Asianet Suvarna News Asianet Suvarna News

ರಾಮಮಂದಿರ ಉದ್ಘಾಟನೆಗೆ 6 ದಿನ ಬಾಕಿ; ರಾಮಾಯಣದಲ್ಲಿ ಪ್ರಾಮುಖ್ಯತೆ ಹೊಂದಿದ ಲೇಪಾಕ್ಷಿಗೆ ಪ್ರಧಾನಿ ಮೋದಿ ಭೇಟಿ

ಇಂದು ಲೇಪಾಕ್ಷಿಯ ವೀರಭದ್ರ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥನೆ ಸಲ್ಲಿಸಲಿದ್ದು, ತೆಲುಗಿನ ರಂಗನಾಥ ರಾಮಾಯಣದ ಪದ್ಯಗಳನ್ನು ಕೇಳಲಿದ್ದಾರೆ. ಈ ಲೇಪಾಕ್ಷಿಯ ವಿಶೇಷಗಳೇನು?

PM Modi Visited Lepakshi Today Check Ram-Sita Connection skr
Author
First Published Jan 16, 2024, 2:52 PM IST

ಅಯೋಧ್ಯೆಯ ಭವ್ಯವಾದ ರಾಮ ಜನ್ಮಭೂಮಿ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕೇವಲ 6 ದಿನಗಳಿವೆ. ಇದಕ್ಕೂ ಮುನ್ನ ಇಂದು(ಮಂಗಳವಾರ) ರಾಮಾಯಣದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುವ ಲೇಪಾಕ್ಷಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.

ನಾಸಿಕ್‌ನಲ್ಲಿರುವ ಶ್ರೀ ಕಲಾ ರಾಮ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ನಂತರ ಲೇಪಾಕ್ಷಿಗೆ ಭೇಟಿ ನೀಡಲಿದ್ದಾರೆ. ಕೆಲ ದಿನಗಳ ಹಿಂದೆ ನಾಸಿಕ್‌ನ ಗೋದಾವರಿ ನದಿಯ ದಡದಲ್ಲಿರುವ ಪಂಚವಟಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದರು. ಅವರು ಕಲಾರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು ಮತ್ತು ಮರಾಠಿಯಲ್ಲಿ ರಾಮಾಯಣದಿಂದ ಭಗವಾನ್ ರಾಮನ ಅಯೋಧ್ಯೆ ಆಗಮನಕ್ಕೆ ಸಂಬಂಧಿಸಿದ ಶ್ಲೋಕಗಳನ್ನು ಕೇಳಿದರು.

ರಾಮಮಂದಿರದಲ್ಲಿ ಇಂದಿನಿಂದ ಶುರು ಪೂರ್ವಾಭಾವಿ ಆಚರಣೆಗಳು; 7 ದಿನಗಳ ವಿಧಿ ವಿಧಾನಗಳೇನು?

