Asianet Suvarna News Asianet Suvarna News

ನವರಾತ್ರಿ 3ನೇ ದಿನ ಚಂದ್ರಘಂಟಾ ಪೂಜೆ ಮಹತ್ವ, ಮುಹೂರ್ತ, ಮಂತ್ರ

ನವದುರ್ಗೆಯಲ್ಲಿ ರೌದ್ರಸ್ವರೂಪದವಳಾಗಿ ರಾಕ್ಷಸವಧೆ ಮಾಡಿ, ಮಾತೃಹೃದಯದವಳಾಗಿ ನಮ್ಮನ್ನು ರಕ್ಷಿಸುವವಳು ಚಂದ್ರಘಂಟಾ ದೇವಿ. ಈಕೆಯ ಆರಾಧನೆಯಿಂದ ದುಷ್ಟಶಕ್ತಿಗಳು ದೂರವಾಗುತ್ತವೆ.ಇವಳ ಮಸ್ತಕದಲ್ಲಿ ಗಂಟೆಯ ಆಕಾರದ ಅರ್ಧಚಂದ್ರನಿದ್ದಾನೆ. 

navratri 2023 day 3 chandraghanta colour puja vidhi mantra suh
Author
First Published Oct 16, 2023, 5:03 PM IST

ನವದುರ್ಗೆಯಲ್ಲಿ ರೌದ್ರಸ್ವರೂಪದವಳಾಗಿ ರಾಕ್ಷಸವಧೆ ಮಾಡಿ, ಮಾತೃಹೃದಯದವಳಾಗಿ ನಮ್ಮನ್ನು ರಕ್ಷಿಸುವವಳು ಚಂದ್ರಘಂಟಾ ದೇವಿ. ಈಕೆಯ ಆರಾಧನೆಯಿಂದ ದುಷ್ಟಶಕ್ತಿಗಳು ದೂರವಾಗುತ್ತವೆ.ಇವಳ ಈ ಸ್ವರೂಪವು ಪರಮ ಶಾಂತಿದಾಯಕ ಮತ್ತು ಶ್ರೇಯಸ್ಕರವಾಗಿದೆ. ಇವಳ ಮಸ್ತಕದಲ್ಲಿ ಗಂಟೆಯ ಆಕಾರದ ಅರ್ಧಚಂದ್ರನಿದ್ದಾನೆ. ಇದರಿಂದಲೇ ಇವಳನ್ನ ಚಂದ್ರಘಂಟಾದೇವಿ ಎಂದು ಕರೆಯಲಾಗುತ್ತದೆ.

ನವರಾತ್ರಿಯ ಮೂರನೇ ದಿನ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತದೆ. ಈಕೆ ಪಾರ್ವತಿ , ಶಿವನ ಪತ್ನಿ, ದುರ್ಗೆಯ ಹಲವು ಸ್ವರೂಪಗಳಲ್ಲಿ ಒಬ್ಬಳು ಹಾಗೂ ದುರ್ಗಾಮಾತೆಯ ವೈವಾಹಿಕ ಅವತಾರ. ದುರ್ಗಾ ಮಾತೆಯ ರೌದ್ರಸ್ವರೂಪಳಾಗಿರುವವಳು ಈಕೆ. ದುಷ್ಟಶಕ್ತಿಗಳಿಗೆ ಈಕೆ ಸಿಂಹಸ್ವಪ್ನ. ಆದರೆ ಭಕ್ತರನ್ನು ಪ್ರೀತಿಯಿಂದ ಸಲಹುವ ತಾಯಿ. 

ಚಂದ್ರಘಂಟಾ ಅಂದರೆ ಘಂಟೆಯಾಕಾರದ ಚಂದ್ರನನ್ನು ಮಸ್ತಕದಲ್ಲಿ ಧರಿಸಿದವಳು. ಚಂದ್ರಘಂಟೆಯ ಮೂರನೇ ಕಣ್ಣು ಸದಾ ತೆರೆದೇ ಇರುತ್ತದೆ. ಯಾವುದೇ ಸಮಯದಲ್ಲಿಯೂ ದುಷ್ಟ ಶಕ್ತಿಗಳ ನಿಗ್ರಹಕ್ಕೆ ಸಿದ್ಧಳಾಗಿರುವಂತೆ ಕಾಣುತ್ತಾಳೆ. ಚಂದ್ರಘಂಟೆಯನ್ನು ಚಂದ್ರಿಕಾ, ರಣಚಂಡಿ ಎಂದೂ ಕರೆಯುತ್ತಾರೆ. ಇವಳಿಗೆ ಹತ್ತು ಕೈಗಳಿದ್ದು, ಹತ್ತೂ ಕೈಗಳಲ್ಲಿ ಶಸ್ತ್ರಾಸ್ತ್ರವನ್ನು ಹಿಡಿದುಕೊಂಡು ಸಿಂಹವಾಹಿನಿಯಾಗಿ ರಾರಾಜಿಸುತ್ತಾಳೆ.

