ನಾಳೆ ನವರಾತ್ರಿ 8ನೇ ದಿನ ಮಹಾಗೌರಿ ಪೂಜೆ ಮಹತ್ವ, ಮಂತ್ರ
ನವರಾತ್ರಿಯ ಎಂಟನೇ ದಿನ ಮಹಾಗೌರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ತಾಯಿ ಗೌರಿಗೆ ನಾಲ್ಕು ಕೈಗಳು. ಒಂದು ಕೈಯಲ್ಲಿ ಢಮರು ಹಾಗೂ ಇನ್ನೊಂದು ಕೈಯಲ್ಲಿ ತ್ರಿಶೂಲ ಇರುತ್ತದೆ. ಶ್ವೇತ ವಸ್ತ್ರಧಾರಿಣಿಯಾಗಿರುವ ಗೌರಿ ದೇವಿಯ ಮುಖವು ಶಾಂತ ಸ್ವಭಾವವಾಗಿರುತ್ತದೆ.

ನವರಾತ್ರಿಯ ಎಂಟನೇ ದಿನ ಮಹಾಗೌರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ತಾಯಿ ಗೌರಿಗೆ ನಾಲ್ಕು ಕೈಗಳು. ಒಂದು ಕೈಯಲ್ಲಿ ಢಮರು ಹಾಗೂ ಇನ್ನೊಂದು ಕೈಯಲ್ಲಿ ತ್ರಿಶೂಲ ಇರುತ್ತದೆ. ಶ್ವೇತ ವಸ್ತ್ರಧಾರಿಣಿಯಾಗಿರುವ ಗೌರಿ ದೇವಿಯ ಮುಖವು ಶಾಂತ ಸ್ವಭಾವವಾಗಿರುತ್ತದೆ. ಚಂದ್ರನ ತೇಜಸ್ಸು ಆಕೆಯ ಮುಖದಲ್ಲಿ ಲಾಸ್ಯವಾಡುತ್ತಿರುತ್ತದೆ. ಆಕೆ ಮತ್ತೊಂದು ಕೈಯ್ಯಲ್ಲಿ ಭಕ್ತರಿಗೆ ಆಶೀರ್ವಾದ ಮಾಡುತ್ತಿರುತ್ತಾಳೆ.
ನವರಾತ್ರಿ 8ನೇ ದಿನವೇ ದುರ್ಗಾಷ್ಟಮಿ. ಈ ದಿನದಂದು, ದುರ್ಗಾ ದೇವಿಯ 8ನೇ ರೂಪವಾದ ಮಹಾಗೌರಿ ರೂಪವನ್ನು ಪೂಜಿಸಲಾಗುತ್ತದೆ. ಶಾರದೀಯ ನವರಾತ್ರಿ 2023 ರ 8ನೇ ದಿನವು ಅಕ್ಟೋಬರ್ 22 ರಂದು ಭಾನುವಾರ ಬಂದಿದೆ. ಈ ದಿನ ಮಹಾಗೌರಿಯ ಆರಾಧನೆಯನ್ನು ಮಾಡಲಾಗುತ್ತದೆ. ಈ ದಿನ ಕನ್ಯಾ ಪೂಜೆಯನ್ನು ಸಹ ನಡೆಸಲಾಗುತ್ತದೆ. ನವರಾತ್ರಿ 2023 ರ 8ನೇ ದಿನದ ಶುಭ ಮುಹೂರ್ತ, ಪೂಜೆ ವಿಧಾನ, ಮಹತ್ವ ಮತ್ತು ಮಂತ್ರಗಳ ಕುರಿತು ನೀವಿಲ್ಲಿ ತಿಳಿದುಕೊಳ್ಳಿ.