ಆಂಧ್ರಪ್ರದೇಶ ಮತ್ತು ಕೇರಳಕ್ಕೆ ಪ್ರಧಾನಿ ಮೋದಿಯವರ ಎರಡು ದಿನಗಳ ಭೇಟಿಯ ಭಾಗವಾಗಿ ಅತ್ಯಂತ ಪೂಜ್ಯ ದೇವಾಲಯಕ್ಕೆ ಭೇಟಿ ನೀಡಲಾಗಿದೆ. ಅವರು ಆಂಧ್ರಪ್ರದೇಶದಲ್ಲಿ ಕಸ್ಟಮ್ಸ್, ಪರೋಕ್ಷ ತೆರಿಗೆಗಳು ಮತ್ತು ಮಾದಕ ದ್ರವ್ಯಗಳ ರಾಷ್ಟ್ರೀಯ ಅಕಾಡೆಮಿಯ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ. ಭಾರತೀಯ ಕಂದಾಯ ಸೇವೆಯ 74 ಮತ್ತು 75 ನೇ ಬ್ಯಾಚ್‌ಗಳ ಅಧಿಕಾರಿ ಟ್ರೈನಿಗಳು ಮತ್ತು ಭೂತಾನ್‌ನ ರಾಯಲ್ ಸಿವಿಲ್ ಸರ್ವಿಸ್‌ನ ಅಧಿಕಾರಿ ಟ್ರೈನಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಲೇಪಾಕ್ಷಿ ಸ್ಥಳಮಹಿಮೆ
ರಾಮಾಯಣ ಹಾಗೂ ಶಿವನ ಕತೆಗಳಿಗೆ ಕುರುಹಾಗಿ ನಿಂತಿರುವ ಲೇಪಾಕ್ಷಿ ಅದ್ಭುತ ಶಿಲ್ಪಕಲೆಗಳ ತವರೂರು. ಆ೦ಧ್ರಪ್ರದೇಶದ ಅನ೦ತಪುರ ಜಿಲ್ಲೆಯಲ್ಲಿರುವ ಹಿ೦ದೂಪುರ್ ನಿ೦ದ 15 ಕಿ.ಮೀ. ಗಳಷ್ಟು ದೂರದಲ್ಲಿ ಮತ್ತು ಬೆ೦ಗಳೂರು ನಗರದಿ೦ದ ಸರಿಸುಮಾರು 120 ಕಿ.ಮೀ. ಗಳಷ್ಟು ದೂರದಲ್ಲಿದೆ ಲೇಪಾಕ್ಷಿ. 
ತಾಯಿ ಸೀತೆಯನ್ನು ಅಪಹರಿಸುತ್ತಿದ್ದ ರಾವಣನೊಂದಿಗೆ ಹೋರಾಡಿದ ಜಟಾಯು ತೀವ್ರವಾಗಿ ಗಾಯಗೊಂಡ ನಂತರ ಬಿದ್ದ ಸ್ಥಳವೇ ಲೇಪಾಕ್ಷಿ ಎಂದು ಹೇಳಲಾಗುತ್ತದೆ. ಸಾಯುವ ಹಂತದಲ್ಲಿ ಇಲ್ಲಿ ಬಿದ್ದ ಜಟಾಯುವನ್ನು ನೋಡಿದ ರಾಮ, ಸ್ಥಳೀಯ ಭಾಷೆಯಲ್ಲಿ ಎದ್ದೇಳು ಪಕ್ಷಿಯೇ ಎನ್ನಲು 'ಲೇ ಪಕ್ಷಿ' ಎನ್ನುತ್ತಾನೆ. ನಂತರದ ದಿನಗಳಲ್ಲಿ ಇದೇ ಲೇಪಾಕ್ಷಿಯಾಗುತ್ತದೆ. ಅಲ್ಲಿಗೆ ಭೇಟಿ ನೀಡಿದ ರಾಮನಿಗೆ ಮಾ ಸೀತೆಯನ್ನು ರಾವಣನು ದಕ್ಷಿಣಕ್ಕೆ ಕರೆದೊಯ್ದನೆಂದು ಹೇಳಿ ಜಟಾಯುವು ಇದೇ ಜಾಗದಲ್ಲಿ ಮೋಕ್ಷವನ್ನು ಪಡೆಯುತ್ತಾನೆ.

ಋಷ್ಯಶೃಂಗರಿಗೂ ಅಯೋಧ್ಯೆ ರಾಮನಿಗೂ ಅವಿನಾಭಾವ ಸಂಬಂಧ: ಋಷ್ಯಶೃಂಗೇಶ್ವರು ನಡೆಸಿದ ಯಾಗದ ಫಲದಿಂದಲೇ ಶ್ರೀರಾಮ ಜನನ!

ಇನ್ನು ಇಲ್ಲಿ 8 ಅಡಿ ಉದ್ದದ ಪಾದದ ಗುರುತೊಂದನ್ನು ಕಾಣಬಹುದಾಗಿದ್ದು, ಇದು ಸೀತಾ ಮಾತೆಯ ಪಾದದ ಗುರುತು ಎಂದು ನಂಬಲಾಗಿದೆ. ಗುಪ್ತ ಮೂಲದಿಂದ ಬಂದ ನೀರು ಇಲ್ಲಿ ಯಾವಾಗಲೂ ಇರುತ್ತದೆ.  

ಲೇಪಾಕ್ಷಿ ವೀರಭದ್ರಸ್ವಾಮಿ ದೇವಾಲಯದಲ್ಲಿ ಶಿವ ಪಾರ್ವತಿ ವಿವಾಹಕ್ಕಾಗಿ ನಿರ್ಮಿಸಿದ ಕಲ್ಯಾಣ ಮಂಟಪವನ್ನೂ ಕಾಣಬಹುದು. ಆದರೆ, ಕಾರಣಾಂತರಗಳಿಂದ ಇಲ್ಲಿ ವಿವಾಹವಾಗಲಿಲ್ಲ. ಇನ್ನು ಇಲ್ಲಿರುವ ಏಳು ಹೆಡೆಯ ನಾಗವು ಶಿವಲಿಂಗಕ್ಕೆ ಸುತ್ತಿರುವಂಥ ನಾಗಲಿಂಗ ಶಿಲ್ಪವು ಜನಪ್ರಿಯವಾಗಿದೆ. ಇವೆಲ್ಲವುಗಳ ಹೊರತಾಗಿ ದೇಶದಲ್ಲೇ ಅತಿ ದೊಡ್ಡ ನಂದಿ ವಿಗ್ರಹವನ್ನು ಕೂಡಾ ಇಲ್ಲಿ ಕಾಣಬಹುದು. 

Follow Us:
Download App:
  • android
  • ios