ಚಂದ್ರಘಂಟೆಯು ಶುಕ್ರ ಗ್ರಹದ ಅಧಿದೇವತೆಯಾಗಿರುತ್ತಾಳೆ. ಚಂದ್ರಘಂಟೆಯು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಸಂತೋಷವನ್ನು ನೀಡುವ ತಾಯಿ . ಇವಳ ಆರಾಧನೆಯಿಂದ ಸಂಪತ್ತು ಹಾಗೂ ಸಮೃದ್ಧಿಯನ್ನು ಪಡೆಯಬಹುದು. ಈಕೆಯ ಆಶೀರ್ವಾದದಿಂದ ನಿಮ್ಮ ಮನೆಯಲ್ಲಿ ಎಂದಿಗೂ ಆಹಾರದ ಕೊರತೆ ಕಂಡುಬರದು. 

ಕೆಂಪು  ಬಣ್ಣದ ಅಲಂಕಾರ
ಕೆಂಪು ಬಣ್ಣದಲ್ಲಿ ಕಂಗೊಳಿಸುವ ದೇವಿಯು ಅನುಗ್ರಹ ಮತ್ತು ನೆಮ್ಮದಿಯನ್ನು ಕರುಣಿಸುತ್ತಾಳೆ . ಸೌಂದರ್ಯ ಮತ್ತು ಧೈರ್ಯದ ಸಂಕೇತ ಈಕೆ. ಈ ದಿನ ದೇವಿಗೆ ಕೆಂಪು ಬಣ್ಣದ ವಸ್ತ್ರಾಲಂಕಾರ ಮಾಡುವುದರ ಮೂಲಕ ಪೂಜೆಯನ್ನು ಮಾಡಲಾಗುತ್ತದೆ.

ಚಂದ್ರಘಂಟೆಯ ಕಥೆ
ಹೊಸದಾಗಿ ವಿವಾಹವಾದ ಸ್ವರೂಪವನ್ನು ದುರ್ಗಾಮಾತೆಯು ಚಂದ್ರಘಂಟಾ ರೂಪದಲ್ಲಿ ನೋಡಬಹುದು. ಪಾರ್ವತಿ ದೇವಿಯು ಕಠಿಣವಾದ ತಪಸ್ಸನ್ನು ಮಾಡಿ, ಶಿವನನ್ನು ಮದುವೆಯಾಗುವಲ್ಲಿ ಸಫಲಳಾಗುತ್ತಾಳೆ. ವಿವಾಹ ಸಂದರ್ಭದಲ್ಲಿ ಕೈಲಾಸದ ಗಣಗಳೊಂದಿಗೆ ಶಿವನು ಪಾರ್ವತಿಯ ಅರಮನೆಯನ್ನು ಪ್ರವೇಶಿಸುತ್ತಾನೆ. ಅತಿ ಭಯಂಕರನಾಗಿ ಕಾಣುತ್ತಿದ್ದ ಶಿವನನ್ನು ನೋಡಿ ಪಾರ್ವತಿ ದೇವಿಯ ತಾಯಿ ಮೂರ್ಛೆಹೋಗುತ್ತಾಳೆ. ಆಗ ಪಾರ್ವತಿಯು ಚಂದ್ರಘಂಟಾ ರೂಪದಲ್ಲಿ ಶಿವನ ಮುಂದೆ ಪ್ರತ್ಯಕ್ಷಳಾಗಿ ಶಿವನು ರಾಜಕುಮಾರನ ರೂಪವನ್ನು ತಾಳಬೇಕಾಗಿ ವಿನಂತಿಸಿಕೊಳ್ಳುತ್ತಾಳೆ. ಹೀಗೆ ಶಿವನು ಸುಂದರ ವರನ ರೂಪವನ್ನು ತಾಳಿದ ನಂತರ ಶಿವ ಪಾರ್ವತಿಯ ಮದುವೆ ನೆರವೇರುತ್ತದೆ.