ಪಾರ್ವತಿ ದೇವಿಯು ಮನುಷ್ಯರ ಅವತಾರ ಎತ್ತಿ ಭೂಮಿಯಲ್ಲಿ ಜನಿಸಿದಳು. ಶಿವನ್ನು ಪಡೆಯುವುದು ಆ ಜನ್ಮದಲ್ಲಿ ಅವಳ ಗುರಿಯಾಗಿರುತ್ತದೆ. ನಾರದ ಮಹರ್ಷಿಗಳ ಸಲಹೆಯ ಮೇರೆಗೆ ಸುದೀರ್ಘ ತಪಸ್ಸಿಗೆ ಕುಳಿತ ಆಕೆಯು ಅನ್ನಾಹಾರ, ನೀರು ತ್ಯಜಿಸಿದಳು. ಸುದೀರ್ಘ ಕಾಲ ಆಕೆ ತಪಸ್ಸಿಗೆ ಕುಳಿತ ಕಾರಣ ಆಕೆಯ ಮೈಗೆ ಧೂಳು ಮತ್ತಿಕೊಂಡಿತು. ಬಳ್ಳಿಗಳು ಬೆಳೆದವು. ಸೂರ್ಯನ ವಿಪರೀತ ಶಾಖದಿಂದ ಆಕೆಯ ದೇಹವು ಬೆಂದುಹೋದಂತಾಯಿತು. ಆದರೂ ಆಕೆ ಸಾವಿರ ವರ್ಷಗಳ ಕಾಲ ಶಿವನಿಗಾಗಿ ಕಾದು ಕುಳಿತಳು.
ಪಾರ್ವತಿಯ ಭಕ್ತಿಗೆ ಮೆಚ್ಚಿ ಪ್ರತ್ಯಕ್ಷನಾದ ಶಿವನು, ಆಕೆಯ ಸ್ಥಿತಿ ಕಂಡು ಗಂಗೆಯ ಪವಿತ್ರ ಜಲವನ್ನು ಆಕೆಯ ಮೇಲೆ ಪ್ರೋಕ್ಷಣೆ ಮಾಡಿದಾಗ ಆಕೆಯ ಮುಖ ಮೊದಲಿಗಿಂತ ತೇಜಸ್ವಿಯಾಯಿತು. ಸ್ಪಟಿಕದ ಕಲ್ಲಿನಂತೆ ಹೊಳೆಯುತ್ತಿದ್ದ ಆಕೆಯ ಮುಖವು ಚಂದ್ರನ ಶಾಂತತೆಯನ್ನು ಹೊಂದಿತು. ಆಕೆಯು ಮಹಾಗೌರಿಯಾಗಿ ಹೊಸ ಜನ್ಮ ಎತ್ತಿದಳು. ಶಿವನು ಆಕೆಯ ಭಕ್ತಿಗೆ ಮೆಚ್ಚಿ ಆಕೆಯನ್ನು ವರಿಸಿದ.
ಈ 4 ರಾಶಿಯ ಹುಡುಗಿಯರಿಗೆ ಬೀಳದ ಹುಡುಗರೇ ಇಲ್ಲ..!
ಮಹಾಗೌರಿ ಪೂಜೆಯ ರೀತಿ
ತಾಯಿ ಗೌರಿಯನ್ನು ಪೂಜಿಸಲು ರಾತ್ರಿ ಅರಳಿದ ಮಲ್ಲಿಗೆಯನ್ನು ಬಳಸಲಾಗುತ್ತದೆ. ತಾಯಿಯನ್ನು ಶುದ್ಧ ಮನಸ್ಸು, ಭಕ್ತಿಯಿಂದ ಪೂಜಿಸಿ. ಗಣಪತಿ ಪ್ರಾರ್ಥನೆ ಮೂಲಕ ಪೂಜೆಯನ್ನು ಶುರು ಮಾಡಿ. ತಾಯಿ ಗೌರಿಗೆ ಷೋಡಶೋಪಚಾರ ಮಾಡಿ. ಆರತಿಯೊಂದಿಗೆ ಪೂಜೆ ಮುಗಿಸಿ.
ತಾಯಿ ಗೌರಿ ಆರಾಧಿಸುವ ಮಂತ್ರಗಳು:
ಓ ದೇವಿ ಮಹಾಗೌರಿಯೇ ನಮಃ
ಶ್ವೇತ ವೃಷೆಸಮೃದ್ಧ ಶ್ವೇವೇತಾಂಬರ್ಧಾರ ಶುಚೇಹ ಮಹಾಗೌರಿ
ಶುಭಂ ದಾದ್ಯನ್ಮಹದೇವ ಪ್ರಮೋದಃ
ಮಹಾ ಗೌರಿ ಸ್ತುತಿ:
ಯಾ ದೇವಿ ಸರ್ವಭೂತೇಶು ಮಾ ಮಹಾಗೌರಿ ರೂಪೇಣ ಸಂಸ್ಥಿತಾ ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