ದಸರಾ ಇಡೀ ವಿಶ್ವಕ್ಕೆ ಶ್ರೇಷ್ಠವಾಗಿದೆ. ರಾಜ್ಯದ ಮುಖ್ಯಂಮತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ದಸರಾ ಮಹೋತ್ಸವದ ಬಗ್ಗೆ ಅಪಾರ ಕಾಳಜಿ ವಹಿಸಿದ್ದು, ದಸರಾ ಯಶಸ್ವಿಯಾಗಲು ಶ್ರಮಿಸುತ್ತಿದ್ದಾರೆ ಎಂದ ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ 

Minister HK Patil Talks Over Mysuru Dasara grg
Author
First Published Oct 21, 2023, 12:30 AM IST

ಮಹೇಂದ್ರ ದೇವನೂರು

ಮೈಸೂರು(ಅ.21):  ವಿಜಯನಗರ ಸಾಮ್ರಾಜ್ಯ ಆಚರಿಸಿಕೊಂಡು ಬಂದಿದ್ದ ದಸರಾ ಪದ್ಧತಿಯನ್ನು ಮಹಾರಾಜರು ಮುಂದುವರೆಸಿಕೊಂಡು ಬರುವ ಮೂಲಕ ಇಡೀ ಜಗತ್ತು ಮೈಸೂರಿನತ್ತ ನೋಡುವಂತೆ ಮಾಡಿದ್ದಾರೆ. ಇದಕ್ಕೆ ಮೈಸೂರು ಮಹಾರಾಜರಿಗೆ ನಾಡಿನ ಬಗ್ಗೆ ಇದ್ದ ಅಭಿಮಾನವೇ ಕಾರಣ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯಿಂದ ಪಾರಂಪರಿಕ ಉಡುಗೆಯಲ್ಲಿ ನೂತನ ದಂಪತಿಗಳಿಗಾಗಿ ಆಯೋಜಿಸಿದ್ದ ಪಾರಂಪರಿಕ ಟಾಂಗಾ ಸವಾರಿ ಕಾರ್ಯಕ್ರಮವನ್ನು ಶುಕ್ರವಾರ ಬೆಳಗ್ಗೆ ಪುರಾತತ್ವ ಇಲಾಖೆ ಆಯುಕ್ತ ದೇವರಾಜು, ಮೇಯರ್ ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ದಂಪತಿಗೆ ಬಾಗಿನ ನೀಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ವಿಶ್ವವಿಖ್ಯಾತ ಮೈಸೂರು ದಸರೆಗೆ ಮೆರುಗು ತಂದ ಮಹಿಳೆಯರ ಡ್ಯಾನ್ಸ್‌..!

ಕನ್ನಡ ನಾಡಿಗೆ ಹಬ್ಬವಾಗಿರುವ ದಸರಾ ಮೈಸೂರಿಗಾಗಲಿ, ನಾಡಿಗಾಗಲಿ ಸೀಮಿತವಾಗಿಲ್ಲ. ವಿಶ್ವವಿಖ್ಯಾತವಾಗಿರುವ ದಸರಾ ಇಡೀ ವಿಶ್ವಕ್ಕೆ ಶ್ರೇಷ್ಠವಾಗಿದೆ. ರಾಜ್ಯದ ಮುಖ್ಯಂಮತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ದಸರಾ ಮಹೋತ್ಸವದ ಬಗ್ಗೆ ಅಪಾರ ಕಾಳಜಿ ವಹಿಸಿದ್ದು, ದಸರಾ ಯಶಸ್ವಿಯಾಗಲು ಶ್ರಮಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಒಟ್ಟು 25 ಸಾವಿರ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳಿವೆ. ಇವುಗಳಲ್ಲಿ 500 ರಿಂದ 600 ಪಾರಂಪರಿಕ ಕಟ್ಟಡವಿದ್ದು, ಸರ್ಕಾರ ಗುರುತಿಸಿದೆ. ಇನ್ನೂ 500 ಪಾರಂಪರಿಕ ಕಟ್ಟಡವನ್ನು ಗುರುತಿಸಿ ಉಳಿಸಿ ಸಂರಕ್ಷಿಸಲು ಯೋಜನೆ ರೂಪಿಸಲಾಗುತ್ತಿದೆ. ಎಲ್ಲಾ ಪಾರಂಪರಿಕ ಕಟ್ಟಡಗಳಾಗಲಿ, ಸ್ಮಾರಕಗಳನ್ನಾಗಲಿ ಸರ್ಕಾರ ಒಂದೆ ಮಾಡಲು ಆಗಲ್ಲ. ಅದಕ್ಕೆ ಜನಸಾಮಾನ್ಯರ ಅಭಿಮಾನ ಹಾಗೂ ಸಹಕಾರ ಬೇಕಾಗುತ್ತದೆ ಎಂದರು.

ಪಾರಂಪರಿಕ ಕಟ್ಟಡ, ಸ್ಮಾರಕಗಳು ನಿಮ್ಮ ಊರಿನಲ್ಲಿಯೇ ಇದ್ದರೆ ಅಂತಹ ಸ್ಮಾರಕವನ್ನೂ ರಕ್ಷಿಸುವ ಹಕ್ಕು ನಿಮಗಿರುತ್ತದೆ ಹಾಗೂ ದತ್ತು ತೆಗೆದುಕೊಂಡು ರಕ್ಷಿಸಬಹುದು. ಇಂತಹ ಕಟ್ಟಡ ರಕ್ಷಿಸಲು ಜನರನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ನಮ್ಮ ಸ್ಮಾರಕಗಳ ದತ್ತು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದು ಯಶಸ್ವಿಯಾಗಿ ಸಾಗುತ್ತಿದೆ ಎಂದರು.

416ನೇ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಜನವೋ ಜನ..ಅರಮನೆಯಲ್ಲಿ ಹೇಗಿತ್ತು ಗೊತ್ತಾ ಖಾಸಗಿ ದರ್ಬಾರ್ ?

ಅಮೇರಿಕಾದ ಅನಿವಾಸಿ ಭಾರತಿಯರೊಡನೆ ಆನ್ ಲೈನ್ ಮೂಲಕ (ಜೂಮ್ ಮಿಟಿಂಗ್) ಪಾರಂಪರಿಕ ಕಟ್ಟಡಗಳ ದತ್ತು ತೆಗೆದುಕೊಳ್ಳುವ ಸಂಬಂಧ ಚರ್ಚಿಸಿದ್ದೇನೆ. ಇದರಿಂದಾಗಿ ಸುಮಾರು 20 ಅನಿವಾಸಿ ಭಾರತೀಯರು ಪಾರಂಪರಿಕ ಕಟ್ಟಡಗಳನ್ನು ದತ್ತು ತೆಗೆದುಕೊಂಡು ಸಂರಕ್ಷಿಸುವ ಭರವಸೆ ನೀಡಿದ್ದಾರೆ ಎಂದರು.

ಮೇಯರ್ ಶಿವಕುಮಾರ್, ಪಾರಂಪರಿಕೆ ಇಲಾಖೆ ಆಯುಕ್ತ ಎ. ದೇವರಾಜು, ಪ್ರವಾಸೋದ್ಯಮ ಇಲಾಖೆ ಜಂಟಿ ಆಯುಕ್ತೆ ಎಂ.ಕೆ. ಸವಿತಾ, ಪ್ರೊ.ಎನ್.ಎಸ್. ರಂಗರಾಜು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಿಇಒ ರಾಜೇಶ್ ಜಿ.ಗೌಡ ಮೊದಲಾದವರು ಇದ್ದರು.

Follow Us:
Download App:
  • android
  • ios