ನವೆಂಬರ್‌ನಲ್ಲಿ ಈ ರಾಶಿಯವರಿಗೆ ಶುಕ್ರನ ಜತೆ ಶನಿ ಕೃಪೆ,ಭಾರೀ ಧನಲಾಭ..!

ಚಂದ್ರಘಂಟೆಯ ಪೂಜಾ ವಿಧಿ
ಚಂದ್ರಘಂಟೆಗೆ ಮಲ್ಲಿಗೆ ಹೂವು ಅರ್ಪಿಸಿ ಪೂಜೆ ಮಾಡಿ ಹಾಗೂ ಭಕ್ತಿಯಿಂದ ಧ್ಯಾನವನ್ನು ಮಾಡಿ. ಹಾಗೂ 16 ವಿಧದ ಅರ್ಪಣೆಯನ್ನು ನೀಡಿ, ಆರತಿ ಮಾಡಿ. ಕೆಂಪು ಬಣ್ಣದ ಬಟ್ಟೆಯ ಅಲಂಕಾರ ಮಾಡಿ. ನಿಮ್ಮ ಕುಟುಂಬದ ಶ್ರೇಯಸ್ಸಿಗಾಗಿ ಚಂದ್ರಘಂಟೆಯನ್ನು ಪ್ರಾರ್ಥಿಸಿ.

ಚಂದ್ರಘಂಟಾ ದೇವಿಯ ಪೂಜೆ ಮಾಡುವುದರಿಂದ ಮನಸ್ಸಿನಲ್ಲಿರುವ ಭಯವೆಲ್ಲಾ ನಿವಾರಣೆಯಾಗಿ ಜೀವನದಲ್ಲಿ ಯಶಸ್ಸನ್ನು  ಸಾಧಿಸಬಲ್ಲೆ ಎಂಬ ವಿಶ್ವಾಸ  ಬೆಳೆಯುವುದು. ದೇವಿಯ ಮಸ್ತಕದಲ್ಲಿರುವ ಚಂದ್ರಘಂಟೆಯ ನಾದವು ಋಣಾತ್ಮಕ ಶಕ್ತಿ, ದುಷ್ಟಶಕ್ತಿಗಳನ್ನೆಲ್ಲಾ ದೂರ ಮಾಡುವುದು ಹಾಗಾಗಿ ಚಂದ್ರಘಂಟೆಯ ಪೂಜೆಯನ್ನು ಮಾಡಿದರೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳೆಲ್ಲಾ ದೂರವಾಗಿ ಮನೆ ಶುದ್ಧಿಯಾಗುವುದು.

ಯಾರು ಜೀವನದಲ್ಲಿ ಭರವಸೆಯನ್ನು ಕಳೆದುಕೊಂಡು ವ್ಯವಹಾರದಲ್ಲಿ ಹೊಸ ಹಾದಿಯನ್ನು ತುಳಿಯಲು ಇಚ್ಛಿಸುತ್ತಾರೋ ಅವರು ಚಂದ್ರಘಂಟೆಯ ಪೂಜೆ ಮಾಡಿದರೆ ಅವರು ಸಾಗುವ ದಾರಿಯಲ್ಲಿ ಬೆಳಕನ್ನು ಚೆಲ್ಲಿ, ಯಶಸ್ಸಿನ ಮೆಟ್ಟಿಲೇರಲು ಸಹಕರಿಸುತ್ತಾಳೆ. 

ಬುಧ ಗೋಚರ,ಈ ರಾಶಿಯವರ ಬಾಳಲ್ಲಿ ಹಣವೋ ಹಣ, ವೃತ್ತಿಯಲ್ಲಿ ಅಗಾಧ ಯಶಸ್ಸು

ಚಂದ್ರಘಂಟೆಯ ಮಂತ್ರ
ಓಂ ದೇವೀ ಚಂದ್ರಘಂಟಾಯೈ ನಮಃ ಪಿಂದಾಜ ಪ್ರವರಾರುಧ ಚಂದಕೋಪಸ್ತ್ರಕೈರ್ಯುತ
ಪ್ರಸಾದಂ ತನುತೇ ಮಧ್ಯಮ ಚಂದ್ರಘಂಟತಿ ವಿಶ್ರುತಾ

Follow Us:
Download App:
  • android
  • ios